ಬ್ರೇಕಿಂಗ್ ನ್ಯೂಸ್
21-10-20 08:43 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದ ತನಿಖೆಗೆ ಬಂಟ್ವಾಳ ನಗರ, ಗ್ರಾಮಾಂತರ ಮತ್ತು ಬೆಳ್ತಂಗಡಿ ಇನ್ ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ದ.ಕ. ಜಿಲ್ಲಾ ಎಸ್ಪಿ ಬಿ.ಎಂ. ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ನಿನ್ನೆ ರಾತ್ರಿ 9ರಿಂದ 12 ಗಂಟೆ ಮಧ್ಯೆ ಘಟನೆ ನಡೆದಿರುವ ಸಾಧ್ಯತೆಯಿದೆ. ಇಂದು ಮಧ್ಯಾಹ್ನ ಫ್ಲಾಟ್ ನಲ್ಲಿ ವಾಸನೆ ಬರುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಅದರಂತೆ, ಇಲ್ಲಿ ಬಂದು ಪರಿಶೀಲನೆ ನಡೆಸಿದ್ದೇವೆ. ಮನೆಯ ಡೋರ್ ಲಾಕ್ ಆಗಿತ್ತು. ಕಿಟಕಿಯಲ್ಲಿ ನೋಡಿದಾಗ, ಮನೆಯೊಳಗೆ ರಕ್ತದ ಕಲೆಗಳು ಕಂಡುಬಂದಿದ್ದವು. ಹೀಗಾಗಿ ಬಾಗಿಲು ಒಡೆದು ನೋಡಿದಾಗ ಸುರೇಂದ್ರ ಬಂಟ್ವಾಳ್ ಹತ್ಯೆಯಾಗಿದ್ದು ಕಂಡುಬಂದಿದೆ. ದೇಹದಲ್ಲಿ ಹಲವು ಇರಿತದ ಗಾಯಗಳಿದ್ದವು ಎಂದು ಎಸ್ಪಿ ತಿಳಿಸಿದ್ದಾರೆ.



ಫ್ಲಾಟ್ ಅನ್ನು ಸ್ವಂತಕ್ಕೆ ಖರೀದಿಸಿದ್ದರು. ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು. ಸುರೇಂದ್ರ ಜೊತೆಗೆ ಒಬ್ಬ ಫ್ರೆಂಡ್ ಇದ್ದ ಎನ್ನುವ ಮಾಹಿತಿ ಸಿಕ್ಕಿದೆ, ಅದರ ಬಗ್ಗೆ ತನಿಖೆ ಮಾಡುತ್ತೇವೆ. ಸ್ಥಳದಲ್ಲಿ ಸಾಕ್ಷಿಗಳನ್ನು ಸಂಗ್ರಹಿಸಿದ್ದೇವೆ. ಅವರು ಎಲ್ಲೆಲ್ಲಿ ಬಿಸಿನೆಸ್ ಹೊಂದಿದ್ದರು, ಅದನ್ನೂ ಪರಿಶೀಲನೆ ನಡೆಸುತ್ತಿದ್ದೇವೆ. ಶಂಕೆ ಕಂಡುಬಂದರೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಖಾಸಾ ದೋಸ್ತ್ ಹಂತಕನಾದನೇ ?
ಸುರೇಂದ್ರ ಬಂಟ್ವಾಳ್, ಭಂಡಾರಿಬೆಟ್ಟಿನ ಫ್ಲಾಟಿನಲ್ಲಿ ಹೆಚ್ಚಾಗಿ ಒಬ್ಬರೇ ಇರುತ್ತಿದ್ದರು. ಕೆಲವೊಮ್ಮೆ ಗೆಳೆಯ ಸತೀಶ್ ಕುಮಾರ್ ಎನ್ನುವಾತ ಫ್ಲಾಟಿಗೆ ಬರುತ್ತಿದ್ದ. ನಿನ್ನೆ ರಾತ್ರಿಯೂ ಸುರೇಂದ್ರ 9.30ರ ಸುಮಾರಿಗೆ ಫ್ಲಾಟಿಗೆ ಬಂದಿದ್ದು, ಜೊತೆಗೆ ಸತೀಶ್ ಕುಮಾರ್ ಕೂಡ ಇದ್ದ ಎನ್ನುವ ಮಾಹಿತಿ ಸಿಕ್ಕಿದೆ. ಆದರೆ, ತಡರಾತ್ರಿ ಸತೀಶ್ ಮತ್ತು ಆತನ ಜೊತೆಗೆ ಇನ್ನೊಬ್ಬ ಫ್ಲಾಟಿನಿಂದ ತೆರಳಿದ್ದರು ಎನ್ನಲಾಗುತ್ತಿದೆ. ಸುರೇಂದ್ರ ಬಂಟ್ವಾಳ್ ಹತ್ಯೆಯ ವಿಚಾರ ಗೊತ್ತಾದ ಬಳಿಕ ಸತೀಶ್ ಕುಮಾರ್ ಫೋನ್ ಸ್ವಿಚ್ ಆಫ್ ಆಗಿದ್ದು ಆತನ ಮೇಲೆ ಸಂಶಯ ಹೆಚ್ಚುವಂತೆ ಮಾಡಿದೆ. 2018ರಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ತಲವಾರು ಜಳಪಿಸಿದ ಪ್ರಕರಣದಲ್ಲಿ ಸುರೇಂದ್ರ ಬಂಟ್ವಾಳ್ ಜೊತೆಗೆ ಸತೀಶ್ ಕುಮಾರ್ ಕೂಡ ಇದ್ದ. ಪ್ರಕರಣದ ಬಳಿಕ ಎಸ್ಕೇಪ್ ಆಗಿ ಕಾಸರಗೋಡಿನ ಕುಂಬ್ಲೆಯಲ್ಲಿ ಅಡಗಿಕೊಂಡಿದ್ದ ಸುರೇಂದ್ರ ಮತ್ತು ಸತೀಶ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಈಗ ಈತನೇ ತಿರುಗಿ ಬಿದ್ದನೇ ಅಥವಾ ಯಾರಾದ್ರೂ ಸುಪಾರಿ ಕೊಟ್ಟು ಕೊಲ್ಲಿಸಿದ್ದಾರೆಯೇ ಅನ್ನುವ ಅನುಮಾನ ದಟ್ಟವಾಗಿದೆ.
Crime Report Video:
Three Special teams have been formed to nab the gang that has brutally killed Surendra Bantwal said Dakshina Kannada SP B.M. Laxmi Prasad. A close aide of Surendra is missing he also added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am