ಬ್ರೇಕಿಂಗ್ ನ್ಯೂಸ್
25-03-23 12:20 pm Mangalore Correspondent ಕರಾವಳಿ
ಉಳ್ಳಾಲ, ಮಾ.25 : ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಯುವಕನೋರ್ವ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಮೂರುಕಟ್ಟೆ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (25) ಆತ್ಮಹತ್ಯೆಗೈದ ದುರ್ದೈವಿ. ಅಕ್ಷಯ್ ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿವಸಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದನಂತೆ. ಮೊಬೈಲ್ ಶಾಪ್ ಮಾಲಕರು ಕರೆ ಮಾಡಿದರೂ ಅಕ್ಷಯ್ ಕರೆ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿದೆ. ಇಂದು ಬೆಳಗ್ಗೆ ಅಕ್ಷಯ್ ತಾಯಿ, ಮನೆ ಹತ್ತಿರದ ಬೀಡಿ ಬ್ರಾಂಚಿಗೆ ಬೀಡಿ ಕೊಡಲು ತೆರಳಿದ್ದ ವೇಳೆ ಮನೆಯ ಹಾಲಿನ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ.
ಖಿನ್ನತೆಯಿಂದ ಅಕ್ಷಯ್ ಆತ್ಮ ಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಮೃತ ಅಕ್ಷಯ್ ತಾಯಿ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
ಕುಂಪಲದಲ್ಲಿ ಸರಣಿ ಮರಣಮೃದಂಗ
ವರ್ಷದ ಹಿಂದೆ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಾ ಸಾವಿನ ನಂತರ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸುತ್ತಿವೆ. ಕಳೆದ ವಾರವಷ್ಟೆ ನಂತೂರಿನಲ್ಲಿ ನಡೆದ ಅಪಘಾತದಲ್ಲಿ ಚಿಕ್ಕಪ್ಪನ ಜತೆ ಸ್ಕೂಟರಲ್ಲಿದ್ದ ಕುಂಪಲ ಗುರುನಗರದ ವಿದ್ಯಾರ್ಥಿನಿ ಭೂಮಿಕ(17) ಸಾವನ್ನಪ್ಪಿದ್ದರು. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳೊಂದರಲ್ಲೇ ಕುಂಪಲ ಪ್ರದೇಶದ ರಿಕ್ಷಾ ಚಾಲಕರಾದ ಜಯಪ್ರಕಾಶ್(42), ಜಯಂತ್ ಎಸ್.ಕುಂಪಲ(48) ಮತ್ತು ಧನಂಜಯ ರಾವ್ (53) ಎಂಬ ಮೂವರು ಅಕಾಲಿಕವಾಗಿ ಸಾವನ್ನಪ್ಪಿದ್ದರು.
25 year old commits suicide at Kumpala in Mangalore. The deceased has been identified as Akshay. He was said to be working at a mobile store in city. Repeated suicides are been reported from kumpala since a month.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm