ಬ್ರೇಕಿಂಗ್ ನ್ಯೂಸ್
05-03-23 11:25 pm Mangalore Correspondent ಕರಾವಳಿ
ಮಂಗಳೂರು, ಮಾ.5 : ಬಿಹಾರದಲ್ಲಿ ಪ್ರಧಾನಿ ಮೋದಿ ಆಗಮನ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ.
ನಾಲ್ಕು ತಂಡಗಳಲ್ಲಾಗಿ ಅಧಿಕಾರಿಗಳು ದಾಳಿ ನಡೆಸಿದ್ದು ವಿಧ್ವಂಸಕ ಕೃತ್ಯಕ್ಕೆ ಹಣಕಾಸು ನೆರವು ಒದಗಿಸಿದ ಆರೋಪದಲ್ಲಿ ಐವರನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ನಂದಾವರದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್ ಮತ್ತು ನೌಫಲ್ ಎಂಬವರ ಮನೆಗೆ ದಾಳಿ ನಡೆಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಇವರು ಹಲವರ ಬ್ಯಾಂಕ್ ಖಾತೆಗಳಿಗೆ ನಿರಂತರ ಹಣ ರವಾನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ. ಇವರ ಬ್ಯಾಂಕ್ ವ್ಯವಹಾರದ ಮೇಲೆ ಹಲವು ಸಮಯದಿಂದ ಅಧಿಕಾರಿಗಳು ಕಣ್ಣಿಟ್ಟಿದ್ದರು. ಇದೇ ವೇಳೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕಳೆದ 2022ರ ಜುಲೈ 12ರಂದು ಬಿಹಾರದ ಪಾಟ್ನಾಕ್ಕೆ ಪ್ರಧಾನಿ ಭೇಟಿ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಪ್ಲಾನ್ ರೂಪಿಸಲಾಗಿತ್ತು. ಪಾಟ್ನಾದ ಫುಲ್ವಾರಿ ಶರೀಫ್ ಎಂಬಲ್ಲಿ ಇಸ್ಲಾಮಿಕ್ ಮೂಲಭೂತವಾದಿಗಳು ಒಟ್ಟು ಸೇರಿದ್ದು ಶಸ್ತ್ರಾಸ್ತ್ರ ತರಬೇತಿ ನಡೆಸುತ್ತಿದ್ದುದು ಪತ್ತೆಯಾಗಿತ್ತು. ಅಲ್ಲದೆ, 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರ ಮಾಡಬೇಕೆಂಬ ಕರಪತ್ರಗಳು, ಪುಸ್ತಕಗಳು ದೊರಕಿದ್ದವು. ಪ್ರಕರಣದಲ್ಲಿ ಬಿಹಾರ ಸೇರಿ ದೇಶದ ಹಲವು ಕಡೆ ದಾಳಿ ನಡೆಸಿರುವ ಅಧಿಕಾರಿಗಳು ಹಲವರನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ಬಾರಿ ಮಂಗಳೂರಿನ ಎಸ್ಡಿಪಿಐ ನಾಯಕ ರಿಯಾಜ್ ಪರಂಗಿಪೇಟೆ ಅವರನ್ನೂ ಇದೇ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
Conspiracy to attack PM’s rally at Bihar in 2022, four from Bantwal in Mangalore arrested by NIA officers. The arrested have said to make financial support. Bihar police had revealed that the module had plans to disrupt a rally of PM Modi in Bihar.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm