ಬ್ರೇಕಿಂಗ್ ನ್ಯೂಸ್
21-02-23 10:06 pm Mangalore Correspondent ಕರಾವಳಿ
ಮಂಗಳೂರು, ಫೆ.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ಹೊರತುಪಡಿಸಿ ಉಳಿದ ಏಳು ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬಿಲ್ಲವರ ಮತಗಳೇ ನಿರ್ಣಾಯಕ. ಹಾಗಾಗಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ ಮೂರು ಸೀಟುಗಳನ್ನು ಬಿಲ್ಲವರಿಗೆ ನೀಡಬೇಕೆಂದು ಕಾಂಗ್ರೆಸ್ ಮುಖಂಡರ ಬಳಿಗೆ ನಿಯೋಗ ಹೋಗಿದ್ದೇವೆ. ಮೂರು ಸೀಟು ನೀಡಬೇಕೆಂದು ನಾವು ಮಾಧ್ಯಮದ ಮೂಲಕ ಒತ್ತಾಯ ಮಾಡುತ್ತೇವೆ ಎಂದು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಬಿಲ್ಲವ ಮುಖಂಡರು ಒತ್ತಾಯಿಸಿದ್ದಾರೆ.
ಗೆಜ್ಜೆಗಿರಿ ಕ್ಷೇತ್ರ ಸಮಿತಿಯಲ್ಲಿ ಗುರುತಿಸಿರುವ ಉಲ್ಲಾಸ್ ಕೋಟ್ಯಾನ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಬಿಲ್ಲವರಿಗೆ ಸೀಟು ಕೊಡಬೇಕೆಂದು ಒತ್ತಾಯ ಮಾಡುತ್ತೇವೆ. ಈಗಾಗಲೇ ಈ ಬಗ್ಗೆ ನಾವು ನಿಯೋಗ ತೆರಳಿ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಮನವರಿಕೆ ಮಾಡಿದ್ದೇವೆ. ಪಕ್ಷದಲ್ಲಿ ಗುರುತಿಸಿರುವ ನಮ್ಮ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಇದೆ. ನಮ್ಮ ಸಮುದಾಯದ ನಾಯಕರಿಗೆ ಟಿಕೆಟ್ ನೀಡಿದಲ್ಲಿ ಅವರನ್ನು ಗೆಲ್ಲಿಸಲು ಶಕ್ತಿ ಮೀರಿದ ಪ್ರಯತ್ನವನ್ನು ಸಮುದಾಯದ ವತಿಯಿಂದ ಮಾಡುತ್ತೇವೆ ಎಂದು ಹೇಳಿದರು.
ಈ ಹಿಂದೆ ಜನಾರ್ದನ ಪೂಜಾರಿಯವರಿಗೆ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು. ಬಿಲ್ಲವರನ್ನು ಪ್ರತಿನಿಧಿಸುವ ಜನಾರ್ದನ ಪೂಜಾರಿ ಇದ್ದರು. ಕಳೆದ ಬಾರಿ ಅದನ್ನು ಬೇರೆಯವರಿಗೆ ನೀಡಲಾಗಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಬ್ಬರಿಗೆ ಮಾತ್ರ ಬಿಲ್ಲವರಿಗೆ ಅವಕಾಶ ನೀಡಲಾಗಿತ್ತು. ಹಾಗಾಗಿ ಈ ಬಾರಿ ಚುನಾವಣೆಗೆ ಮೊದಲೇ ಆಗ್ರಹ ಮಾಡುತ್ತಿದ್ದೇವೆ ಎಂದು ಹೇಳಿದರು.
ನೀವು ಕಾಂಗ್ರೆಸ್ ಮೇಲೆ ಮಾತ್ರ ಒತ್ತಾಯ ಮಾಡುತ್ತೀರಿ ಯಾಕೆ, ಬಿಜೆಪಿ ಮೇಲೆ ಮಾಡಲ್ವಾ ಎಂದು ಕೇಳಿದ್ದಕ್ಕೆ, ನಾವು ಈಗಾಗಲೇ ಕಾಂಗ್ರೆಸ್ ನಾಯಕರಿಗೆ ಮನವಿ ನೀಡಿದ್ದೇವೆ. ನಾವು ಕಾಂಗ್ರೆಸ್ ಪಕ್ಷದಲ್ಲಿ ಪದಾಧಿಕಾರಿ ಆಗಿರುವುದರಿಂದ ಬಿಜೆಪಿ ಬಗ್ಗೆ ಮಾತನಾಡುವುದಿಲ್ಲ. ಅವರು ಕೊಡುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಕೊಡಬೇಕು ಎಂದು ಆಗ್ರಹ ಮಾಡುತ್ತೇವೆ. ಇಂಥ ಕ್ಷೇತ್ರ ಎಂಬುದನ್ನೂ ಹೇಳುವುದಿಲ್ಲ. ಯಾವುದಾದ್ರೂ ಮೂರು ಕ್ಷೇತ್ರದಲ್ಲಿ ಸೀಟು ಕೊಡಬೇಕೆಂದು ಹೇಳುತ್ತೇವೆ ಎಂದರು. ಸೀಟು ಕೊಡದೇ ಇದ್ದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆಗೆ, ನಾವು ಈ ಬಗ್ಗೆ ಮಾಧ್ಯಮದಲ್ಲಿ ಹೇಳಲು ಆಗುವುದಿಲ್ಲ ಎಂದರು.
ಧನಂಜಯ ಮಟ್ಟು ಮೂಲ್ಕಿ, ಯೋಗೀಶ್ ಕುಮಾರ್ ಬೆಳ್ತಂಗಡಿ, ಗಣೇಶ್ ಪೂಜಾರಿ ಗುರುಪುರ ಇದ್ದರು.
Three seats must be given to the Billava community in Mangalore for the coming election requests Congress Billava leaders.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 09:19 pm
Mangalore Correspondent
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm