ಬ್ರೇಕಿಂಗ್ ನ್ಯೂಸ್
29-03-23 06:44 pm Mangalore Correspondent ಕರಾವಳಿ
Photo credits : Representational Image
ಮಂಗಳೂರು, ಮಾ.29: ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸರು ವಾಹನ ತಪಾಸಣೆ ಬಿಗಿಗೊಳಿಸಿದ್ದು, ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 4.33 ಲಕ್ಷ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಸಿಸಿಬಿ ಪೊಲೀಸರು ಕಾರ್ ಸ್ಟ್ರೀಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಸಿಎಂ ಹಾಜೀಂ ಎಂಬವರ ಕಾರಿನಲ್ಲಿ 3.23 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಹಣಕ್ಕೆ ಯಾವುದೇ ದಾಖಲೆ ಇಲ್ಲದ ಕಾರಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಜೀಂ ಬಂಟ್ವಾಳ ತಾಲೂಕಿನ ಅಮ್ಮುಂಜೆ ನಿವಾಸಿಯಾಗಿದ್ದು, ಹಣದ ಬಗ್ಗೆ ಕೇಳಿದಾಗ ಅದು ತನ್ನ ಮಾವ ಕೊಟ್ಟಿರುವುದು, ಮಾವ ಕಾರ್ ಸ್ಟ್ರೀಟ್ ನಲ್ಲಿ ಜುವೆಲ್ಲರಿ ಹೊಂದಿದ್ದು ಹಣವನ್ನು ಅವರ ಪತ್ನಿಗೆ ಮುಟ್ಟಿಸಲು ತೆರಳುತ್ತಿದ್ದೇನೆ ಎಂದು ಹೇಳಿದ್ದರು.
ಆದರೆ ಪೊಲೀಸರು ಅದನ್ನು ಕೇಳದೆ ಹಣವನ್ನು ವಶಕ್ಕೆ ಪಡೆದು ಬಂದರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕದ್ರಿ ಪೊಲೀಸರು ನಂತೂರಿನಲ್ಲಿ ಕಾರು ತಪಾಸಣೆ ನಡೆಸುತ್ತಿದ್ದಾಗ 1.10 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಕಾಸರಗೋಡು ಮೂಲದ ಅನಿಲ್(35) ಮತ್ತು ಶಮೀಲ್ (39) ಎಂಬವರು ಕಾರಿನಲ್ಲಿದ್ದು ನಂತೂರಿನಿಂದ ಮಲ್ಲಿಕಟ್ಟೆಯತ್ತ ತೆರಳುತ್ತಿದ್ದರು. ಹಣದ ಕಂತೆ ಇದ್ದುದರ ಬಗ್ಗೆ ಸೂಕ್ತ ದಾಖಲೆ ಹೊಂದಿಲ್ಲದ ಕಾರಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಂದಿನ ಸೀಟಿನಲ್ಲಿರಿಸಿದ್ದ ಕಪ್ಪು ಸ್ಕೂಲ್ ಬ್ಯಾಗಿನಲ್ಲಿ ನಗದು ಹಣ ಪತ್ತೆಯಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ahead of the upcoming Assembly elections, city police have confiscated Rs 4.33 lac in cash that was being transported without valid documents in two separate incidents.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm