ಬ್ರೇಕಿಂಗ್ ನ್ಯೂಸ್
24-02-23 10:33 pm Mangalore Correspondent ಕರಾವಳಿ
ಮಂಗಳೂರು, ಫೆ.24 : ಬಂಟ ಸಮಾಜಕ್ಕೆ ಪ್ರತ್ಯೇಕ ನಿಗಮ ಕೊಡಬೇಕು, ಹಿಂದುಳಿದ ವರ್ಗದ ಮೀಸಲಾತಿಯನ್ನು 3ಬಿಯಿಂದ 2ಎಗೆ ವರ್ಗಾಯಿಸಬೇಕು ಎನ್ನುವ ಎರಡು ಬೇಡಿಕೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ನಮ್ಮ ಬೇಡಿಕೆ ಈಡೇರದಿದ್ದಲ್ಲಿ ರಸ್ತೆಗಂತೂ ಇಳಿಯುವುದಿಲ್ಲ, ಈ ಸಲದ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತೇವೆ. ಗೆಲ್ಲುವವರನ್ನು ಸೋಲಿಸುವ ಶಕ್ತಿ ನಮ್ಮ ಸಮಾಜಕ್ಕಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಗರದ ಬಂಟ್ಸ್ ಹಾಸ್ಟೆಲ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಭಾಗದ ಸಮುದಾಯಗಳಿಗೂ ನಿಗಮ, ಸರಕಾರದಿಂದ ಸಹಾಯ ಸಿಗುತ್ತಿದೆ, ಆದರೆ ಕರಾವಳಿಯಲ್ಲಿ ಪ್ರಬಲವಾಗಿರುವ ಬಂಟ ಸಮುದಾಯಕ್ಕೆ ನಿಗಮ ಬಂದಿಲ್ಲ. ಇದುವರೆಗೂ ನಾವು ಹೋರಾಟ ಮಾಡಿಲ್ಲ, ಇದರರ್ಥ ನಮಗೆ ಶಕ್ತಿ ಇಲ್ಲ ಎಂದಲ್ಲ. ಬಂಟ ಸಮಾಜದಲ್ಲಿ ಐವರು ಶಾಸಕರಿದ್ದು, ಅವರೇ ನಮ್ಮ ಬೇಡಿಕೆ ಈಡೇರಿಸಬೇಕಿತ್ತು. ಈಗ ಸಮುದಾಯದ ನಾಯಕರನ್ನು ನಮ್ಮ ಸಮಾಜ ಪ್ರಶ್ನೆ ಮಾಡುತ್ತಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಂಟರು, ಬ್ರಾಹ್ಮಣರಿಗೂ ನಿಗಮದ ಭರವಸೆ ನೀಡಲಾಗಿದೆ. ಬಿಜೆಪಿ ಸರಕಾರಕ್ಕೆ ಬದ್ಧತೆ ಇದ್ದರೆ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.
ಬಂಟ ಸಮುದಾಯ ಮೇಲ್ನೋಟಕ್ಕೆ ಅತ್ಯಂತ ಶ್ರೀಮಂತ ಸಮುದಾಯವಾಗಿ ಕಂಡು ಬರುತ್ತಿದ್ದರೂ ಶೇ.75ರಷ್ಟು ಮಂದಿ ಮಧ್ಯಮ ವರ್ಗ ಮತ್ತು ಬಡತನ ರೇಖೆ ಕೆಳಗೆ ಜೀವನ ಸಾಗಿಸುತ್ತಿದ್ದಾರೆ. ಇದುವರೆಗೂ ಬಂಟ ಸಮುದಾಯಕ್ಕೆ ಸಿಗಬೇಕಾದ ಮೀಸಲಾತಿಯನ್ನು ಯಾವುದೇ ಆಡಳಿತ ಪಕ್ಷಗಳು ಕೊಟ್ಟಿಲ್ಲ. ಈ ಬಾರಿ ಐದು ಜನ ಶಾಸಕರು ಬಂಟ ಸಮುದಾಯದ್ದಿದ್ದರೂ ಸ್ವಸಮುದಾಯಕ್ಕೆ ಸಹಾಯ ಮಾಡಿದರೆ ಇತರರಿಗೆ ಕೋಪ ಬರಬಹುದೇ ಎನ್ನುವ ಅಳುಕು ಇರಬಹುದು ಎಂದು ತಿಳಿಸಿದರು.
ಬಿಲ್ಲವರಿಗೆ ನಿಗಮ ಆಗಿದ್ದು ಸಂತೋಷ, ಅವರಿಗೆ ಶಾಸಕರು, ಸಚಿವರು ಬೆಂಬಲ ನೀಡಿದ್ದಾರೆ. ಆದರೆ ನಮ್ಮವರು ಏನು ಮಾಡುತ್ತಿದ್ದಾರೆಂದು ಗೊತ್ತಾಗುತ್ತಿಲ್ಲ. ರಸ್ತೆ ವಿಚಾರದಲ್ಲಿ ಸುಂದರರಾಮ ಶೆಟ್ಟಿಯವರ ಹೆಸರು ಬಂದಾಗ ಎಲ್ಲ ಬಂಟರು ಒಗ್ಗಟ್ಟಾಗಿದ್ದರು. ವಿಶ್ವದಾದ್ಯಂತ ಇರುವ ಬಂಟರನ್ನು ತರಿಸಿ ಪ್ರತೀ ಕ್ಷೇತ್ರದಲ್ಲೂ ಓರ್ವ ಬಂಟ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ, ಐದು ಸಾವಿರ ಮತಗಳನ್ನು ಪಡೆದರೂ ಗೆಲ್ಲುವ ಅಭ್ಯರ್ಥಿಯನ್ನು ಸೋಲಿಸುವ ಸಾಮರ್ಥ್ಯ ನಮಗಿದೆ ಎಂದು ಎಚ್ಚರಿಸಿದರು.
ಪಡುಬಿದ್ರೆ ಬಂಟರ ಸಂಘದ ಅಧ್ಯಕ್ಷ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಒಂದು ಅಭ್ಯರ್ಥಿಯನ್ನು ಗೆಲ್ಲಿಸುವ ಮತ್ತು ಸೋಲಿಸುವ ಶಕ್ತಿ ಬಂಟ ಸಮಾಜಕ್ಕಿದೆ. ನಮ್ಮ ಸಮಾಜದ ಐವರು ಶಾಸಕರು ಸಮಾಜದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಯಾವ ಸರಕಾರ ನಮ್ಮ ಬೇಡಿಕೆಯನ್ನು ಈಡೇರಿಸುತ್ತಾರೋ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.
ಚುನಾವಣೆಗೆ ನಿಲ್ಲುವವರಿಗೆ ಬೆಂಬಲ!
ಈಗಿನ ಸರಕಾರ ಬೇಡಿಕೆಯನ್ನು ಈಡೇರಿಸದಿದ್ದರೆ ಬಂಟ ಸಮುದಾಯದ ಪ್ರತಿನಿಧಿಯಾಗಿ ಲೋಕಸಭಾ ಚುನಾವಣೆಗೆ ನಿಲ್ಲುತ್ತೀರಾ ಎಂದು ಪತ್ರಕರ್ತರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಐಕಳ, ನಮಗೆ ಯಾರ ಮೇಲೂ ವೈಯಕ್ತಿಕ ಹಗೆತನವಿಲ್ಲ, ಅಲ್ಲದೆ ನಾನು ಎಂದೋ ಚುನಾವಣೆಗೆ ನಿಂತಿದ್ದರೆ ಶಾಸಕ, ಸಚಿವನಾಗುತ್ತಿದ್ದೆ. ಹಾಲಾಡಿಯವರನ್ನು ಹೊರತುಪಡಿಸಿ ಇತರ ಎಲ್ಲರೂ ನನಗಿಂತ ಕಿರಿಯವರಾಗಿದ್ದು ನಾನು ಬೆಂಬಲ ನೀಡಿದ್ದೇನೆ. ಈಗ ನನಗೆ ವಯಸ್ಸಾಗಿದ್ದು, ನಮ್ಮ ಸಮುದಾಯವನ್ನು ಬೆಂಬಲಿಸುವವರಿಗೆ ನಾವು ಬೆಂಬಲ ನೀಡುತ್ತೇವೆ ಎಂದರು.
ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಜತೆ ಕಾರ್ಯದರ್ಶಿ ಪ್ರವೀಣ್ ಭೋಜ ಶೆಟ್ಟಿ, ಕರಾವಳಿ ಭಾಗದ ವಿವಿಧ ಕ್ಷೇತ್ರಗಳ ಬಂಟರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿದ್ದರು.
Mangalore, Bunt community slams 5 bunt MLAs, says we know how to make them lose the coming elections. Speaking to the media persons here in Mangalore slammed the BJP government over the Bunt community not being framed.
27-08-25 03:17 pm
HK News Desk
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm