ಬ್ರೇಕಿಂಗ್ ನ್ಯೂಸ್
19-02-23 09:24 am HK News Desk ಕರಾವಳಿ
ಉಳ್ಳಾಲ, ಫೆ.19 :ತಾಯಿ ಗದರಿದ್ದಕ್ಕೆ ಕೀಟ ನಾಶಕ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪಿಯು ಕಲಿಯುತ್ತಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ.
ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯ ದಂಪತಿಯ ಹಿರಿಯ ಪುತ್ರಿ ಧನ್ಯ(17) ಮೃತ ವಿದ್ಯಾರ್ಥಿನಿ.
ಧನ್ಯ ನಗರದ ರಾಮಕೃಷ್ಣ ಕಾಲೇಜಿನಲ್ಲಿ ದ್ವಿತೀಯ ಪಿ.ಯು ವಿದ್ಯಾರ್ಥಿನಿಯಾಗಿದ್ದಳು. ಫೆ.14 ರಂದು ಮಧ್ಯಾಹ್ನ ಧನ್ಯ ತಾಯಿ ಭವ್ಯ ಮನೆಗೆ ತೆರಳಿದಾಗ ಮನೆಯಲ್ಲಿ ಮಗಳು ಇರಲಿಲ್ಲ. ಮಧ್ಯಾಹ್ನ 3 ಗಂಟೆಗೆ ಧನ್ಯಾ ಮನೆಗೆ ಮರಳಿದ್ದು ಈ ವೇಳೆ ತಾಯಿ ಮಗಳಲ್ಲಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿದ್ದು ಗೆಳತಿ ಮನೆಗೆ ಓದಲು ತೆರಳಿದ್ದೆ ಎಂದು ಧನ್ಯ ಹೇಳಿದ್ದಾಳೆ. ಗೆಳತಿ ಮನೆಗೆ ಹೋಗುವಾಗ ಫೋನ್ ಕರೆ ಏಕೆ ಮಾಡಿಲ್ಲ ಎಂದು ತಾಯಿ ಗದರಿದ್ದು ಎರಡು ಏಟು ಹೊಡೆದಿದ್ದರಂತೆ. ಬಳಿಕ ತಾಯಿ ಸಮೀಪದ ಮನೆಗೆ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಧನ್ಯ ಮನೆಯೊಳಗಿದ್ದ ಗೆದ್ದಲು ಹೊಡೆಯುವ ಕೀಟ ನಾಶಕವನ್ನ ಸೇವಿಸಿ ತೀರಾ ಅಸ್ವಸ್ಥಳಾಗಿದ್ದಾಳೆ, ಆಕೆಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಅಂಗಾಂಗ ನಿಷ್ಕ್ರಿಯಗೊಂಡ ಧನ್ಯಾ ಕೋಮಾ ಸ್ಥಿತಿಗೆ ತಲುಪಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ.
ಮೃತ ಧನ್ಯ ತಂದೆ ಸೋಮನಾಥ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ತಾಯಿ ಭವ್ಯ ಉಪ್ಪಿನ ಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿ ಸಂಜೆ ಹೊತ್ತಲ್ಲಿ ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ದಂಪತಿಯ ಇನ್ನೋರ್ವ ಕಿರಿಯ ಮಗ ಭುವನ್ ಹೈಸ್ಕೂಲ್ ಓದುತ್ತಿದ್ದಾನೆ.
Mangalore 17 year old girl consumes poison in Kumpala commits suicide, dies in hospital. The deceased has been identified as Dhanya. Because Mother questioned her of not picking the call it is said she took this step.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 09:19 pm
Mangalore Correspondent
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm