ಬ್ರೇಕಿಂಗ್ ನ್ಯೂಸ್
03-04-23 04:43 pm Mangalore Correspondent ಕರಾವಳಿ
ಮಂಗಳೂರು, ಎ.3: ದುಡಿಯುವ ಮನಸ್ಸು ಮತ್ತು ಸಾಧಿಸುವ ಛಲ ಇರುವ ಸಾವಿರಾರು ಕಿರು ಕಸುಬುದಾರರಿಗೆ ನೆರವಿನ ಹಸ್ತಚಾಚುವ ಮೂಲಕ ಜನಸಾಮಾನ್ಯರಿಗೂ ಬದುಕು ಕಟ್ಟುವ ಭರವಸೆ ನೀಡಿದ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ರಜತ ಮಹೋತ್ಸವ ಸಂಭ್ರಮ ಮತ್ತು ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಎ.2ರಂದು ನಡೆಯಿತು.
ಬೆಳ್ಳಿಹಬ್ಬ ಸಂಭ್ರಮಾಚರಣೆ ಅಂಗವಾಗಿ ನಿರ್ಮಿಸಿದ ಸಂಘದ ನೂತನ ಕಟ್ಟಡದ ಉದ್ಘಾಟನೆಯನ್ನು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ನೆರವೇರಿಸಿದರು. ಸೇಫ್ ಲಾಕರ್ ಅನ್ನು ಡಾ.ಶಾಂತಾರಾಮ ಶೆಟ್ಟಿ ಉದ್ಘಾಟಿಸಿದರು. ಮೇಯರ್ ಜಯಾನಂದ ಅಂಚನ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆ ಮಂಗಳೂರಿನ ಇತಿಹಾಸದಲ್ಲೇ ದಾಖಲೆ ನಿರ್ಮಿಸಿದೆ. ಸಾಕಷ್ಟು ಬಡ ಕುಟುಂಬಗಳಿಗೆ, ಸಾಲ ನೀಡಿ ಉತ್ತಮ ಸೇವೆ ನೀಡಿದೆ. ಜೊತೆಗೆ ಸಂಸ್ಥೆ ಮುಂದಕ್ಕೆ ಉತ್ತಮ ಸಂಸ್ಥೆಯಾಗಿ ರಾಜ್ಯ ಮಟ್ಟದಲ್ಲಿ ಬೆಳಗಲಿ ಎಂದು ಮೇಯರ್ ಜಯಾನಂದ ಅಂಚನ್ ಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಕೃಷ್ಣ ಜೆ. ಪಾಲೆಮಾರ್ ಮಾತನಾಡಿ, ಸಂಘದ ನೂತನ ಕಟ್ಟಡ ಆಗಬೇಕೆಂದು ಸರ್ವ ಸದಸ್ಯರ ಆಶಯವಾಗಿತ್ತು. ಅಲ್ಲದೆ, ಸ್ಮರಣೀಯ ರೀತಿಯ ಕಟ್ಟಡವಾಗಿರಬೇಕು ಎನ್ನುವ ಆಶಯ ಆಗಿತ್ತು. ಇದಕ್ಕೆ ನಮ್ಮ ಎಲ್ಲಾ ಸದಸ್ಯರು ಸಹಕಾರ ಮಾಡಿದ್ದಾರೆ ಅನ್ನುವುದು ಸಂತೋಷದ ವಿಷಯ. ಸದಸ್ಯರು ತಮ್ಮ 20% ಡಿವಿಡೆಂಡ್ ಅನ್ನು ನೀಡಿದ್ದು ಸಹಕರಿಸಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಡಿ. ವೇದವ್ಯಾಸ ಕಾಮತ್, ಕರ್ಣಾಟಕ ಬ್ಯಾಂಕ್ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್, ಮಾಜಿ ಶಾಸಕ ಜೆ. ಆರ್. ಲೋಬೊ, ಡಾ.ಶಾಂತರಾಮ ಶೆಟ್ಟಿ ಮುಂದಕ್ಕೆ ಲಕ್ಷ್ಮಣಾನಂದ ಸಂಸ್ಥೆ ಶತಮಾನೋತ್ಸವ ಆಚರಿಸಲಿ ಎಂದು ಶುಭ ಹಾರೈಸಿದರು. ಡಾ.ರಾಜೇಂದ್ರ ಕುಮಾರ್ ಮಾತನಾಡಿ, ಸಂಸ್ಥೆ ಕಟ್ಟುವುದು ಸುಲಭ, ನಡೆಸುವುದು ಕಷ್ಟ. 2 ಸಾವಿರದಿಂದ 3 ಸಾವಿರ ಜನ ರಿಕ್ಷಾ ಚಾಲಕರಿಗೆ ಸಾಲ ನೀಡಿ ಅವರನ್ನು ಸ್ವಂತ ಮಾಲಕರನ್ನಾಗಿ ಮಾಡಿದ ಸಂಸ್ಥೆಗೆ ಅಭಿನಂದನೆ. ಸಂಸ್ಥೆಗೆ ವೈಯಕ್ತಿಕವಾಗಿ 5 ಲಕ್ಷ ರೂಪಾಯಿ ಚೆಕ್ ನೀಡಿದರು. ಸಮಾರಂಭದಲ್ಲಿ ಲಕ್ಷ್ಮಣಾನಂದ ಸಹಕಾರ ಸಂಘದ ಸ್ಥಾಪಕ ಪ್ರವರ್ತಕರನ್ನು, ಠೇವಣಿದಾರರನ್ನು, ಕಟ್ಟಡ ನಿರ್ಮಾಣದ ಪ್ರವೀಣ್, ಸಂಘದ ನಿರ್ದೇಶಕರನ್ನು ಮತ್ತು ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ರಾಮಚಂದ್ರ ಕೆ.ಎಸ್, ಜೆ.ಕೆ. ರಾವ್, ಪಿ. ಬಾಬು, ಬ್ಯಾಂಕಿನ ಸಿಇಒ, ಶಿವಪ್ರಸಾದ್, ಡಾ.ಜೆ. ರವೀಂದ್ರ, ಕೆ.ಎಸ್, ರಂಜನ್, ಶ್ರೀಮತಿ ವಾರಿಜಿ ಕೆ. ಡಾ.ಹೆಚ್. ಪ್ರಭಾಕರ್, ಡಾ.ಮಂಜುಳ ಎ. ರಾವ್, ಕೆ. ರವೀಂದ್ರ, ಜೈರಾಜ್ ಕೆ. ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
3 ಲಕ್ಷ ಬಂಡವಾಳದಿಂದ 400 ಕೋಟಿ ವ್ಯವಹಾರ
ಸಮಾಜದ ಉನ್ನತಿ ಮತ್ತು ಸಾಮಾನ್ಯ ಜನರಿಗೆ ಆರ್ಥಿಕ ನೆರವು ನೀಡುವ ಮಹತ್ತರ ಉದ್ದೇಶದಿಂದ ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾರ್ಗದರ್ಶನದಲ್ಲಿ 1997ರ ಡಿಸೆಂಬರ್ 7ರಂದು ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಲಾಗಿತ್ತು. ಕೇವಲ 3 ಲಕ್ಷ ರೂ. ಮೂಲ ಬಂಡವಾಳದೊಂದಿಗೆ 9 ಜನ ನಿರ್ದೇಶಕರು ಮತ್ತು 800 ಶೇರುದಾರರೊಂದಿಗೆ ಆರಂಭಗೊಂಡ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಇಂದು ಸುಮಾರು 5500ಕ್ಕೂ ಹೆಚ್ಚು ಶೇರುದಾರರನ್ನು ಹೊಂದಿದ್ದು, ವಾರ್ಷಿಕ ಸುಮಾರು ರೂ. 400 ಕೋಟಿಗೂ ಮಿಕ್ಕಿ ವ್ಯವಹಾರವನ್ನು ನಡೆಸುವ ಮೂಲಕ ಸಮಾಜಕ್ಕೆ ಹಲವು ಉತ್ತಮ ಸೇವಾ ಸೌಲಭ್ಯಗಳು ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಬಡವರ್ಗದವರಿಗೆ ಸಹಾಯ ಹಸ್ತ ಚಾಚುವ ಮೂಲಕ ಸಂಘವು ಉನ್ನತ ಮಟ್ಟಕ್ಕೇರಲು ಸಾಧ್ಯವಾಗಿದೆ. ಸಂಘವು 2022ರ ಸಾಲಿನಲ್ಲಿ ಒಂದು ಕೋಟಿಗೂ ಮಿಕ್ಕಿ ಲಾಭ ಪಡೆದಿದ್ದು, ಗ್ರಾಹಕರಿಗೆ ಶೇ. 20 ಡಿವಿಡೆಂಡ್ ನೀಡಿದೆ. ಸಂಘ ಸ್ಥಾಪನೆಯಾದ ವರ್ಷದಿಂದ ಈ ವರೆಗೆ ಎ ಗ್ರೇಡ್ ಮಾನ್ಯತೆ ಪಡೆದಿರುತ್ತದೆ.
ವೃತ್ತಿ ಬದುಕಿನ ಆಸರೆ ಅರಸುವ ಶ್ರೀಸಾಮಾನ್ಯರಿಗೆ ಸಂಘವು ದಾರಿದೀಪವಾಗಿದೆ. 2500ಕ್ಕೂ ಮಿಕ್ಕಿ ರಿಕ್ಷಾ ಚಾಲಕರಿಗೆ ಸಾಲ ಸೌಲಭ್ಯ ಒದಗಿಸಿ ಮಾಲಕರನ್ನಾಗಿ ರೂಪಿಸಿದ ಸಂಘವು ಬೀದಿ ವ್ಯಾಪಾರಿಗಳು, ತರಕಾರಿ ಮಾರಾಟಗಾರರು ಮುಂತಾದ ಸಾವಿರಾರು ಸಣ್ಣಪುಟ್ಟ ವೃತ್ತಿಬಾಂಧವರಿಗೆ ಮೂಲ ಬಂಡವಾಳಕ್ಕಾಗಿ ಸಾಲ ನೀಡುವ ಮೂಲಕ ಸ್ವಾವಲಂಬಿ ಬದುಕಿಗೆ ಪ್ರೇರಣೆ ನೀಡಿದೆ. ಸಾಲ ಸಹಕಾರದೊಂದಿಗೆ ಗ್ರಾಹಕರಿಗೆ ಸೂಕ್ತ ವೃತ್ತಿ ಮಾರ್ಗದರ್ಶನ ಕೂಡ ಕಾಲ ಕಾಲಕ್ಕೆ ನೀಡಲಾಗುತ್ತಿದೆ.
ಸಂಘವು ಉಚಿತ ಕಣ್ಣು ತಪಾಸಣೆ ಶಿಬಿರ, ರಕ್ತದಾನ ಶಿಬಿರ, ಸದಸ್ಯರ ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯ ಮತ್ತು ಹಲವು ಸಂಘ ಸಂಸ್ಥೆಗಳಿಗೆ ಸಹಾಯಧನ ನೀಡುವುದರ ಮೂಲಕ ಸಮಾಜ ಸೇವೆಗೂ ಬದ್ಧವಾಗಿದೆ. ಇಂದು ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ) ಮೋರ್ಗನ್ಸ್ ಗೇಟ್‌ನಲ್ಲಿ ಪ್ರಧಾನ ಕಚೇರಿ ಮತ್ತು ಶಾಖೆಯನ್ನು ಹೊಂದಿದ್ದು, ಹಂಪನಕಟ್ಟೆ, ಕಾವೂರು, ಕಾಟಿಪಳ್ಳ-ಕೈಕಂಬ ಮತ್ತು ಉಳ್ಳಾಲದಲ್ಲಿ ಐದು ಶಾಖಾ ಕಚೇರಿಗಳನ್ನು ಹೊಂದಿದೆ.
To mark the silver jubilee celebrations of Lakshmananda Multipurpose Cooperative Society, a newly constructed building at a cost of Rs 8 crore was inaugurated on its premises on Sunday, April 2 in Morgans Gate here.
26-08-25 04:48 pm
Bangalore Correspondent
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am