ಬ್ರೇಕಿಂಗ್ ನ್ಯೂಸ್
25-02-23 10:39 pm Udupi Correspondent ಕರಾವಳಿ
ಉಡುಪಿ, ಫೆ.25 : ಒಂದು ಕಾಲದ ಜನತಾ ಪರಿವಾರದ ಪ್ರಭಾವಿ ಮುಖಂಡ, ಆನಂತರದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸೇರಿದ್ದ ಮಾಜಿ ಸಚಿವ, ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರನ್ನು ಸದ್ದಿಲ್ಲದೆ ಕಾಂಗ್ರೆಸ್ ನತ್ತ ಸೆಳೆಯಲು ಕಸರತ್ತು ನಡೆದಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವತಃ ಜಯಪ್ರಕಾಶ್ ಹೆಗ್ಡೆ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನುವ ಗುಸು ಗುಸು ಹರಡಿದೆ.
1990- 2000 ದಶಕದಲ್ಲಿ ಪ್ರಭಾವಿ ನಾಯಕರಾಗಿದ್ದ ಹೆಗ್ಡೆಯವರು ಬ್ರಹ್ಮಾವರ ಕ್ಷೇತ್ರದಿಂದ ಗೆದ್ದು ಶಾಸಕರಾಗಿ, ಸಚಿವರೂ ಆಗಿದ್ದವರು. ಕ್ಷೇತ್ರ ವಿಂಗಡಣೆಯಲ್ಲಿ ಬ್ರಹ್ಮಾವರ ಕ್ಷೇತ್ರ ರದ್ದುಗೊಂಡ ನಂತರ ಹೆಗ್ಡೆಯವರ ಸ್ಥಿತಿಯೂ ಅತಂತ್ರ ಆಗಿತ್ತು. ಬಳಿಕ ಕಾಂಗ್ರೆಸ್ ಸೇರಿದ್ದ ಜಯಪ್ರಕಾಶ್ ಹೆಗ್ಡೆ 2009ರಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ ಬಿಜೆಪಿಯ ಡಿ.ವಿ. ಸದಾನಂದ ಗೌಡ ವಿರುದ್ಧ ಸೋಲು ಅನುಭವಿಸಿದರು. 2011ರಲ್ಲಿ ಡಿ.ವಿ.ಸದಾನಂದ ಗೌಡ ಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಹೆಗ್ಡೆಯವರಿಗೆ ಗೆಲುವು ಸಿಕ್ಕಿತ್ತು. ಆದರೆ, 2014ರ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಎದುರು ಸೋಲು ಕಂಡಿದ್ದರಿಂದ ಕಾಂಗ್ರೆಸ್ ನಲ್ಲಿ ಹಿನ್ನಡೆ ಅನುಭವಿಸಿದ್ದರು.


ಈ ನಡುವೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ವಿರುದ್ಧ ಜಯಪ್ರಕಾಶ್ ಹೆಗ್ಡೆ ಬಂಡಾಯ ಕಣಕ್ಕಿಳಿದ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲನುಭವಿಸಿದ್ದಲ್ಲದೆ, ಪಕ್ಷದ ಅಧಿಕೃತ ಅಭ್ಯರ್ಥಿಗಿಂತ ಜಯಪ್ರಕಾಶ್ ಹೆಗ್ಡೆ ಅವರಿಗೇ ಹೆಚ್ಚು ಮತ ಸಿಕ್ಕಿದ್ದು ಅವರ ಪ್ರಭಾವಕ್ಕೆ ಸಾಕ್ಷಿಯಾಗಿತ್ತು. ಇದರ ಬಳಿಕ ರಾಜಕೀಯದಿಂದಲೇ ದೂರವಿದ್ದ ಅವರನ್ನು ಕಳೆದ ಚುನಾವಣೆ ವೇಳೆಗೆ ಬಿಜೆಪಿ ಸೆಳೆದುಕೊಂಡಿತ್ತು. ಶಾಸಕ, ಸಂಸದ ಸ್ಥಾನದ ಮೇಲೆ ದೃಷ್ಟಿಯಿಟ್ಟು ಬಂದಿದ್ದ ಅವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಸಕ್ರಿಯ ರಾಜಕಾರಣದಿಂದ ದೂರವಿದ್ದು ಆಯೋಗಕ್ಕೆ ಅಧ್ಯಕ್ಷರಾಗಿ ಉಳಿದುಬಿಡುವುದು ಜಯಪ್ರಕಾಶ್ ಹೆಗ್ಡೆ ಜಾಯಮಾನ ಅಲ್ಲ. ಸಿದ್ದರಾಮಯ್ಯ ಸಮಕಾಲೀನರಾಗಿರುವ ಮತ್ತು ಜೊತೆ ಜೊತೆಗೇ ಜನತಾ ಪರಿವಾರದಲ್ಲಿ ರಾಮಕೃಷ್ಣ ಹೆಗ್ಡೆ ಕಾಲದಲ್ಲಿ ಮುಂಚೂಣಿಯಲ್ಲಿದ್ದ ಹೆಗ್ಡೆಯವರನ್ನು ಮತ್ತೆ ಸಕ್ರಿಯ ರಾಜಕಾರಣಕ್ಕೆ ತರಬೇಕು ಎನ್ನುವುದು ಕಾಂಗ್ರೆಸ್ ಒಳಗಿನ ಮಾತು. ಅಲ್ಲದೆ, ಕಾರ್ಕಳದಲ್ಲಿ ಸುನಿಲ್ ಕುಮಾರ್ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳೇ ಇಲ್ಲ. ಆ ಜಾಗವನ್ನು ಹೆಗ್ಡೆ ಮೂಲಕ ತುಂಬಿಸಬೇಕು ಎನ್ನುವುದು ಕಾರ್ಯಕರ್ತರ ಇರಾದೆ.

ಕಾರ್ಕಳದಲ್ಲಿ ಪ್ರಮೋದ್ ಮುತಾಲಿಕ್ ಕಣಕ್ಕಿಳಿದಿರುವುದರಿಂದ ಪ್ರಭಾವಿ ಅಭ್ಯರ್ಥಿ ಸ್ಪರ್ಧಿಸಿದಲ್ಲಿ ಸುನಿಲ್ ಕುಮಾರ್ ಮಣಿಸಬಹುದೆಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆ.ಜಯಪ್ರಕಾಶ್ ಹೆಗ್ಡೆಯವರಿಗೆ ಕರೆ ಮಾಡಿದ್ದು, ಕಾರ್ಕಳ ಕ್ಷೇತ್ರದಿಂದ ಟಿಕೆಟ್ ಆಫರ್ ನೀಡಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಜಯಪ್ರಕಾಶ್ ಹೆಗ್ಡೆಯವರನ್ನು ಬೈಂದೂರು ಅಥವಾ ಕುಂದಾಪುರದಲ್ಲಿ ಕಣಕ್ಕಿಳಿಸಬೇಕು ಎನ್ನುವ ಆಗ್ರಹವೂ ಬಿಜೆಪಿ ಕಾರ್ಯಕರ್ತರಲ್ಲಿದೆ. ಹೀಗಾಗಿ ಜಯಪ್ರಕಾಶ್ ಹೆಗ್ಡೆ ಈ ಹಂತದಲ್ಲಿ ಕಾಂಗ್ರೆಸ್ ನತ್ತ ಹೋಗುವುದು, ಅಲ್ಲಿ ಬಿಜೆಪಿ ವಿರುದ್ಧ ಸ್ಪರ್ಧಿಸುವುದು ದೂರದ ಮಾತು ಎನ್ನುವ ಮಾತೂ ಕೇಳಿಬರುತ್ತಿದೆ.
Plans to bring Jayaprakash Hegde to Congress, Siddu and Dk in action to bring Jayaprakash somehow to the congress Party.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm