ಬ್ರೇಕಿಂಗ್ ನ್ಯೂಸ್
20-02-23 05:34 pm Mangalore Correspondent ಕರಾವಳಿ
ಉಳ್ಳಾಲ, ಫೆ.20 : ಒಂಟಿಯಾಗಿ ವಾಸವಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಅಸಹಜವಾಗಿ ಮೃತಪಟ್ಟು ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ನಡೆದಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಪಾವೂರು ಹರೇಕಳ ದೇರಡ್ಕ ನಿವಾಸಿ ಜೀನಿ ಡಿಸೋಜ ಎಂಬವರ ಪತ್ನಿ ಮಗ್ಗಿ ಮೊಂತೇರೊ (62) ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಫೆ.16ರಂದು ಪುತ್ರಿ ಮನೆಗೆ ಬಂದು ತಾಯಿ ಜತೆಗೆ ಮಾತನಾಡಿ ತೆರಳಿದ್ದರು. ಆನಂತರ ಮೂರು ದಿನಗಳಿಂದ ಮೊಬೈಲ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪುತ್ರಿ ಇಂದು ಮನೆಗೆ ಬಂದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮನೆಯೊಳಗೆ ಅಡುಗೆ ಕೋಣೆಯ ಒಲೆಯ ಸಮೀಪದಲ್ಲೇ ಮೃತದೇಹ ಬಿದ್ದ ಸ್ಥಿತಿಯಲ್ಲಿದೆ. ಅಸೌಖ್ಯದಿಂದ ಕೆಳಗೆ ಬಿದ್ದು ತಲೆಗೆ ಗಾಯಗೊಂಡು ಸಾವನ್ನಪ್ಪಿರುವ ಶಂಕೆಯನ್ನು ಕೊಣಾಜೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಶವ ಪೂರ್ತಿ ಕೊಳೆತಿದ್ದು ಹುಳ ಉಂಟಾಗಿದೆ. ಇದರಿಂದ ಸಾವು ಸಂಭವಿಸಿ ಮೂರ್ನಾಲ್ಕು ದಿನ ಕಳೆದಿರುವಂತೆ ಕಂಡಿದೆ.
ಸ್ಥಳೀಯರ ಜೊತೆಗೆ ಹೆಚ್ಚು ಮಾತನಾಡದೇ ಒಬ್ಬಂಟಿಯಾಗಿರುತ್ತಿದ್ದರು. ಮೂರು ಎಕರೆ ವ್ಯಾಪ್ತಿಯ ಜಾಗದ ಮಧ್ಯೆ ಒಂಟಿ ಮನೆಯಲ್ಲಿ ವಾಸಿಸುತ್ತಿದ್ದರು. ಮಕ್ಕಳಿದ್ದರೂ ತಾಯಿ ಜೊತೆಗೆ ಇರುತ್ತಿರಲಿಲ್ಲ. ಅಪರೂಪಕ್ಕೆ ಮಾತನಾಡುವಾಗ ಗುಳಿಗ ದೈವದ ವಿಚಾರವನ್ನೇ ಮಗ್ಗಿ ಮೊಂತೇರೋ ಮಾತನಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಗುಳಿಗ ದೈವದ ಬಗ್ಗೆ ನಂಬಿಕೆ ಹೊಂದಿದ್ದರೋ, ಮಾನಸಿಕ ಭ್ರಾಂತಿಯಿಂದ ಹಾಗೆ ವರ್ತಿಸುತ್ತಿದ್ದರೋ ಗೊತ್ತಿಲ್ಲ ಎನ್ನುತ್ತಾರೆ, ಸ್ಥಳೀಯರು. ಅವರ ಪತಿ ಹತ್ತು ವರ್ಷಗಳ ಹಿಂದೆ ತೀರಿಕೊಂಡಿದ್ದರು. ಮಕ್ಕಳು ದೂರವುಳಿದ ನಂತರ ಒಂಟಿಯಾಗಿದ್ದರು. ಸ್ಥಳಕ್ಕಾಗಮಿಸಿದ ಕೊಣಾಜೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
The mortal remains of a home alone woman were found in a decomposed state in the kitchen of her house at Deradka near Harekala on the outskirts of the city. The deceased is identified as Maggi Monteiro (62), wife of Jeeni D’Souza, a resident of Deradka, Harekala.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm