ಬ್ರೇಕಿಂಗ್ ನ್ಯೂಸ್
22-02-23 08:24 pm Mangalore Correspondent ಕರಾವಳಿ
ಮಂಗಳೂರು,ಫೆ.22: ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯಿಂದ ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಯನ್ನು 2023ನೇ ಸಾಲಿಗೆ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‍ಗೆ 11,750 ರೂ.ಗಳಂತೆ ಖರೀದಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರಗಳನ್ನು ತೆರೆಯಲಾಗಿದೆ.
ಉಂಡೆ ಕೊಬ್ಬರಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು 2023ರ ಮಾರ್ಚ್ 12ರೊಳಗೆ ನೋಂದಾಯಿಸಿ ನೋಂದಣಿ ಚೀಟಿ ಪಡೆಯಬೇಕು. 2022-23ನೇ ಸಾಲಿನ ಪಹಣಿ ಪತ್ರ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿರಬೇಕು, ರೈತರ ಬಳಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಪ್ರೂಟ್ಸ್ ನಲ್ಲಿ ಯಾವುದಾದರೂ ಮಾಹಿತಿ ಲಭ್ಯವಿಲ್ಲದಿದ್ದಲ್ಲಿ, ತಪ್ಪಿದ್ದಲ್ಲಿ ರೈತರು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು. ಆಧಾರ್ ಕಾರ್ಡ್, ಬ್ಯಾಂಕ್ ಖಾತೆ (ಆಧಾರ್ ಕಾರ್ಡ್‍ನೊಂದಿಗೆ ಜೋಡಣೆಗೊಂಡ) ಪುಸ್ತಕದ ನಕಲು ಪ್ರತಿ, ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿ ಉತ್ಪನ್ನವನ್ನು ಕೇಂದ್ರಕ್ಕೆ ಮಾರಲು ತರುವುದು.
ಪ್ರತಿ ಎಕರೆಗೆ 6 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ನಿಗದಿತ ಅವಧಿಯೊಳಗೆ ನೋಂದಣಿಗೊಂಡ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. ಉಂಡೆ ಕೊಬ್ಬರಿ ಉತ್ಪನ್ನವನ್ನು 2023ರ ಜುಲೈ 27ರ ವರೆಗೆ ಬೆಳಗ್ಗೆ 8ರಿಂದ ಸಂಜೆ 6 ಗಂಟೆಯ ವರೆಗೆ ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು.
ತಾಲೂಕು, ಖರೀದಿ ಕೇಂದ್ರ ಹಾಗೂ ಸ್ಥಳ, ಖರೀದಿ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವವರ ಹೆಸರು ಹಾಗೂ ಅವರ ಮೊಬೈಲ್ ಸಂಖ್ಯೆಯ ವಿವರಗಳು ಕ್ರಮವಾಗಿ ಇಂತಿವೆ:
ಮಂಗಳೂರು ತಾಲೂಕಿನ ಮಂಗಳೂರಿನ ಪದವು ಶಕ್ತಿನಗರ ಕೇಂದ್ರದ ವಿರೇಂದ್ರ ಎಸ್-9663758820, ಮೂಡಬಿದ್ರೆ ತಾಲೂಕಿನ ಮೂಡಬಿದ್ರೆಯ ಅಲಂಗಾರು ಕೇಂದ್ರದ ಚೇತನ್ ನಾಯಕ್ ಎಂ.ಎಸ್-9739392423, ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿರುವ ಟಿ.ಎ.ಪಿ.ಸಿ.ಎಂ.ಎಸ್. ಆವರಣ ಕೇಂದ್ರ ವಿರೇಂದ್ರ ಎಸ್. – 9663758820, ಬೆಳ್ತಂಗಡಿ ತಾಲೂಕಿನ ಎ.ಪಿ.ಎಂ.ಸಿ ಕೇಂದ್ರ, ಪುತ್ತೂರು ತಾಲೂಕಿನ ಎ.ಪಿ.ಎಂ.ಸಿ ಕೇಂದ್ರ ಹಾಗೂ ಸುಳ್ಯ ತಾಲೂಕಿನ ಎ.ಪಿ.ಎಂ.ಸಿ ಕೇಂದ್ರದ ಸಂಪತ್ – 9449864424, ಮಂಗಳೂರು ತಾಲೂಕಿನ ಬೈಕಂಪಾಡಿ ಮಾರುಕಟ್ಟೆ ಪ್ರಾಂಗಣ ಕೇಂದ್ರದ ಚೇತನ್ ನಾಯಕ್ ಎಂ.ಎಸ್. – 9739392423 ಅವರನ್ನು ಸಂಪರ್ಕಿಸಬಹುದು.
ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಯಾವುದೇ ಸಂದರ್ಭದಲ್ಲೂ ರೈತರು ಮಧ್ಯವರ್ತಿಗಳ ಮೊರೆ ಹೋಗದಂತೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Copra to be procured at support price in Dakshina Kannada by Central government. centre to procure fair average quality (FAQ) ball copra from growers at a support price of ₹11,750 per quintal
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm