ಬ್ರೇಕಿಂಗ್ ನ್ಯೂಸ್
31-01-23 09:49 pm Mangalore Correspondent ಕರಾವಳಿ
ಮಂಗಳೂರು, ಜ.31: ದಕ್ಷಿಣ ಕನ್ನಡ ಎಸ್ಪಿ ಸೇರಿದಂತೆ ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಭಗವಾನ್ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು ಖಾಲಿಯಾದ ಇಲ್ಲಿನ ಹುದ್ದೆಗೆ ಗುಪ್ತಚರ ವಿಭಾಗದಲ್ಲಿದ್ದ ಅಮಾತೆ ವಿಕ್ರಮ್ ಅವರನ್ನು ನಿಯೋಜನೆ ಮಾಡಲಾಗಿದೆ.
2015ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ಒಂದು ವರ್ಷದ ಹಿಂದೆ ಮಂಗಳೂರಿಗೆ ಬಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಉತ್ತಮ ಹೆಸರು ಮಾಡಿದ್ದಾರೆ. ಪ್ರಚಾರ ಬಯಸದೆ, ಹಲವು ಪ್ರಕರಣಗಳನ್ನು ಸದ್ದಿಲ್ಲದೆ ಭೇದಿಸಿದ್ದು ಸೋನವಾಣೆ ಹೆಗ್ಗಳಿಕೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಎಬ್ಬಿಸಿದ್ದರೂ, ಎನ್ಐಎ ಜೊತೆ ಸೇರಿ ಒಂದೇ ವಾರದಲ್ಲಿ ಪ್ರಕರಣದ ಜಾಡು ಪತ್ತೆ ಮಾಡಿದ್ದರು. ಅಲ್ಲದೆ, 15 ದಿನಗಳಲ್ಲಿ ಎಂಟು ಮಂದಿಯನ್ನು ಬಂಧಿಸುವಲ್ಲಿ ಸುಳ್ಯ ಮತ್ತು ಬಂಟ್ವಾಳ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿತ್ತು. ಅದಕ್ಕೆ ಸೂಕ್ತ ಮಾರ್ಗದರ್ಶನ ಮಾಡಿದ್ದು ಋಷಿಕೇಶ್ ಸೋನವಾಣೆ.
ಇದೇ ವೇಳೆ, ಬೀದರ್ ಜಿಲ್ಲಾ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗ ಮಾಡಲಾಗಿದೆ. ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ ಚೆನ್ನಬಸವಣ್ಣ ಲಂಗೋಟಿ ಅವರನ್ನು ಬೀದರ್ ಜಿಲ್ಲೆಯ ಎಸ್ಪಿಯಾಗಿ ಮಾಡಲಾಗಿದೆ.
Mangalore DK honest and vibrant IPS officer SP Sonawane Rishikesh has been transferred as SP of Intelligence, Vikram Amathe IPS has been appointed as the new SP of Dakshina Kannada.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 04:05 pm
Mangalore Correspondent
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm