ಬ್ರೇಕಿಂಗ್ ನ್ಯೂಸ್
17-03-23 08:09 pm Mangalore Correspondent ಕರಾವಳಿ
ಮಂಗಳೂರು, ಮಾ.17: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಇದರ ಪ್ರಾಯೋಜಕತ್ವದಲ್ಲಿ ಕರಾವಳಿಯ ಅತೀ ದೊಡ್ಡ ಆಹಾರೋತ್ಸವ ಇದೇ ಮಾರ್ಚ್ 22ರಿಂದ 26ರ ವರೆಗೆ ನಗರದ ಲಾಲ್ ಬಾಗ್ ನಲ್ಲಿ ನಡೆಯಲಿದೆ. ಸಂಜೆ 5ರಿಂದ ರಾತ್ರಿ 11ರ ವರೆಗೆ ಕರಾವಳಿ ಉತ್ಸವ ಮೈದಾನದಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ
ಮುಖಾಂತರ ಮಣ್ಣಗುಡ್ಡೆ ಗುರ್ಜಿ ಜಂಕ್ಷನ್ ವರೆಗೆ ರಸ್ತೆ ಬದಿ ಆಹಾರೋತ್ಸವ ಆಯೋಜಿಸಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ತಿಂಡಿ ತಿನಿಸುಗಳು ಸೇರಿದಂತೆ ಪಂಜಾಬಿ, ರಾಜಸ್ಥಾನಿ, ಕೇರಳ, ತಮಿಳುನಾಡು ಶೈಲಿಯ ಸಸ್ಯಾಹಾರ ಹಾಗೂ ಮಾಂಸಾಹಾರ ಆಹಾರಗಳಿಗೆ
ಆದ್ಯತೆ ಕಲ್ಪಿಸಲಾಗಿದೆ. ಹೋಟೆಲ್ ಉದ್ಯಮ, ಐಸ್ ಕ್ರೀಮ್ ಸೇರಿದಂತೆ ವಿವಿಧ ರೀತಿಯ ಆಹಾರ ಉತ್ಪನ್ನಗಳು, ಸ್ವಾವಲಂಬಿ ಉತ್ಪಾದಕರು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಮನೋರಂಜನಾ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು
ಕೂಡ ನಡೆಯಲಿದ್ದು ಕರಾವಳಿಯಲ್ಲಿ ಇದೊಂದು ಹೊಸ ಭಾಷ್ಯ ಬರೆಯಲಿದೆ ಎಂದು ಸಂಘಟಕರಲ್ಲಿ ಒಬ್ಬರಾದ ಯತೀಶ್ ಬೈಕಂಪಾಡಿ ಹೇಳಿದರು.
ಜನರು ಕುಟುಂಬ ಸಮೇತರಾಗಿ ಪಾಲ್ಗೊಳ್ಳಬಹುದು. ಗೆಳೆಯರ ಹುಟ್ಟುಹಬ್ಬ, ಮದುವೆ
ವಾರ್ಷಿಕೋತ್ಸವ ಹಾಗೂ ಇತರ ಶುಭ ಕಾರ್ಯಕ್ರಮವನ್ನು ಇಲ್ಲಿ ಆಚರಿಸಲು ವೇದಿಕೆ ನೀಡಲಾಗುವುದು. ಸಿನೆಮಾ ತಾರೆಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ನೃತ್ಯ, ಹಾಡು, ಮಿಮಿಕ್ರಿ, ನಟನೆ, ಬೀದಿ ಜಾದೂ, ಕರೋಕೆ, ವಾದ್ಯಗೋಷ್ಠಿ, ಬೀದಿ
ಸರ್ಕಸ್, ಸೈಕಲ್ ಬ್ಯಾಲೆನ್ಸ್, ಬಗ್ಗಿ ವಾಹನ, ಗೇಮ್ಸ್, ಜುಂಬಾ, ಫಿಟ್ ನೆಸ್ ಕ್ರೀಡೆ, ಯೋಗ ಹಾಗೂ ಇನ್ನಷ್ಟು ಪ್ರದರ್ಶನ
ಮತ್ತು ಮನೋರಂಜನಾ ಕಾರ್ಯಕ್ರಮಗಳಿಗಾಗಿ ನಾಲ್ಕು ಪ್ರತ್ಯೇಕ ವೇದಿಕೆ ಇರಲಿದೆ.
ದೇಹದಾರ್ಡ್ಯ, ಪಟಾಕಿ ಪ್ರದರ್ಶನ, ಪಾದ ಮಸಾಜ್, ಚೆಂಡೆ ಮತ್ತು ನಾಸಿಕ್ ಬ್ಯಾಂಡ್, ಕಿರು ಮ್ಯೂಸಿಕ್ ಬ್ಯಾಂಡ್, ಬೆಂಕಿ ನೃತ್ಯ, ಸೆಲ್ಲಿ ಕೌಂಟರ್, ಫ್ಲಾಶ್ ಬೆಳಕಿನಾಟ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಮೆರಗು ನೀಡುವ ಸಲುವಾಗಿ ವಿಶೇಷವಾಗಿ ವರ್ಣ ರಂಜಿತ ವಿದ್ಯುತ್ ದೀಪಾಲಂಕಾರ, ತಾಲೀಮು ಪ್ರದರ್ಶನ, ಸಂಗೀತ ಕಾರ್ಯಕ್ರಮ, ಹುಲಿವೇಷ ಬಣ್ಣಗಾರಿಕೆ ಸ್ಪರ್ಧೆ, ಗೂಡು ದೀಪ ಮುಂತಾದವುಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರತಿ ಜಂಕ್ಷನ್ ಗಳಲ್ಲಿ ವೇದಿಕೆಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ, ಮಕ್ಕಳಿಗಾಗಿ ಪ್ರತ್ಯೇಕ ವಲಯ, ಕುದುರೆ ಸವಾರಿ, ಒಂಟೆ ಸವಾರಿ, ಸೆಲ್ಫಿ ಬೂತ್, ಹಳೆಯ ಮಾದರಿಯ ಕಾರುಗಳ ಪ್ರದರ್ಶನ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿರಲಿದೆ. ಕಾರ್ಯಕ್ರಮ ನಿಮಿತ್ತ ಆ ಭಾಗದಲ್ಲಿ ರಸ್ತೆಯ ಸಂಚಾರವನ್ನು ಕಡಿತಗೊಳಿಸಲು ಜಿಲ್ಲಾಡಳಿತಕ್ಕೆ ಕೇಳಿಕೊಳ್ಳಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಂಘಟಕರಾದ ಗಿರಿಧರ್ ಶೆಟ್ಟಿ, ಅಶ್ವಥ್ ಕೊಟ್ಟಾರಿ, ಲಲಿತ್, ಜಗದೀಶ್ ಕದ್ರಿ ಉಪಸ್ಥಿತರಿದ್ದರು.
Food street festival of various streets to be held in Mangalore for the first time, March 22nd to 26th.
28-06-25 12:14 pm
HK News Desk
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm