ಬ್ರೇಕಿಂಗ್ ನ್ಯೂಸ್
13-02-23 08:37 pm Mangalore Correspondent ಕರಾವಳಿ
ಉಳ್ಳಾಲ, ಫೆ.13: ನೇತ್ರಾವತಿ ನದಿಯಲ್ಲಿ ಪಂಜರ ಕೃಷಿ ಪದ್ಧತಿ ಮೂಲಕ ಸಾಕುತ್ತಿದ್ದ ಮೀನುಗಳ ಮಾರಣಹೋಮ ನಡೆದಿರುವ ಘಟನೆ ಉಳ್ಳಾಲದ ಉಳಿಯದಲ್ಲಿ ನಡೆದಿದೆ. ಫಿಶ್ ಮೀಲ್ ಕಾರ್ಖಾನೆಗಳಿಂದ ಬಿಡುವ ವಿಷಯುಕ್ತ ತ್ಯಾಜ್ಯ ನದಿನೀರಿನಲ್ಲಿ ಮಿಶ್ರಣಗೊಂಡ ಹಿನ್ನೆಲೆಯಲ್ಲಿ ಘಟನೆ ಸಂಭವಿಸಿರುವ ಬಗ್ಗೆ ಮಾಲೀಕರು ಶಂಕೆ ವ್ಯಕ್ತಪಡಿಸಿದ್ದಾರೆ.
ಉಳಿಯ ನಿವಾಸಿ ಬ್ಲೇರಾ ಡಿಸೋಜ ಎಂಬವರಿಗೆ ಸೇರಿದ ಸಾವಿರಾರು ಸಾಕು ಮೀನುಗಳು ಸಾವನ್ನಪ್ಪಿವೆ. 3.5 ಲಕ್ಷ ರೂಪಾಯಿ ಬೆಲೆಬಾಳುವ ಮೀನುಗಳು ಸಾವನ್ನಪ್ಪಿದ್ದು ನಷ್ಟ ಅನುಭವಿಸಿದ್ದಾರೆ. ಮುದ್ರಾ ಯೋಜನೆಯಡಿ ಸಾಲ ಮಾಡಿ ಬ್ಲೇರಾ ಅವರು ಮೀನಿನ ಕೃಷಿ ಆರಂಭಿಸಿದ್ದರು. ಎರಡು ವರ್ಷಗಳ ಹಿಂದೆ ವೃತ್ತಿಯನ್ನು ಆರಂಭಿಸಿದ ಬ್ಲೇರಾ ಅವರಿಗೆ ಇದೀಗ ಎರಡನೇ ಬಾರಿಯ ಮೀನಿನ ಕೃಷಿ ಸಂಪೂರ್ಣ ನಷ್ಟವನ್ನು ಉಂಟು ಮಾಡಿದೆ.


2022 ರ ನವೆಂಬರ್ ತಿಂಗಳಲ್ಲಿ ಈ ಬಾರಿಯ ಪಂಜರ ಕೃಷಿಯ ಮರಿಗಳನ್ನು ಹಾಕಲಾಗಿತ್ತು. ಪ್ಯಾಂಪೆನೋ ತಳಿಯ 4,500 ಮರಿಗಳು ಬೃಹತ್ ಗಾತ್ರದಲ್ಲಿ ಬೆಳೆದಿತ್ತು. ಒಂದೂವರೆ ವರ್ಷದಿಂದ ಮೀನು ಯಾವುದೇ ತೊಂದರೆಯಿಲ್ಲದೆ ಇತ್ತು. ಫೆ.11 ರಂದು ಬೆಳಗ್ಗೆ ಬ್ಲೇರಾ ಅವರು ನದಿ ಬದಿಗೆ ತೆರಳಿದಾಗ 22 ಮೀನುಗಳು ಸಾವನ್ನಪ್ಪಿದ್ದವು. ಆನಂತರ ಇಂದು ಪಂಜರದಲ್ಲಿದ್ದಂತಹ ಎಲ್ಲಾ ಮೀನುಗಳು ಸಾವನ್ನಪ್ಪಿದ್ದು ನದಿ ನೀರಿನಲ್ಲಿ ತೇಲುತ್ತಿತ್ತು. ಜೊತೆಗೆ ಪಚ್ಚಿಳೆ(ಚಿಪ್ಪಿನ ಮೀನು) ಕೂಡ ಬಾಯ್ತೆರೆದಿದೆ. ನದಿ ನೀರು ಮಲಿನದಿಂದ ಘಟನೆ ಸಂಭವಿಸಿರುವ ಶಂಕೆ ಇದೆ.


ಕಾರ್ಖಾನೆಯಿಂದ ಹೊರಬಿಡುವ ರಾಸಾಯನಿಕ ಮಿಶ್ರಿತ ತ್ಯಾಜ್ಯ ನೀರಿನಿಂದ ಘಟನೆ ಸಂಭವಿಸಿರುವ ಶಂಕೆ ಇದ್ದು, ಎಕ್ಕೂರು ಮೀನುಗಾರಿಕಾ ವಿಜ್ಞಾನ ವಿಶ್ವವಿದ್ಯಾನಿಲಯದ ವಿಜ್ಞಾನಿ ಹಾಗೂ ಮೀನುಗಾರಿಕಾ ಇಲಾಖೆಯವರು ಭೇಟಿ ನೀಡಿ ನೀರಿನ ಸ್ಯಾಂಪಲ್ ಅನ್ನು ಪರೀಕ್ಷೆಗೆ ಕೊಂಡೊಯ್ದಿದ್ದಾರೆ.
A large number of fish reared by pisciculture in Netravati river have died. The owners have suspected that poisonous effluents which are being released into the river have contaminated the water resulting in their death. The fish being reared by Blara D’ Souza worth Rs 2.5 lacs have died. Blara D’ Souza had started rearing the fish after taking a loan from Mudra bank two years ago.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm