ಬ್ರೇಕಿಂಗ್ ನ್ಯೂಸ್
24-02-23 07:55 pm Mangalore Correspondent ಕರಾವಳಿ
ಮಂಗಳೂರು, ಫೆ.24 : ಪ್ರತಿದಿನ ನೂರಾರು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ ಮಂಗಳೂರಿನ ಬಲ್ಲಾಳ್‌ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಂಗಳೂರು ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ 2022ನೇ ಸಾಲಿನ ಪ್ರೆಸ್ ಕ್ಲಬ್ ಪ್ರಶಸ್ತಿಗೆ ರಜನಿ ಶೆಟ್ಟಿ ಅವರನ್ನು ಆಯ್ಕೆ ಮಾಡಿದೆ. ಮಾ.5ರಂದು ಮಂಗಳೂರಿನ ಬೊಕ್ಕಪಟ್ಣ ಸಮೀಪದ ಪ್ಯಾರಡೈಸ್ ಐಲ್ಯಾಂಡ್‌ನಲ್ಲಿ ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆ ಸಮಾರಂಭದಲ್ಲಿ ರಜನಿ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದಿ ನಾಯಿಗಳಿಗೆಲ್ಲ ತಾಯಿ ಪ್ರೀತಿ
ಮಂಗಳೂರಿನ ಮಣ್ಣಗುಡ್ಡೆಯಲ್ಲಿ ಪುಟ್ಟ ಬಾಡಿಗೆ ಮನೆಯಲ್ಲಿ ತನ್ನ ಪತಿ ಹಾಗೂ ಮೂವರು ಮಕ್ಕಳೊಂದಿಗೆ ವಾಸಿಸುತ್ತಿರುವ ರಜನಿ ಶೆಟ್ಟಿ, ತಮ್ಮ ಮನೆಯನ್ನು ಗಾಯಗೊಂಡ, ರೋಗಗ್ರಸ್ತ ನಾಯಿ, ಬೆಕ್ಕು, ಹಕ್ಕಿಗಳಿಗೆ ಮೀಸಲಿಟ್ಟಿದ್ದಾರೆ. ಬೀದಿ ಬದಿ ಯಾವ್ಯಾವುದೋ ಕಾರಣದಿಂದ ಸಾಯುವ ಸ್ಥಿತಿಯಲ್ಲಿರುವ ಬೀದಿ ನಾಯಿಗಳಿಗೂ ಬದುಕುವ ಹಕ್ಕಿದೆ ಎನ್ನುವುದನ್ನು ಮನಗಂಡು, ತಮ್ಮ ಪಾಡಿಗೆ ಸದ್ದಿಲ್ಲದೆ ಪ್ರಾಣಿಗಳ ಸೇವೆ ಮಾಡಿಕೊಂಡು ಬಂದವರು ರಜನಿ ಶೆಟ್ಟಿ.
ನಾಯಿ, ಬೆಕ್ಕು ಬಾವಿಗೆ ಬಿದ್ದಾಗ ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಬರುವ ಮೊದಲೇ ದೂರವಾಣಿ ಕರೆ ಸ್ವೀಕರಿಸಿ, ಸರ ಸರನೆ ಬಾವಿಗಿಳಿದು ಮೇಲೆತ್ತುವುದರಲ್ಲಿ ರಜನಿ ಶೆಟ್ಟಿಯವರದ್ದು ಎತ್ತಿದ ಕೈ. ಬಾವಿಗೆ ಬಿದ್ದ ಅನೇಕ ನಾಯಿ, ಬೆಕ್ಕುಗಳನ್ನು ಅವರು ರಕ್ಷಣೆ ಮಾಡಿದ್ದಾರೆ. ಮರ ಕಡಿಯುವಾಗ ಗಾಯಗೊಂಡ ಹಕ್ಕಿಗಳನ್ನೂ ಅವರು ತಮ್ಮ ಮನೆಯ ಗೂಡಿನಲ್ಲಿರಿಸಿ ಆರೈಕೆ ಮಾಡುತ್ತಾರೆ. ಗಿಳಿ, ಹದ್ದುಗಳಿಗೂ ರಜನಿಯಕ್ಕನ ಮನೆಯಲ್ಲಿ ಆಸರೆ ಸಿಕ್ಕಿದೆ.
ರಜನಿ ಅವರ ಮನೆಯಲ್ಲಿ ಪ್ರತಿದಿನ 60 ಕೆಜಿ ಅಕ್ಕಿಯಿಂದ ಚಿಕನ್ ಮಿಶ್ರಿತ ಅನ್ನ ಬೇಯುತ್ತಿರುತ್ತದೆ. ಇದನ್ನವರು ಮಂಗಳೂರಿನ ಮೂಲೆ ಮೂಲೆಯಲ್ಲಿರುವ ನೂರಾರು ಬೀದಿ ನಾಯಿಗಳಿಗೆ ಬಡಿಸುತ್ತಾರೆ. ಮಗಳು ಅಥವಾ ಪತಿ ದಾಮೋದರ್ ಶೆಟ್ಟಿಯವರ ಜೊತೆ ಸ್ಕೂಟರ್‌ನಲ್ಲಿ ತೆರಳಿ ನಾಯಿಗಳ ಮೈದಡವಿ, ಊಟ ಹಾಕಿ ಬರುತ್ತಾರೆ. ರಜನಿಯವರನ್ನು ಕಂಡ ಕೂಡಲೇ ನಾಯಿಗಳು ಬಾಲವನ್ನಾಡಿಸುತ್ತಾ ಓಡೋಡಿ ಬಂದು ಸುತ್ತುವರಿದು ಪ್ರೀತಿ ತೋರುತ್ತವೆ.
16 ವರ್ಷಗಳಿಂದ ನಾಯಿಗಳಿಗೆ ಊಟ ಹಾಕುವ ಇವರು, ಈವರೆಗೆ 2500ರಷ್ಟು ಪ್ರಾಣಿಗಳನ್ನು ಅಪಾಯದಿಂದ ರಕ್ಷಿಸಿದ್ದಾರೆ. ಆರಂಭದಲ್ಲಿ ಸ್ವಂತ ದುಡಿಮೆಯ ಹಣದಿಂದ ನಾಯಿಗಳಿಗೆ ಊಟ ಬೇಯಿಸಿ ಹಾಕುತ್ತಿದ್ದರೆ, ಈಗ ಬಿರುವೆರ್ ಕುಡ್ಲ ಇನ್ನಿತರ ಸಂಘಟನೆಗಳು, ಸಾರ್ವಜನಿಕರು ಇವರ ಕೆಲಸಕ್ಕೆ ಸಹಕಾರ ನೀಡುತ್ತಿದ್ದಾರೆ.
Mangalore Rajani Shetty, saviour of stray dogs nominated for press club award.
27-08-25 06:17 pm
HK News Desk
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm