ಬ್ರೇಕಿಂಗ್ ನ್ಯೂಸ್
01-02-23 11:23 am Mangalore Correspondent ಕರಾವಳಿ
ಪುತ್ತೂರು, ಫೆ.1: ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಪ್ರವಾಸದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಷಾ ಕರಾವಳಿಯತ್ತ ಕಣ್ಣಿಟ್ಟಿದ್ದಾರೆ. ಫೆ.11ರಂದು ಅಮಿತ್ ಷಾ ಪುತ್ತೂರಿಗೆ ಆಗಮಿಸಲಿದ್ದು ಕ್ಯಾಂಪ್ಕೋ ನೇತೃತ್ವದಲ್ಲಿ ನಡೆಯುವ ಬೃಹತ್ ಸಹಕಾರಿ ಸಮಾವೇಶದಲ್ಲಿ ಪಾಲ್ಗೊಳಲಿದ್ದಾರೆ. ಕಾರ್ಯಕ್ರಮದಲ್ಲಿ 1 ಲಕ್ಷ ಜನರನ್ನು ಸೇರಿಸಲು ಬಿಜೆಪಿ ಸಿದ್ಧತೆ ನಡೆಸಿದೆ.
ಕ್ಯಾಂಪ್ಕೋ ಸಂಸ್ಥೆಯ 50ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರು ಆಗಮಿಸುತ್ತಿದ್ದಾರೆ. ಹೀಗಾಗಿ ಕ್ಯಾಂಪ್ಕೋ ನೇತೃತ್ವದಲ್ಲಿ ಬೃಹತ್ ಸಹಕಾರಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಫೆ 11 ರಂದು ಸಂಜೆ 3 ಗಂಟೆಗೆ ಪುತ್ತೂರಿನ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆ ಆವರಣದ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಅದೇ ದಿನ ಗೃಹ ಸಚಿವರು ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಗೂ ಭೇಟಿ ನೀಡುವ ಕಾರ್ಯಕ್ರಮವಿದೆ.
ಸದ್ಯಕ್ಕೆ ಅಮಿತ್ ಷಾ ಕಾರ್ಯಕ್ರಮದ ಸಂಪೂರ್ಣ ಪಟ್ಟಿ ಸಿದ್ಧವಾಗಿಲ್ಲ. ಸಹಕಾರಿ ಸಚಿವರೂ ಆಗಿರುವುದರಿಂದ ಸಹಕಾರಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 5.30ಕ್ಕೆ ವಿಶೇಷ ವಿಮಾನದಲ್ಲಿ ನಿರ್ಗಮಿಸಲಿದ್ದಾರೆ. ಅಂತಿಮ ಹಂತದ ಬದಲಾವಣೆಯಿದ್ದರೆ ಕೇಂದ್ರ ಗೃಹ ಸಚಿವಾಲಯದಿಂದ ಪರಿಷ್ಕೃತ ಪ್ರವಾಸ ಪಟ್ಟಿ ಬರಬಹುದು ಎಂದು ಪುತ್ತೂರು ಬಿಜೆಪಿ ಪ್ರಮುಖರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ರೈತರು ಮತ್ತು ಕಾರ್ಯಕರ್ತರನ್ನು ಸೇರಿಸುವ ನಿಟ್ಟಿನಲ್ಲಿ ಸುಳ್ಯ, ಪುತ್ತೂರು, ಬೆಳ್ತಂಗಡಿ ಭಾಗದ ಪ್ರತೀ ಗ್ರಾಮ ಮಟ್ಟದಲ್ಲೂ ಅಭಿಯಾನ ನಡೆಯಲಿದೆ ಎಂದವರು ತಿಳಿಸಿದ್ದಾರೆ.
BJP Amith Shah to visit Puttur on Feb 11, one lakh people expected.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 04:05 pm
Mangalore Correspondent
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm