ಬ್ರೇಕಿಂಗ್ ನ್ಯೂಸ್
26-03-23 10:37 pm Mangalore Correspondent ಕರಾವಳಿ
ಉಳ್ಳಾಲ, ಮಾ.26 : ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (46) ಎಂಬವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು. ಸುಮಾರು 20 ರಷ್ಟು ನೆಂಟರು ಮತ್ತು ಸ್ನೇಹಿತರನ್ನು ಕರೆದುಕೊಂಡು ಪ್ರಕಾಶ್ ಅವರು ತಮ್ಮ ತೋಟದ ಬಳಿಯಿರುವ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಅಲ್ಲಿ ನದಿ ನೀರಿಗೆ ಅಡಿಕೆ ಮರವನ್ನು (ಬಂಬು) ಅಡ್ಡವಾಗಿ ಹಾಕಿದ್ದರು. ಅದರಲ್ಲಿ ನಡೆದುಕೊಂಡು ಹೋಗುವ ಸಂದರ್ಭ ಆಕಸ್ಮಿಕ ಕಾಲುಜಾರಿ ಬಿದ್ದು , ನದಿ ನೀರಿನ ಹೂಳಿನಲ್ಲಿ ಹೂತುಹೋಗಿದ್ದರು. ಈಜಲು ಪರಿಣತರಾಗಿದ್ದರೂ ಮೇಲೆ ಬರಲು ಸಾಧ್ಯವಾಗದೇ, ನದಿ ನೀರಿನಲ್ಲಿ ಮುಳುಗಿದ್ದಾರೆ.

ಸ್ಥಳೀಯ ಈಜುಗಾರರು ಅವರನ್ನು ಮೇಲಕ್ಕೆತ್ತಲು ಪ್ರಯತ್ನಿಸಿದ್ದು ಸಾಧ್ಯವಾಗದೇ ಇದ್ದಾಗ, ಉತ್ತರಪ್ರದೇಶ ಮೂಲದ ಮರಳು ತೆಗೆಯುವ ಕಾರ್ಮಿಕರು ಶೋಧ ನಡೆಸಿ ಮೇಲಕ್ಕೆ ಎತ್ತಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಮೃತರು ಬೈಕಂಪಾಡಿಯ ಎಂ.ಸಿ.ಎಫ್‌ನಲ್ಲಿ ಹಲವು ವರ್ಷಗಳಿಂದ ಉದ್ಯೋಗ ನಡೆಸುತ್ತಿದ್ದರು. ಉದ್ಯೋಗದ ಜೊತೆಗೆ ಕೃಷಿ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿ ಪ್ರಗತಿ ಪರ ಕೃಷಿಕರೂ ಆಗಿದ್ದರು. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Prakash Gatti (46), a resident of Harekala Baitar, died after a footbridge collapsed into the Nethravati river on Sunday, March 26. Prakash had invited his friends and relatives to his home for an annual fair being held at the Kodamanittaya deity near Satottu in Harekala. Along with about 20 friends, he had gone to the banks of the Nethravati river near his garden where tree logs had been placed across the water.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 10:36 am
HK News Staffer
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am