ಬ್ರೇಕಿಂಗ್ ನ್ಯೂಸ್
23-10-20 10:24 pm Mangalore Reporter ಕರಾವಳಿ
ಮಂಗಳೂರು. ಅಕ್ಟೋಬರ್ .23 : ಅಕ್ರಮ ಗೋಹತ್ಯೆಗೆ ನಿಯಂತ್ರಣ ಹೇರುವ ಪ್ರಯತ್ನವಾಗಿ ಮಂಗಳೂರು ಮಹಾನಗರಪಾಲಿಕೆ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಇರುವ 20 ಬೀಫ್ ಸ್ಟಾಲ್ ಗಳಲ್ಲಿ ಬೇರೆ ರಾಜ್ಯ, ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳುವಂತೆ ಪಾಲಿಕೆಯಿಂದ ಆದೇಶ ಮಾಡಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಲಿಕೆಯ ಪ್ರಕಟಣೆ ಹೇಳಿದೆ.

ಅನಧಿಕೃತವಾಗಿ ಮಾಂಸ ಮಾರಾಟ ಮಾಡುವುದು ಕಂಡುಬಂದಲ್ಲಿ ಪರವಾನಿಗೆ ರದ್ದು ಪಡಿಸಲಾಗುತ್ತದೆ. ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಮಾರಾಟಗಾರರು ಇನ್ನು ಮುಂದಕ್ಕೆ ಪಾಲಿಕೆಯ ಅಧೀನದಲ್ಲಿರುವ ಅಧಿಕೃತ ಕಸಾಯಿಖಾನೆಯಿಂದಲೇ ಮಾಂಸವನ್ನು ಪಡೆದು ಮಾರಾಟ ಮಾಡಬೇಕು. ಎಲ್ಲಾ ಬೀಫ್ ಸ್ಟಾಲ್ ಮಾಲಕರು ತಮ್ಮ ತಮ್ಮ ಅಂಗಡಿಗಳಲ್ಲಿ ಮಾರಾಟ ಮಾಡಲು ಮಾಂಸವನ್ನು ಕಸಾಯಿಖಾನೆಯಿಂದ ಪಡೆದಾಗ ಮಾಂಸವನ್ನು ಪಡೆದ ವಿವರದ ರಶೀದಿಯನ್ನು ಕಡ್ಡಾಯವಾಗಿ ಇರಿಸಬೇಕು.
ಕಸಾಯಿಖಾನೆಗೆ ಮಾಂಸಕ್ಕಾಗಿ ಜಾನುವಾರುಗಳನ್ನು ಕೊಂಡೊಯ್ಯುವಾಗ ಆರ್.ಟಿ.ಒ.ದಿಂದ ಅಧಿಕೃತವಾಗಿ ನೋಂದಣಿಗೊಂಡ ಸ್ಪೆಷಲ್ ಪರ್ಮಿಶನ್ ವೆಹಿಕಲ್ (ಎಸ್.ಪಿ.ವಿ)ನಲ್ಲೇ ಸಾಗಿಸುವಂತೆ ಸಂಬಂಧಿತ ಕಸಾಯಿಖಾನೆ ಮಾಲಕರು ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಮಹಾನಗರಪಾಲಿಕೆಯ ಮೇಯರ್ ದಿವಾಕರ ಪಾಂಡೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am