ಬ್ರೇಕಿಂಗ್ ನ್ಯೂಸ್
15-03-23 07:15 pm Mangalore Correspondent ಕರಾವಳಿ
ಉಳ್ಳಾಲ, ಮಾ.15 : ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಪಠ್ಯಪುಸ್ತಕಗಳನ್ನು ಆದಷ್ಟು ಬೇಗನೆ ರಾಜ್ಯಭಾಷೆ ಕನ್ನಡದಲ್ಲಿ ತರುವ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಳೀಯ ಭಾಷೆಯಲ್ಲೇ ಕಲಿತು ದೇಶದ ಅಭಿವೃದ್ಧಿಗೆ ವೇಗ ತುಂಬುವುದು ಇದರ ಹಿಂದಿನ ಉದ್ದೇಶ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಬುಧವಾರ ನಡೆದ 41ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳ ಕುಲಪತಿಗಳು ಹಾಗೂ ತಜ್ಞರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಳೀಯ ಭಾಷಾ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ದೇಶದಲ್ಲಿ ಕರ್ನಾಟಕ ಜಾರಿ ಮಾಡಿದೆ ಎಂದರು.





ಘಟಿಕೋತ್ಸವ ಭಾಷಣ ಮಾಡಿದ ರಾಷ್ಟ್ರೀಯ ಮೌಲೀಕರಣ ಮತ್ತು ಮಾನ್ಯತಾ ಪರಿಷತ್ ನಿರ್ದೇಶಕ ಪ್ರೊ.ಎಸ್.ಸಿ.ಶರ್ಮ, ವಿಶ್ವವಿದ್ಯಾನಿಲಯ ಶಿಕ್ಷಣದ ಪರಿಕಲ್ಪನೆ ನಾವು ಅರ್ಥ ಮಾಡಿಕೊಳ್ಳಬೇಕು ಎಂಬುದು ರಾಷ್ಟೀಯ ಶಿಕ್ಷಣ ನೀತಿಯ ಆಶಯ. ಅದು ನಮ್ಮ ಬಹುಕಾರ್ಯ ಸಾಮರ್ಥ್ಯವನ್ನು ಹೆಚ್ಚಿಸಬೇಕು. ಪರಿಸರದೆಡೆಗೆ ಸ್ವಾರ್ಥ ರಹಿತ ಕಾಳಜಿ ನಮ್ಮಲ್ಲಿ ಬೆಳೆಯಬೇಕು ಎಂದರು. ಶಿಕ್ಷಣ ಕ್ಷೇತ್ರ ಮತ್ತು ಸಮಾಜ ಸೇವೆಯ ಸಾಧನೆಗಾಗಿ ಕಣಚೂರ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಸ್ಥಾಪಕ ಹಾಜಿ ಯು.ಕೆ.ಮೋನು, ಉದ್ಯಮಿ ಜಿ ರಾಮಕೃಷ್ಣ ಆಚಾರ್ ಹಾಗೂ ಪ್ರೊ.ಎಂ.ಬಿ.ಪುರಾಣಿಕ್ ಅವರು ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪದವಿ ಪಡೆದರು.
ಈ ಬಾರಿ 7 ಮಂದಿ ವಿದೇಶಿಗರು ಸೇರಿದಂತೆ 115 ಮಂದಿಗೆ ಪಿ.ಹೆಚ್.ಡಿ ಪದವಿ ಪ್ರದಾನ ಮಾಡಲಾಯಿತು. 55 ಮಂದಿಗೆ ಚಿನ್ನದ ಪದಕ, 57 ನಗದು ಬಹುಮಾನ ವಿತರಿಸಲಾಯಿತು. 199 ಮಂದಿ ರ‍್ಯಾಂಕ್ ವಿಜೇತರಲ್ಲಿ ಪ್ರಥಮ ರ‍್ಯಾಂಕ್ ಪಡೆದ 71 ಮಂದಿಗೆ ರಾಜ್ಯಪಾಲರು ರ‍್ಯಾಂಕ್ ಪ್ರಮಾಣ ಪತ್ರ ನೀಡಿದರು. ಶೈಕ್ಷಣಿಕ ವರ್ಷ 2021-22 ರಲ್ಲಿ ಶೇಕಡಾ 82.72 ಫಲಿತಾಂಶ ದಾಖಲಾಗಿದೆ. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ, ವಿಶ್ವವಿದ್ಯಾನಿಲಯದ ಸಾಧನೆ- ಗುರಿಗಳನ್ನು ವಿವರಿಸಿ ಅತಿಥಿಗಳನ್ನು ಸ್ವಾಗತಿಸಿದರು.
Annual Convocation of Mangalore University, Higher education books to soon come in Kannada said Governor of Karnataka and the Chancellor of the University Thawar Chand Gehlot speaking at the 41st Annual Convocation of Mangalore University at Mangala Auditorium Mangalagangotri
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm