ಬ್ರೇಕಿಂಗ್ ನ್ಯೂಸ್
23-01-23 04:00 pm Udupi Correspondent ಕರಾವಳಿ
ಉಡುಪಿ, ಜ.23 : ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಾರೆಂದು ಭಾರೀ ಸುದ್ದಿಗೆ ಕಾರಣವಾಗಿದ್ದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇದೀಗ ತಮ್ಮ ಸ್ಪರ್ಧೆಯನ್ನು ಅಧಿಕೃತ ಘೋಷಣೆ ಮಾಡಿದ್ದಾರೆ. ಕಾರ್ಕಳ ಕ್ಷೇತ್ರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಾರು ಏನು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದಿದ್ದಾರೆ.
ಮುತಾಲಿಕ್ ಸ್ಪರ್ಧೆಯಿಂದಾಗಿ ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ತುರುಸಿನ ಪೈಪೋಟಿ ಸಾಧ್ಯತೆಯಿದೆ. ಇಂಧನ ಸಚಿವ ಸುನೀಲ್ ಕುಮಾರ್ ಅವರು ಮೂರು ಬಾರಿ ಗೆದ್ದಿರುವ ಕ್ಷೇತ್ರದಲ್ಲಿ ಸುನಿಲ್ ಅವರೇ ಫೇವರಿಟ್. ಆದರೆ ಪ್ರಬಲ ಹಿಂದುತ್ವದ ನೆಲೆಯಲ್ಲಿ ಚುನಾವಣೆ ಕಣಕ್ಕಿಳಿದಿರುವ ಮುತಾಲಿಕ್ ಕಾರಣದಿಂದ ಕಾರ್ಕಳದಲ್ಲಿ ತ್ರಿಕೋನ ಸ್ಪರ್ಧೆ ಕಂಡುಬಂದಿದೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿರುವ ಮುತಾಲಿಕ್, ನಾನು ಬಿಜೆಪಿ ವಿರೋಧಿಯಲ್ಲ. ಮೊದಲಿನಿಂದಲೂ ಮೋದಿ ಪರ, ಹಿಂದುತ್ವದ ಪರವಾಗಿದ್ದೇನೆ, ಗೆದ್ದ ನಂತರವೂ ನನ್ನ ಬೆಂಬಲ ಬಿಜೆಪಿಗೆ ಇರಲಿದೆ. ನನ್ನ ಸ್ಪರ್ಧೆ ಏನಿದ್ದರೂ ಭ್ರಷ್ಟರ ವಿರುದ್ದ, ಹಿಂದು ವಿರೋಧಿಗಳ ವಿರುದ್ಧ ಅಷ್ಟೇ ಇರುತ್ತದೆ ಎಂದರು.
ಮುತಾಲಿಕ್ ಸ್ಪರ್ಧೆಯಿಂದ ಕಾಂಗ್ರೆಸ್ ಗೆ ಲಾಭವಾಗಲಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಆ ರೀತಿಯ ಪ್ರಶ್ನೆಯೇ ಇಲ್ಲ. ನಾನು ಎಂದಿಗೂ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿಕೊಂಡು ಬಂದವನು. ಇಲ್ಲಿ ನಾನು ಗೆಲ್ಲಬೇಕು, ಹಿಂದುತ್ವ ಗೆಲ್ಲಬೇಕು ಅಷ್ಟೇ ಎಂದರು.
ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಗೋಹತ್ಯೆಯಾಗುವ ಜಾಗ ಇದ್ದರೆ ಅದು ಕಾರ್ಕಳ ಎನ್ನುತ್ತಿದ್ದಾರೆ. ಇವರಿಗೆ ಗೋ ಮಾತೆಯ ರಕ್ಷಣೆಗಾಗಿ ಅಧಿಕಾರ ಕೊಟ್ಟರೆ ಗೋಮಮಾತೆ ರಕ್ಷಣೆ ಆಗುತ್ತಿಲ್ಲ. ಗೋವು ಇಲ್ಲದೆ ಹಿಂದುತ್ವ ಇರುವುದಿಲ್ಲ. ಪ್ರಬಲ ಮಿನಿಸ್ಟರ್ ಆಗಿದ್ದರೂ ಸುನಿಲ್ ಕುಮಾರ್ ಹಿಂದುಗಳ ಪರವಾಗಿಲ್ಲ ಎಂದರೆ ಹೇಗೆ. ಇದಕ್ಕಾಗಿ ಇಲ್ಲಿಯೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.
Chief of right wing outfit Sri Ram Sene Pramod Muthalik on Monday said he has decided to contest the upcoming Assembly polls in Karnataka from Karkala Assembly constituency to fight against corruption and for the cause of Hindutva. The Karnataka Assembly elections are due by May. “Under pressure from karyakartas, I decided to contest as an independent candidate from the Karkala Assembly segment. Already, I have travelled across the constituency seven or eight times, and everyone is of the opinion that Muthalik should contest from here as there have been injustice to Hindus and rampant corruption,” Muthalik said.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm