ಬ್ರೇಕಿಂಗ್ ನ್ಯೂಸ್
09-03-23 09:36 pm Mangalore Correspondent ಕರಾವಳಿ
ಮಂಗಳೂರು, ಮಾ.9 : ಚುನಾವಣೆ ಸಂದರ್ಭದಲ್ಲಿ ಬಿಲ್ಲವರ ಬಳಿಕ ಸಿಡಿದು ನಿಂತಿರುವ ಬಂಟ ಸಮುದಾಯವನ್ನು ಮನವೊಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿಗೆ ಕರೆಸಿ ಬಂಟ ಸಮುದಾಯದ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ವತಿಯಿಂದ ಮುಲ್ಕಿ ರಾಷ್ಟ್ರೀಯ ಹೆದ್ದಾರಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನ ಮತ್ತು ಇತರ ಯೋಜನೆಗಳಿಗೆ ಸರಕಾರದಿಂದ ಅನುದಾನ ಬಿಡುಗಡೆಗೊಳಿಸಿ ಕಣ್ಣೊರೆಸುವ ತಂತ್ರ ಮಾಡಿದ್ದಾರೆ. ಅಲ್ಲದೆ, ಬಂಟ ಸಮುದಾಯವನ್ನು 2ಎ ಮೀಸಲಾತಿ ಕೆಟಗರಿಗೆ ಸೇರಿಸುವ ಬಗ್ಗೆ ಆಶ್ವಾಸನೆಯನ್ನು ನೀಡಿದ್ದು ಬಂಟರ ಯಾನೆ ನಾಡವರ ಎಲ್ಲ ರೀತಿಯ ಆಶೋತ್ತರಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಆ ಮೂಲಕ ಸಮುದಾಯದ ಹೋರಾಟಕ್ಕೆ ಒಂದು ಹಂತದ ಜಯ ದೊರಕಿದೆ ಎಂದು ಐಕಳ ಹರೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.7ರಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ತಡರಾತ್ರಿ ವರೆಗೂ ಐಕಳ ಹರೀಶ್ ಶೆಟ್ಟಿ ಜೊತೆ ಮಾತುಕತೆ ನಡೆಸಿದ್ದು ಬಂಟ ಸಮಾಜದ ಬಡವರ ಕಷ್ಟಗಳನ್ನು ಮನದಟ್ಟು ಮಾಡಿದ್ದಾರೆ. ಬಂಟ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಅವಶ್ಯಕತೆ ಬಗ್ಗೆ ತಿಳಿಸಿದ್ದು ಅದಕ್ಕೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ. ಸಮುದಾಯದ ಪರವಾಗಿ ಒಕ್ಕೂಟದ ಅಧ್ಯಕ್ಷರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಹರೀಶ್ ಶೆಟ್ಟಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ ಜೊತೆಗಿದ್ದರು.
Bunt Community Demands Reservation Category, cm discuss matter with Harish shetty. The Bunts community, which has a large presence in Coastal Karnataka, has demanded the inclusion of the community under the 2a reservation category.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm