ಬ್ರೇಕಿಂಗ್ ನ್ಯೂಸ್
30-01-23 05:11 pm Mangalore Correspondent ಕರಾವಳಿ
ಮಂಗಳೂರು, ಜ.30 : ಇನ್ ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ತನ್ನಲ್ಲಿ ನಿನ್ನ ಖಾಸಗಿ ವಿಡಿಯೋ ಇದೆಯೆಂದು ಬ್ಲಾಕ್ಮೇಲ್ ಮಾಡಿದ್ದು ಇದರಿಂದ ಬೆದರಿದ ಬಿಕಾಂ ವಿದ್ಯಾರ್ಥಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಧರ್ಮಸ್ಥಳ ಗ್ರಾಮದ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19) ಮೃತಪಟ್ಟ ವಿದ್ಯಾರ್ಥಿ. ದ್ವಿತೀಯ ವರ್ಷದ ಬಿಕಾಂ ಕಲಿಯುತ್ತಿದ್ದ ಹರ್ಷಿತ್ ಗೆ ಇನ್‌ಸ್ಟಾಗ್ರಾಂ ಮೂಲಕ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕಕ್ಕೆ ಬಂದಿದ್ದ. ಹರ್ಷಿತ್ ಆತನೊಂದಿಗೆ ವಿಡಿಯೋ ಕರೆ ಮಾಡಿ ಮಾತಾಡುತ್ತಿದ್ದ.
ಈ ನಡುವೆ, ಹರ್ಷಿತ್ ಬಳಿ ನಿನ್ನ ವೈಯಕ್ತಿಕ ವಿಡಿಯೋ ನನ್ನ ಬಳಿ ಇದ್ದು, ಅದನ್ನು ವೈರಲ್ ಮಾಡುತ್ತೇನೆ, ತನಗೆ 11,000 ರೂ. ಕೊಡಬೇಕೆಂದು ಅಪರಿಚಿತ ಬೇಡಿಕೆ ಇಟ್ಟಿದ್ದ. ಇದಕ್ಕೆ ಹರ್ಷಿತ್ ಜ.23ರ ವರೆಗೆ ಅವಕಾಶ ಕೇಳಿದ್ದು, ಜ.24 ಮಧ್ಯಾಹ್ನದ ವರೆಗೂ ಹಣ ಹೊಂದಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಬೆದರಿದ ಹರ್ಷಿತ್ ತನ್ನ ವೈಯಕ್ತಿಕ ವಿಡಿಯೋ ವೈರಲ್ ಮಾಡಿದರೆ ಮಾನ ಹೋಗಬಹುದೆಂಬ ಭಯದಿಂದ ಜ.24 ರಂದು ಮಧ್ಯಾಹ್ನ ಇಲಿ ಪಾಷಾಣ ಸೇವಿಸಿದ್ದ. ಮನೆಯಲ್ಲಿ ಅಸ್ವಸ್ಥನಾಗಿದ್ದ ಹರ್ಷಿತ್ ನನ್ನು ಚಿಕಿತ್ಸೆಗಾಗಿ ಉಜಿರೆಯ ಬೆನಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದ್ದರು. ಅದರಂತೆ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದು ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜ.29 ರಂದು ಸಂಜೆ ಹರ್ಷಿತ್ ಮೃಪಟ್ಟಿದ್ದಾನೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old student in Belthangady allegedly died by suicide after being blackmailed over an objectionable video by an Instagram friend. The deceased has been identified as Harshit (19 years old), a resident of Ashok Nagar of Dharmasthala.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm