ಬ್ರೇಕಿಂಗ್ ನ್ಯೂಸ್
28-02-23 08:12 pm Mangalore Correspondent ಕರಾವಳಿ
ಮಂಗಳೂರು, ಫೆ.28: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಇನಾಯತ್ ಆಲಿ ರಂಗಕ್ಕಿಳಿದಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ಘೋಷಣೆ ಮಾಡಿರುವ ಗ್ಯಾರಂಟಿ ಭರವಸೆಗಳನ್ನು ಜನರಿಗೆ ತಲುಪಿಸಲು ಇನಾಯತ್ ಆಲಿ ವಿಶೇಷ ಅಭಿಯಾನ ಕೈಗೊಂಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ಇನಾಯತ್ ಆಲಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಗೃಹ ಜ್ಯೋತಿ ಯೋಜನೆಯ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಭಾಗ್ಯದ ಘೋಷಣೆ ಮಾಡಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಮಹಿಳೆಗೆ ಮಾಸಿಕ 2000 ಸಾವಿರ ರೂ. ನೀಡಲಾಗುತ್ತದೆ. ಇದಲ್ಲದೆ, ಕುಟುಂಬದ ಪ್ರತಿ ಸದಸ್ಯನಿಗೆ 10 ಕೇಜಿ ಅಕ್ಕಿ ನೀಡುವ ಭರವಸೆಯನ್ನು ನೀಡಲಾಗಿದೆ. ಇದು ಕೇವಲ ಭರವಸೆ ಆಗುಳಿಯದೆ, ನಾವು ಅಧಿಕಾರಕ್ಕೆ ಬಂದಲ್ಲಿ ಖಚಿತವಾಗಿ ನೀಡುತ್ತೇವೆ ಎನ್ನುವುದನ್ನು ಜನರಿಗೆ ತಿಳಿಸಲು ಅಭಿಯಾನ ಕೈಗೊಂಡಿದ್ದೇವೆ.

ಇದಕ್ಕಾಗಿ ಆನ್ಲೈನಲ್ಲಿ ಮೊಬೈಲ್ ಅಪ್ಲಿಕೇಶನ್ ಒಂದನ್ನು ಅಭಿವೃದ್ಧಿಪಡಿಸಲಾಗಿದ್ದು, ಪ್ರತಿ ಗ್ರಾಮಕ್ಕೆ ತೆರಳಿ ಫಲಾನುಭವಿಗಳ ಹೆಸರು, ವಿಳಾಸ, ವಯಸ್ಸು, ಮೊಬೈಲ್ ಸಂಖ್ಯೆ ಇನ್ನಿತರ ಮಾಹಿತಿಗಳನ್ನು ಪಡೆದು ನಮ್ಮ ಗ್ಯಾರಂಟಿ ಭರವಸೆಗಳನ್ನು ಈಡೇರಿಸಲು ನೋಂದಣಿ ಮಾಡುತ್ತೇವೆ. ನಾವು ಕೇವಲ ಭರವಸೆಗಳನ್ನು ನೀಡುತ್ತಿಲ್ಲ. ಖಚಿತವಾಗಿ ಹೇಳಿದ ಮಾತನ್ನು ಈಡೇರಿಸುತ್ತೇವೆ ಎನ್ನುವುದಕ್ಕೆ ಇದೊಂದು ಅಭಿಯಾನ ಎಂದು ತಿಳಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಆ ವೇಳೆಗೆ ನಮ್ಮ ಕೆಳ ಸ್ತರದ ಜನರು ಹಿಂದುಳಿಯುವುದನ್ನು ನಾವು ಬಯಸುವುದಿಲ್ಲ. ಅದಕ್ಕಾಗಿ ಈ ವಿಶೇಷ ಮನೆ ಮನೆ ಅಭಿಯಾನವನ್ನು ಕೈಗೊಂಡಿದ್ದೇವೆ. ಪ್ರತಿ ಗ್ರಾಮದಲ್ಲಿ 150 ಮನೆಗಳಲ್ಲಿ ನೋಂದಣಿ ಮಾಡುವ ಗುರಿ ಹೊಂದಿದ್ದೇವೆ ಎಂದು ಹೇಳಿದರು. ಈ ವೇಳೆ, ನಿಮಗೆ ಟಿಕೆಟ್ ಖಾತ್ರಿಯಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ, ಟಿಕೆಟ್ ನೀಡುವುದು ಪಕ್ಷದ ಹೈಕಮಾಂಡ್. ನಾವು ಕಾರ್ಯಕರ್ತರಾಗಿದ್ದು, ನಮ್ಮ ಕೆಲಸ ಗುರುತಿಸಿ ಪಕ್ಷ ಟಿಕೆಟ್ ನೀಡಲಿದೆ. ನಾವು ಹಲವರು ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದೇವೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಂಗಳೂರು ಉತ್ತರ ಸಮಿತಿ ಅಧ್ಯಕ್ಷ ಉಮೇಶ್ ದಂಡಕೇರಿ, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Mangalore North Candidate Inayath Ali launches mobile app campaign for the voter's to get 10 kilograms of free rice to the poor if Congress is voted to power in Karnataka. The party has also promised 200 units of free electricity, every month, if it wins the upcoming state polls.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am