ಬ್ರೇಕಿಂಗ್ ನ್ಯೂಸ್
10-02-23 08:18 pm Mangalore Correspondent ಕರಾವಳಿ
ಉಳ್ಳಾಲ, ಫೆ.10 : ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಹೊಟೇಲ್ ಉದ್ಯೋಗಿ ಹಾಗೂ ಝೊಮ್ಯಾಟೋ ಡೆಲಿವರಿ ಬಾಯ್ ಓರ್ವರು ಸಾವನ್ನಪ್ಪಿದ ಘಟನೆ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ಸಂಭವಿಸಿದೆ.
ಮೂಲತಃ ಕ್ಯಾಲಿಕಟ್ ನಿವಾಸಿ, ಕುತ್ತಾರು ಸಂತೋಷ ನಗರದ ಬಾಡಿಗೆ ಮನೆ ನಿವಾಸಿ ಅನಿಲ್ ಕುಮಾರ್ (41) ಮೃತರು. ಅನಿಲ್ ಝೊಮ್ಯಾಟೋ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಹಾಗೂ ಸಂಜೆ ಹೊತ್ತಲ್ಲಿ ದೇರಳಕಟ್ಟೆಯ ಜ್ಯೂಸ್ ಮ್ಯಾಜಿಕ್ ಹೊಟೇಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮಂಜನಾಡಿಯ ಕಲ್ಕಟ್ಟ ಮಾರ್ಗವಾಗಿ ಫುಡ್ ಡೆಲಿವರಿ ಆರ್ಡರ್ ಹಿಡಿದುಕೊಂಡು ತೆರಳುವ ಸಂದರ್ಭ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಕೇರಳ ನೋಂದಣಿಯ ಕಾರನ್ನ ಅಬೂಬಕರ್ ಸಿದ್ದೀಕ್ ಎಂಬವರು ಚಲಾಯಿಸುತ್ತಿದ್ದರೆನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಅನಿಲ್ ಸ್ಥಳೀಯ ಮನೆಯ ಕಂಪೌಂಡಿಗೆ ಎಸೆಯಲ್ಪಟ್ಟು ಬಳಿಕ ರಸ್ತೆಗೆ ಉರುಳಿ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅಪಘಾತ ನಡೆದ ಕಾರಿನಲ್ಲೇ ಗಾಯಾಳುವನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಡರಾತ್ರಿ 1.45ರ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೆ ಅನಿಲ್ ಸಾವನ್ನಪ್ಪಿದ್ದಾರೆ.
ಸಹೋದ್ಯೋಗಿಯ ಸಾವಿಗೆ ಕಂಬನಿ ಮಿಡಿದ ಸಹೋದ್ಯೋಗಿಗಳು ಹಾಗೂ ಮಾಲೀಕರು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆ ಎದುರುಗಡೆ ಇರುವ ಜ್ಯೂಸ್ ಮ್ಯಾಜಿಕ್, ಐಸ್ ಮ್ಯಾಜಿಕ್ ಮತ್ತು ಬರ್ಗರ್ ಪಾಯಿಂಟ್ ಹೆಸರಿನ ಮೂರು ಹೊಟೇಲ್ ಗಳನ್ನು ಇಂದು ಇಡೀ ದಿನ ಬಂದ್ ನಡೆಸಿ ಗೌರವ ಸಲ್ಲಿಸಿದ್ದಾರೆ. ಮೃತ ಅನಿಲ್ ಕುಮಾರ್ ತಾಯಿ ಕೆಲ ತಿಂಗಳ ಹಿಂದಷ್ಟೇ ಮೃತಪಟ್ಟಿದ್ದರು. ಒಂಟಿಯಾಗಿದ್ದ ಅನಿಲ್ ಅವರಿಗೆ ವಿವಾಹವಾಗಲು ಹೊಟೇಲ್ ಮಾಲೀಕ ಸಾಜಿದ್ ಅವರು ಹುಡುಗಿಯನ್ನು ಹುಡುಕಿದ್ದರು. ಇದೇ ಖುಷಿಯಲ್ಲಿ ಫೆ.8 ರಂದು ಕ್ಯಾಲಿಕಟ್ ನ ದೇವಸ್ಥಾನಗಳಿಗೆ ತೆರಳಿದ್ದ ಅನಿಲ್ ಕುಮಾರ್ ನಿನ್ನೆ ಸಂಜೆಯಷ್ಟೇ ಹೊಟೇಲಿಗೆ ವಾಪಸ್ಸಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Zomato delivery boy dies in a road accident after a car rams over him at Manajanady in Ullal. The deceased has been identified as Anil Kumar (41).
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm