ಬ್ರೇಕಿಂಗ್ ನ್ಯೂಸ್
02-02-23 12:51 pm Mangalore Correspondent ಕರಾವಳಿ
ಪುತ್ತೂರು, ಫೆ.2 : ತನ್ನ ಪತ್ನಿಯ ಜೊತೆ ವಿಟ್ಲದ ಬಿಜೆಪಿ ಮುಖಂಡನೊಬ್ಬ ಕಾರಿನಲ್ಲಿ ತೆರಳುತ್ತಿದ್ದುದನ್ನು ಗಮನಿಸಿದ ಮಹಿಳೆಯ ಪತಿರಾಯ ಕಾರನ್ನು ಚೇಸ್ ಮಾಡಿ ರೆಡ್ ಹ್ಯಾಂಡ್ ಹಿಡಿದಿದ್ದಲ್ಲದೆ, ಬಿಜೆಪಿ ಮುಖಂಡನಿಗೆ ಧರ್ಮದೇಟು ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಈ ವೇಳೆ, ಬಿಜೆಪಿ ಮುಖಂಡ ಮಹಿಳೆ ಹಾಗೂ ಕಾರನ್ನು ಬಿಟ್ಟು ಪಕ್ಕದ ಗುಡ್ಡದಲ್ಲಿ ಪರಾರಿಯಾಗಿದ್ದಾನೆ. ಘಟನೆಯ ವಿಡಿಯೋ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯ ಪತಿ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದವರಾಗಿದ್ದು ಪುತ್ತೂರು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ತನ್ನ ಪತ್ನಿ (29) ಹಾಗೂ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ, ಪುಣಚ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್ (44) ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ದೂರುದಾರ ವ್ಯಕ್ತಿ ಮಹಿಳೆಯನ್ನು ಮದುವೆಯಾಗಿ 9 ವರ್ಷವಾಗಿದ್ದು, ಅವರಿಗೆ ಎಂಟು ವರ್ಷದ ಹೆಣ್ಣು ಮಗಳಿದ್ದಾಳೆ. ಪತ್ನಿ ಕೆಲವು ವರ್ಷಗಳಿಂದ ತನ್ನ ಜತೆ ಇರದೇ ಪ್ರತ್ಯೇಕ ವಾಸಿಸುತ್ತಿದ್ದಾಳೆ. ಆದರೇ ನಾವು ವಿವಾಹ ವಿಚ್ಛೇದನ ಪಡೆದುಕೊಂಡಿಲ್ಲ. ನಮ್ಮಿಬ್ಬರ ವಿವಾಹ ಊರ್ಜಿತದಲ್ಲಿದೆಯೆಂದು ದೂರಿನಲ್ಲಿ ತಿಳಿಸಿದ್ದಾರೆ.
ಜ.31ರಂದು ಪತ್ನಿ ಸಮೀಪದ ಜಾತ್ರೆಗೆಂದು ಹೋದವಳನ್ನು ಹರಿ ಪ್ರಸಾದ್ ಅನೈತಿಕ ಸಂಬಂಧ ದುರುದ್ದೇಶದಿಂದ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕಾರನ್ನು ನನ್ನ ಮೋಟಾರ್ ಬೈಕ್ನಲ್ಲಿ ಪುತ್ತೂರಿನಿಂದ ಹಿಂಬಾಲಿಸಿದ್ದೇನೆ. ಸುಳ್ಯ ತಾಲೂಕಿನ ಜಾಲ್ಸೂರು ಎಂಬಲ್ಲಿ ಕಾರನ್ನು ತಡೆಯಲು ಪ್ರಯತ್ನಿಸಿದಾಗ ಹರಿಪ್ರಸಾದ್ ಬೈಕ್ ಮೇಲೆ ವಾಹನ ಚಲಾಯಿಸಿ ಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ತಪ್ಪಿಸಿಕೊಂಡು ಕಾರನ್ನು ತಡೆದಿದ್ದು, ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಕೂಡಲೇ ಹರಿ ಪ್ರಸಾದ್ ಕಾರು ಹಾಗೂ ನನ್ನ ಪತ್ನಿಯನ್ನು ಬಿಟ್ಟು ಪರಾರಿಯಾಗಿರುತ್ತಾನೆಂದು ದೂರಿನಲ್ಲಿ ಆರೋಪಿಸಲಾಗಿದೆ.
Puttur illicit affair with married woman, BJP leader Hariprasad Yadav caught red handed, thrashed by husband in Sullia. Video of this has now gone viral on social media.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm