ಬ್ರೇಕಿಂಗ್ ನ್ಯೂಸ್
28-01-23 12:12 pm Mangalore Correspondent ಕರಾವಳಿ
ಉಳ್ಳಾಲ, ಜ.28: ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಎಸ್ ಮತ್ತು ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರು ದಾಖಲಿಸಿರುವ ದೂರಿಗೆ ಸ್ಪಂದಿಸದ ಹಾಗೂ ಮಾಹಿತಿ ಹಕ್ಕಿನಡಿ ಕೇಳಿದ ದಾಖಲೆಗಳನ್ನು ಒದಗಿಸದ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ವಿರುದ್ಧ ಕರ್ನಾಟಕ ಲೋಕಾಯುಕ್ತ ನೋಟೀಸು ಜಾರಿಗೊಳಿಸಿದೆ.
ಸಾಮಾಜಿಕ ಕಾರ್ಯಕರ್ತ ಉಳ್ಳಾಲದ ಮೊಹಮ್ಮದ್ ಕಬೀರ್ ಎಂಬವರು ಉಳ್ಳಾಲ ಠಾಣೆ ಇನ್ಸ್ ಪೆಕ್ಟರ್, ಎಸ್ಐ ಮತ್ತು ಪೊಲೀಸ್ ಕಮೀಷನರ್ ವಿರುದ್ಧ ದಾಖಲಿಸಿರುವ ದೂರಿನಂತೆ ನೋಟೀಸು ಜಾರಿ ಮಾಡಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿಗಳಾದ ಇನ್ಸ್ ಪೆಕ್ಟರ್ ಸಂದೀಪ್, ಎಸ್ಐ ಪ್ರದೀಪ್ ಠಾಣೆಗೆ ಬರುವ ಸಾರ್ವಜನಿಕರಲ್ಲಿ ಹಣ ವಸೂಲು ಮಾಡಲು ಹಮೀದ್ ಎಂಬ ಬ್ರೋಕರನ್ನು ಇಟ್ಟುಕೊಂಡಿದ್ದಾರೆ, ಗಾಂಜಾ ಮಾಫಿಯಾ, ಮರಳು ದಂಗೆಕೋರರು ಮತ್ತು ಹೊಟೇಲ್ ಮಾಲೀಕರಿಗೆ ಹಣದ ಬೇಡಿಕೆಯನ್ನಿಟ್ಟು ಜನರ ನೆಮ್ಮದಿ ಹಾಳು ಮಾಡಿದ್ದಾರೆ. ಇಬ್ಬರು ಅಧಿಕಾರಿಗಳು ಉಳ್ಳಾಲಕ್ಕೆ ಬಂದ ಬಳಿಕ ಕೋಟ್ಯಂತರ ಸಂಪಾದಿಸಿದ್ದಾರೆ. ಈ ಕುರಿತು ಇಮೇಲ್ ಮೂಲಕ ಇಲಾಖೆಯ ಮುಖ್ಯಸ್ಥರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮತ್ತು ಲೋಕಾಯುಕ್ತ, ಎಸಿಬಿ, ಎಡಿಜಿಪಿ, ದ.ಕ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಹೀಗೆ ಎಲ್ಲರಿಗೂ ದೂರು ನೀಡಿದರೂ ಯಾವುದೇ ಸ್ಪಂದನೆಯಿಲ್ಲ. ಪೊಲೀಸರ ಭ್ರಷ್ಟಾಚಾರದ ಬಗ್ಗೆ ದೂರು ನೀಡಿರುವುದಕ್ಕೆ ತನಗೆ ಬೆದರಿಕೆಯನ್ನು ಹಾಕಲಾಗಿದೆ. ಅಲ್ಲದೆ ದೂರು ನೀಡಿದ ಬಗ್ಗೆ ತನ್ನನ್ನೇ ವಿಚಾರಣೆ ನಡೆಸಲಾಗುತ್ತಿದೆ. ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟಗಾರರಿಗೆ ಕಡಿವಾಣವಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದರು.

![]()
ಕದ್ದ ಚಿನ್ನವನ್ನೇ ಲೂಟಿಗೈದ ಉಳ್ಳಾಲ ಪೊಲೀಸರು !
ಕಾಸರಗೋಡು ಜಿಲ್ಲೆಯ ಹೊಸಂಗಡಿಯಲ್ಲಿ ವರ್ಷದ ಹಿಂದೆ ರಾಜಧಾನಿ ಜುವೆಲ್ಲರಿಯನ್ನು ದರೋಡೆಗೈದ ಕಳ್ಳರಿಂದ ಜಪ್ತಿ ಮಾಡಿದ ಚಿನ್ನ ಮತ್ತು ಬೆಳ್ಳಿಯನ್ನು ಇನ್ಸ್ ಪೆಕ್ಟರ್ ಸಂದೀಪ್ ನ್ಯಾಯಾಲಯಕ್ಕೆ ನೀಡದೆ ಅವರ ಮನೆಗೆ ಸಾಗಿಸಿರುವ ಮಾಹಿತಿ ಸಿಕ್ಕಿದೆ. ಚಿನ್ನದಂಗಡಿ ದರೋಡೆ ನಡೆಸಿದವರನ್ನು ಐದು ಕಿ.ಮೀ ದೂರ ಸಂಚರಿಸುವಾಗಲೇ ಅವರನ್ನು ತಲಪಾಡಿ ಗಡಿಭಾಗದಲ್ಲಿ ಉಳ್ಳಾಲ ಪೊಲೀಸರು ಬಂಧಿಸಿದ್ದರು. ಆರೋಪಿಗಳು ಕೆಎ-02-ಎಎ-8239 ಸಂಖ್ಯೆಯ ಇನೋವಾ ಕಾರನ್ನು ಬಾಡಿಗೆಗೆ ಪಡೆದು ಬಾಬಾಬುಡಾನ್ ಗಿರಿ ತೆರಳುವುದಾಗಿ ತಿಳಿಸಿದ್ದರು. ಕಾರಿನಲ್ಲಿ ಜಿಪಿಎಸ್ ಅಳವಡಿಸಿದ್ದರಿಂದ ಕಾರು ಕೇರಳದ ಕಡೆಗೆ ಹೋಗಿದ್ದು ಸಂಶಯಗೊಂಡು ಮಾಲೀಕ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡಿದ್ದ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್, ಎಸ್ಐ ಪ್ರದೀಪ್ ಮತ್ತು ಪೊಲೀಸರು ಕೇರಳ ಗಡಿಭಾಗದಲ್ಲಿ ಬಂಧಿಸಿದ್ದರು.
ಈ ವೇಳೆ 14 ಕೆ.ಜಿ ಬೆಳ್ಳಿ, ಬೆಲೆಬಾಳುವ ವಾಚ್ ಹಾಗೂ ಲಕ್ಷಾಂತರ ಮೌಲ್ಯದ ಚಿನ್ನ ಮತ್ತು ನಗದು ಇತ್ತು. ಇದನ್ನು ಉಳ್ಳಾಲ ಪೊಲೀಸರು ಮಂಜೇಶ್ವರ ಪೊಲೀಸರಿಗೆ ಒಪ್ಪಿಸದೆ ಇಬ್ಬರು ಹಂಚಿಕೊಂಡಿದ್ದು ಮಂಗಳೂರು ನ್ಯಾಯಾಲಯದಲ್ಲಿ ಪ್ರಕರಣದ ವರದಿ ಒಪ್ಪಿಸಿದ್ದಾರೆ. ಚಿನ್ನದ ಅಂಗಡಿಯ ಮಾಲೀಕರು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರು ಚಾಲಕ ಹಾಗೂ ಅಂಗಡಿ ಮಾಲೀಕರನ್ನು ವಿಚಾರಣೆ ನಡೆಸಿದರೆ ಸಂಪೂರ್ಣ ಮಾಹಿತಿ ಹೊರಬರಬಹುದು.

ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ಮಂಗಳೂರು ನಗರಕ್ಕೆ ಬಂದ ನಂತರ ಭ್ರಷ್ಟಾಚಾರ ಮಿತಿಮೀರಿದೆ. ಅವರ ಬೆಂಬಲದ ಕಾರಣ ಮಂಗಳೂರಿನ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಭ್ರಷ್ಟಾಚಾರ ವ್ಯಾಪಾರದಂತೆ ನಡೆಯುತ್ತಿದೆ. ಇದರಿಂದ ನಿಷ್ಠಾವಂತ ಪೊಲೀಸ್ ಅಧಿಕಾರಿಗಳು ತಲೆ ತಗ್ಗಿಸುವಂತಾಗಿದೆ. ಮೂವರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದರೆ ಅಕ್ರಮ ಸಂಪತ್ತನ್ನು ಪತ್ತೆ ಹಚ್ಚಬಹುದು. ದೂರುದಾರರಿಗೆ ಜೀವಕ್ಕೆ ಬೆದರಿಕೆಯಿರುವುದರಿಂದ ಗೌಪ್ಯತೆಯನ್ನು ಕಾಪಾಡುವಂತೆ ನಿವೇದಿಸಿಕೊಂಡಿದ್ದಾರೆ. ಇಮೇಲ್ ಪ್ರತಿ, ಆನ್ಲೈನ್ ನ್ಯೂಸ್ ಪ್ರತಿ, ಪೊಲೀಸ್ ಹಿಂಬರಹ ಪ್ರತಿ, ಗಣಿ ಮತ್ತು ಭೂವಿಜ್ಞಾನ ಜ್ಞಾಪನಾ ಪತ್ರಗಳನ್ನು ಲಗತ್ತೀಕರಿಸಲಾಗಿದೆ. ಅಧಿಕಾರ ದುರುಪಯೋಗ ಮತ್ತು ಲಂಚದ ಆಪಾದನೆ ಮಾಡಿರುವುದರಿಂದ ಕರ್ನಾಟಕ ಲೋಕಾಯುಕ್ತ ಕಲಂ 9ರಡಿ ತನಿಖೆ ನಡೆಸುವುದು ಸೂಕ್ತ ಎಂದು ಕರ್ನಾಟಕ ಲೋಕಾಯುಕ್ತ ಬೆಂಗಳೂರು ವಿಭಾಗದಿಂದ ನೀಡಿರುವ ನೋಟೀಸಿನಲ್ಲಿ ತಿಳಿಸಿದೆ. ಅಲ್ಲದೆ, ಈ ಬಗ್ಗೆ 2023ರ ಫೆ.14ರ ಒಳಗೆ ಸೂಕ್ತ ದಾಖಲೆಗಳೊಂದಿಗೆ ಪೊಲೀಸ್ ಕಮೀಷನರ್ ಶಶಿಕುಮಾರ್ ಲೋಕಾಯುಕ್ತ ತನಿಖೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
Ullal inspector sandeep and psi pradeep accused of Corruption, Lokayukta issues notice to commissioner Shashi Kumar and has asked him to be present to the investigation on Feb 14 at its office. Corruption in the police department has drastically increased after the posting of Shahi Kumar as commissioner alleges complainant.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm