ಬ್ರೇಕಿಂಗ್ ನ್ಯೂಸ್
30-03-23 12:52 pm Mangalore Correspondent ಕರಾವಳಿ
ಕಡಬ, ಮಾ 30: ದೈವದ ನರ್ತನ ಸೇವೆ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ನಡೆದಿದೆ.
ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ (55) ಮೃತರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮಾ.30 ರಂದು ರಾತ್ರಿ 2 ಗಂಟೆ ಸುಮಾರಿಗೆ ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು.ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭಿಸಿದೆ.
ಘಟನೆ ನಡೆಯುವ ವೇಳೆ ಕಾಂತು ಅಜಿಲರವರು ಶಿರಾಡಿ ದೈವಕ್ಕೆ ನರ್ತನ ಸೇವೆ ನೀಡುತ್ತಿದ್ದರು. ಅವರ ಜತೆ ಕಲ್ಕುಡ ದೈವದ ಪಾತ್ರಿ ನರ್ತನ ಸೇವೆ ನೀಡುತ್ತಿದ್ದರು. ಅದಕ್ಕೂ ಮೊದಲು ಬರ್ಮೆರ್ ಹಾಗೂ ಗಿಣಿ ರಾಮ ದೈವಕ್ಕೆ ನೇಮೋತ್ಸವ ನಡೆದಿತ್ತು. ನರ್ತನ ಸೇವೆಯ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕಾಂತು ಅಜಿಲರವರು ನಿಧನ ಹೊಂದಿರಬಹುದೆಂದು ಅಂದಾಜಿಸಲಾಗಿದೆ.
A Daiva Nartaka died while performing an act on March 30 at Edamangala village of the taluk. The deceased is identiufed as Kantu Ajila Moolangiri, a renowned religious dancer. He was serving as a Daiva Nartaka for several years and performing in various Kolas and Nemas of Koodugattige in Edamangala village.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm