ಬ್ರೇಕಿಂಗ್ ನ್ಯೂಸ್
06-02-23 10:52 pm Mangalore Correspondent ಕರಾವಳಿ
ಮಂಗಳೂರು, ಫೆ.6: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆ ಮಾಡುವ ಹೆಸರಲ್ಲಿ ಅಧ್ಯಯನ ಸಮಿತಿ ಮಾಡಿದ್ದೇ ತುಳುವರಿಗೆ ಮಾಡಿದ ಅವಮಾನ ಎಂದು ವಿಧಾನಸಭೆ ವಿಪಕ್ಷ ನಾಯಕ ಯುಟಿ ಖಾದರ್ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ತುಳು ಭಾಷೆಗೆ ಅದರದ್ದೇ ಆದ ಇತಿಹಾಸವಿದೆ. ಈ ಭಾಷೆಯ ಬಗ್ಗೆ ಅಧ್ಯಯನ ಮಾಡಿ ವರದಿ ಕೊಡುವ ಅವಶ್ಯಕತೆ ಏನು? ಇದು ಜನರಿಗೆ ಮೋಸ ಮಾಡುವ ತಂತ್ರ. ಬಿಜೆಪಿ ಶಾಸಕರು ತುಳುನಾಡಿನ ಜನರಿಗೆ ಮೋಸ ಮಾಡಿದ್ದಾರೆ. ಕರಾವಳಿಯಲ್ಲಿ ಬಿಜೆಪಿ ಶಾಸಕರು ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾದರೂ ಎರಡನೇ ರಾಜ್ಯ ಭಾಷೆಯನ್ನಾಗಿ ಮಾಡಲಿಲ್ಲ. ಈಗ ಚುನಾವಣೆ ಹತ್ತಿರ ಬರೋವಾಗ ಜನರ ಆಕ್ರೋಶ ತಪ್ಪಿಸಲು ಮೋಸ ಮಾಡುತ್ತಿದ್ದಾರೆ. ಸರ್ಕಾರ ಅಧ್ಯಯನ ಸಮಿತಿ ಮಾಡಿರೋದೇ ತುಳು ಭಾಷೆಗೆ ಮಾಡಿರುವ ಅವಮಾನ ಎಂದು ಹೇಳಿದರು.

ಕೇಂದ್ರ ಬಜೆಟ್ ನಲ್ಲಿ ಕರಾವಳಿಗೆ ಒಂದೇ ಒಂದು ಯೋಜನೆಯಾಗಲೀ, ಅನುದಾನವನ್ನಾಗಲೀ ನೀಡಿಲ್ಲ. ಶಿರಾಡಿ ಘಾಟಿಗೆ ಸುರಂಗ ಮಾರ್ಗ ಅಂತ ಹಲವು ವರ್ಷಗಳಿಂದ ಹೇಳುತ್ತಿದ್ದಾರೆ. ಆದರೆ ಯಾವುದೇ ಬಜೆಟ್ ನಲ್ಲಿ ಈ ಯೋಜನೆಗೆ ಹಣ ಇಟ್ಟಿಲ್ಲ. ರೈಲ್ವೇ ಪ್ರತ್ಯೇಕ ವಿಭಾಗ ಕೇಳಿದ್ದರೂ ಸರ್ಕಾರದ ಸ್ಪಂದನೆ ಇಲ್ಲ. ಬಂದರು, ರಸ್ತೆಗೆ ಯಾವ ಅನುದಾನವನ್ನೂ ಸರ್ಕಾರ ನೀಡಿಲ್ಲ. ಶಿರಾಡಿ ಘಾಟ್ ರಸ್ತೆಯ ಬಗ್ಗೆ ಸರ್ಕಾರ ಸ್ಪಷ್ಟವಾಗಿ ಜನರಿಗೆ ತಿಳಿಸಲಿ, ನಮಗೆ ಟನಲ್ ಬೇಡ, ರಸ್ತೆಗೆ ತೇಪೆ ಆದರೂ ಹಾಕಿ. ಅದೂ ಆಗಲ್ಲ ಅಂದ್ರೆ ನಾವು ನಮ್ಮ ಅನುದಾನ ಬಳಸಿ ತೇಪೆ ಕಾರ್ಯ ಮಾಡುತ್ತೇವೆ ಎಂದು ಯುಟಿ ಖಾದರ್ ತಿರುಗೇಟು ನೀಡಿದರು.

ಶಿರಾಡಿ ಘಾಟಿಯಿಂದ ಅಮಿತ್ ಷಾ ಕರೆತನ್ನಿ
ಫೆ.11 ರಂದು ಮಂಗಳೂರಿನಲ್ಲಿ ಅಮಿತ್ ಷಾ ರೋಡ್ ಷೋ ಹಮ್ಮಿಕೊಂಡಿರುವ ಬಗ್ಗೆ ಖಾದರ್ ವ್ಯಂಗ್ಯವಾಡಿದ್ದು ಅಮಿತ್ ಷಾ ಕರಾವಳಿಗೆ ಬರುವುದಕ್ಕೆ ಸ್ವಾಗತ ಮಾಡುತ್ತೇನೆ. ಆದರೆ ಅವರನ್ನು ಬೆಂಗಳೂರಿನಿಂದ ರಸ್ತೆ ಮಾರ್ಗದ ಮೂಲಕ ಮಂಗಳೂರಿಗೆ ಕರೆ ತರಲಿ. ಘಾಟಿ ರಸ್ತೆಯಲ್ಲಿ ರೋಡ್ ಷೋ ಮಾಡಿ ರಸ್ತೆಯ ಹೊಂಡ -ಗುಂಡಿಗಳನ್ನು ಲೆಕ್ಕ ಮಾಡಲಿ. ಅಲ್ಲಿಂದ ಗೃಹ ಸಚಿವರನ್ನು ಕರೆತಂದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸೆಲ್ಯೂಟ್ ಹೊಡೆಯುತ್ತೇನೆ ಎಂದು ಸವಾಲು ಹಾಕಿದರು.
MLA U T Khader said, "The state government is betraying the people of Tulunadu by considering the people's proposal to make Tulu as second language of the state after Kannada during the time of elections."
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm