ಬ್ರೇಕಿಂಗ್ ನ್ಯೂಸ್
10-03-23 07:46 pm Udupi Correspondent ಕರಾವಳಿ
ಉಡುಪಿ, ಮಾ.10: ಮಹಾಲಕ್ಷ್ಮೀ ಕೋಪರೇಟಿವ್ ಸೊಸೈಟಿಯ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಬ್ಯಾಂಕಿನ ಅಧ್ಯಕ್ಷ, ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಮೇಲೆ ಪ್ರಕರಣ ದಾಖಲಾಗಿದೆ.
ಮಾ.8ರಂದು ರಾತ್ರಿ ಮಲ್ಪೆಯ ರಾಜಮಹಲ್ ಲಾಡ್ಜ್ ನಲ್ಲಿ ಬ್ಯಾಂಕಿನ ಮ್ಯಾನೇಜರ್ ಆಗಿದ್ದ ಪರಿಶಿಷ್ಟ ಜಾತಿಯ ಸುಬ್ಬಣ್ಣ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ, ಸುಬ್ಬಣ್ಣ ಸಾಯೋದಕ್ಕೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಬ್ಯಾಂಕಿನ ಆಡಳಿತದ ಒತ್ತಡ ಇದ್ದುದರ ಬಗ್ಗೆ ಬರೆದುಕೊಂಡಿದ್ದಾರೆ.
ತನ್ನ ಸಾವಿಗೆ ಬ್ಯಾಂಕಿನ ಆಡಳಿತ ಮಂಡಳಿಯ ಒತ್ತಡ, ಮೇಲಧಿಕಾರಿಯ ಅಸಹಕಾರ ಮತ್ತು ರಿಯಾಜ್ ಎಂಬ ಸಾಲಗಾರ ವ್ಯಕ್ತಿಯ ಮೋಸದ ನಡವಳಿಕೆ ಕಾರಣ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಈ ಡೆತ್ ನೋಟ್ ಆಧರಿಸಿ ಮೃತರ ಸೋದರ ಸುರೇಶ್ ಪೊಲೀಸ್ ದೂರು ನೀಡಿದ್ದು, ಬ್ಯಾಂಕಿನ ಅಧ್ಯಕ್ಷ ಯಶಪಾಲ್ ಸುವರ್ಣ, ಬ್ಯಾಂಕಿನ ಆಡಳಿತ ನಿರ್ದೇಶಕ ಜಗದೀಶ ಮೊಗವೀರ, ಮಾಜಿ ಆಡಳಿತ ನಿರ್ದೇಶಕ ಜೆಕೆ ಸೀನ ಗಂಗೊಳ್ಳಿ, ಮ್ಯಾನೇಜರ್ ಸಾರಿಕಾ, ಸಾಲಗಾರ ರಿಯಾಜ್ ಎಂಬವರ ವಿರುದ್ಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನ್ನ ಸೋದರನ ಸಾವಿಗೆ ಬ್ಯಾಂಕಿನ ಆಡಳಿತ ನೀಡಿದ ಕಿರುಕುಳ ಕಾರಣ. ಸಾಲ ವಸೂಲಾತಿ ಮಾಡಿಕೊಡದಿದ್ದರೆ ನಿನ್ನ ಮನೆಯನ್ನು ಮಾರಿ ಬ್ಯಾಂಕಿನ ಸಾಲ ತೀರಿಸಬೇಕು. ಇಲ್ಲದಿದ್ದರೆ ನಿನ್ನ ಜೀವ ತೆಗೆಯುವುದಾಗಿ ಬೆದರಿಸಿದ್ದಾರೆಂದು ಸುರೇಶ್ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು ಮತ್ತು ಸಾಲಗಾರ ರಿಯಾಜ್ ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸರಲ್ಲಿ ಕೇಳಿದರೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಬ್ಯಾಂಕಿನಿಂದ ಸಾಲದ ದಾಖಲೆ ಸಲ್ಲಿಸಲು ಹೇಳಿದ್ದೇವೆ ಎಂದಿದ್ದಾರೆ. ರಿಯಾಜ್ ಎಷ್ಟು ಸಾಲ ಹೊಂದಿದ್ದ ಎಂದು ಕೇಳಿದರೂ, ಆ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.
BJP leader Yashpal A Suvarna along with four others have been booked for abetment of suicide in connection with the death of Subbanna, 50, manager of Mahalaskhmi Co-operative bank in Karnataka's Udupi. Subbanna allegedly hanged himself at Rajmahal lodge in Malpe on March 7. A suicide note was found at the scene. Subbanna alleged in the note that he was pressurised by the BJP leader and other officials to recover a loan from a person named Riyaz, who is also a co-accused in the matter.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm