ಬ್ರೇಕಿಂಗ್ ನ್ಯೂಸ್
15-03-23 12:12 pm Mangalore Correspondent ಕರಾವಳಿ
ಬಂಟ್ವಾಳ, ಮಾ.15: ಇತಿಹಾಸ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಎರಡು ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿ ರಾಜ್ಯ ಸರ್ಕಾರ ಗಣಿಗಾರಿಕೆ ನಿಷೇಧಿಸಿದೆ. ಕಾರಿಂಜ ಬೆಟ್ಟವನ್ನು ಕೇವಲ ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕೆ ಕಾಯ್ದಿರಿಸಿ ಎಲ್ಲ ರೀತಿಯ ಗಣಿಗಾರಿಕೆ ಮತ್ತು ಕಲ್ಲುಪುಡಿ (ಕ್ರಷರ್) ಚಟುವಟಿಕೆಯನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕಾರಿಂಜ ದೇವಸ್ಥಾನದ ಸಂರಕ್ಷಣೆಗಾಗಿ ಪರಿಸರದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಬೇಕೆಂದು ಕಳೆದ 2-3 ವರ್ಷಗಳಿಂದ ಹಿಂದು ಜಾಗರಣ ವೇದಿಕೆಯ ವತಿಯಿಂದ ಪ್ರತಿಭಟನೆ, ಹೋರಾಟ ನಡೆಸಲಾಗಿತ್ತು. ಇತ್ತೀಚೆಗೆ ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ಕುಮಾರ್ ಅವರನ್ನು ಕ್ಷೇತ್ರಕ್ಕೆ ಕರೆಸಿ ಗಣಿಗಾರಿಕೆ ನಿಷೇಧ ಪ್ರದೇಶವೆಂದು ಘೋಷಿಸುವಂತೆ ಸರಕಾರಕ್ಕೆ ಒತ್ತಡ ಹೇರಿದ್ದರು.
ಅದರಂತೆ, ಕ್ಷೇತ್ರದ ಸುತ್ತ ಗಣಿಗಾರಿಕೆ ನಿಷೇಧಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಸೂಚಿಸಲಾಗಿತ್ತು. ಮಂಗಳೂರು ಸಹಾಯಕ ಕಮಿಷನರ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರ ಮೂಲಕ ದೇವಸ್ಥಾನದ ಸುತ್ತಮುತ್ತ ಜಂಟಿ ಸ್ಥಳ ಪರಿಶೀಲನೆ ನಡೆಸಿದ್ದರು. ವರದಿ ಆಧರಿಸಿ ಜಿಲ್ಲಾಧಿಕಾರಿಯವರು ಕಾರಿಂಜ ದೇವಸ್ಥಾನದ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯನ್ನು ಗಣಿಗಾರಿಕೆ ಚಟುವಟಿಕೆ ನಿಷೇಧಿತ ಪ್ರದೇಶವೆಂದು ಘೋಷಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಜಿಲ್ಲಾಧಿಕಾರಿ ವರದಿ ಕೊಟ್ಟು ಆರು ತಿಂಗಳು ಕಳೆದರೂ, ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿತ್ತು. ಇದೀಗ ಚುನಾವಣೆ ಹೊಸ್ತಿಲಲ್ಲಿ ತರಾತುರಿಯಲ್ಲಿ ಆದೇಶ ಹೊರಡಿಸಿದೆ.
ಪ್ರಸ್ತುತ ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು 1994ರ ನಿಯಮ 8(3)ರಲ್ಲಿನ ಅಧಿಕಾರವನ್ನು ಚಲಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಕಾರಿಂಜೇಶ್ವರ ಬೆಟ್ಟದ ಎರಡು ಕಿಮೀ ಸುತ್ತಳತೆಯಲ್ಲಿ ಗಣಿಗಾರಿಕೆ ನಿಷೇಧಿಸಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ನೀಡಿದ್ದಾರೆ.
Responding to demands for the protection of the ancient Karinjeshwara Temple located atop Karinja hills in Bantwal taluk of Dakshina Kannada district, the State government on Tuesday banned all kinds of mining and stone-crushing activities within a 2-km radius of the Hills.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm