ಬ್ರೇಕಿಂಗ್ ನ್ಯೂಸ್
30-03-23 09:35 pm Mangalore Correspondent ಕರಾವಳಿ
ಮಂಗಳೂರು, ಮಾ.30: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಾದ್ಯಂತ ಸರಕಾರಿ ಕಚೇರಿಗಳಲ್ಲಿ ರಾಜಕೀಯ ವ್ಯಕ್ತಿಗಳ ಫೋಟೋಗಳನ್ನು ಬಳಸುವಂತಿಲ್ಲ. ನೀತಿಸಂಹಿತೆ ಪ್ರಕಾರ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಬೇಕು. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಸುದ್ದಿಗೋಷ್ಟಿ ಕರೆದು ಮಾಧ್ಯಮಕ್ಕೂ ಮಾಹಿತಿ ನೀಡಿದರಾದರೂ, ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಹೊರಭಾಗದಲ್ಲಿ ಹಾಕಿದ್ದ ರಾಜಕೀಯ ವ್ಯಕ್ತಿಗಳ ಫೋಟೊಗಳನ್ನೇ ತೆರವುಗೊಳಿಸಿಲ್ಲ.
ಸುದ್ದಿಗೋಷ್ಟಿಗೆ ತೆರಳಿದ್ದ ಮಾಧ್ಯಮದ ಮಂದಿ ಅಲ್ಲಿನ ಗೋಡೆಗಳಲ್ಲಿ ಅಂಟಿಸಿದ್ದ ರಾಜಕೀಯ ವ್ಯಕ್ತಿಗಳ ಫೋಟೋಗಳನ್ನು ಗಮನಿಸಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಇನ್ನಿತರ ವ್ಯಕ್ತಿಗಳ ಫೋಟೊಗಳನ್ನು ಗೋಡೆಗೆ ಹಾಕಿರುವುದನ್ನೂ ತೆಗೆದಿರಲಿಲ್ಲ. ಜಿಲ್ಲಾಧಿಕಾರಿ ಸುದ್ದಿಗೋಷ್ಟಿಯಲ್ಲಿ ರಾಜಕೀಯ ವ್ಯಕ್ತಿಗಳ ಬ್ಯಾನರ್, ಫೋಟೋಗಳನ್ನು ಕಟ್ಟುನಿಟ್ಟಾಗಿ ತೆರವುಗೊಳಿಸಲಾಗುವುದು, ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಚುನಾವಣಾ ವೀಕ್ಷಕರು ಪ್ರತಿ ತಾಲೂಕಿನಲ್ಲಿ ಈ ಬಗ್ಗೆ ನಿಗಾ ವಹಿಸುತ್ತಾರೆ ಎಂದು ಹೇಳಿದರು. ಆದರೆ ತಮ್ಮ ಕಚೇರಿಯಲ್ಲೇ ರಾಜಕೀಯ ವ್ಯಕ್ತಿಗಳ ಫೋಟೊ ತೆರವುಗೊಳಿಸದೆ ಜಿಲ್ಲಾಧಿಕಾರಿ ಎಟವಟ್ಟು ಮಾಡಿಕೊಂಡಿದ್ದರು.
ಕೋಲ, ನೇಮ, ಯಕ್ಷಗಾನಕ್ಕೆ ಅಡ್ಡಿಯಿಲ್ಲ
ನೀತಿಸಂಹಿತೆ ಇದ್ದರೂ, ಯಾವುದೇ ಧಾರ್ಮಿಕ ಆಚರಣೆಗಳಿಗೆ ತೊಂದರೆ ಇಲ್ಲ. ಅಲ್ಲದೆ, ಕರಾವಳಿಯ ಸಾಂಪ್ರದಾಯಿಕ ಕಲೆ ಯಕ್ಷಗಾನ ಪ್ರದರ್ಶನಕ್ಕೂ ತೊಂದರೆ ಇಲ್ಲ. ಕೋಲ, ನೇಮದಂತಹ ದೈವಾರಾಧನೆಗೂ ಅಡ್ಡಿ ಇರುವುದಿಲ್ಲ. ಯಾವುದೇ ಧರ್ಮದ ಧಾರ್ಮಿಕ ಆಚರಣೆಗಳಿಗೆ ನೀತಿಸಂಹಿತೆಯಿಂದ ಅಡ್ಡಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಯಾವುದೇ ಕಾರ್ಯಕ್ರಮದ ಬಗ್ಗೆ ಬ್ಯಾನರ್, ಬಂಟಿಂಗ್ಸ್ ಹಾಕುವುದಿದ್ದರೆ ಸ್ಥಳೀಯ ಚುನಾವಣಾಧಿಕಾರಿ ಪರವಾನಗಿ ಪಡೆಯಬೇಕು. ಅನುಮತಿ ಪಡೆಯದೆ ಬಂಟಿಂಗ್ಸ್ ಹಾಕುವಂತಿಲ್ಲ. ರಾಜಕೀಯ ಕಾರ್ಯಕ್ರಮದ ಬಗ್ಗೆಯೂ ಪೂರ್ವಾನುಮತಿ ಪಡೆದು ಬಂಟಿಂಗ್ಸ್ ಹಾಕಬಹುದು ಎಂದರು.
Mangalore Dc office breaks conduct of conduct during elections, BJP leaders photo frame remains at office.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
14-11-25 03:34 pm
Mangalore Correspondent
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm