ಬ್ರೇಕಿಂಗ್ ನ್ಯೂಸ್
08-04-23 08:03 pm Mangaluru correspondent ಕರಾವಳಿ
ಕುಂದಾಪುರ, ಎ.8: ಬೈಂದೂರು ಸಮೀಪದ ಕೋಸಳ್ಳಿ ಫಾಲ್ಸ್ ನಲ್ಲಿ ಶುಕ್ರವಾರ ಸಂಜೆ ಗೆಳೆಯರ ಜೊತೆಗೆ ಈಜಲು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಶನಿವಾರ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎಎಸ್ಐ ಕುಮಾರ ಶೆಟ್ಟಿ ಎಂಬವರ ಮಗ ಚಿರಾಂತ್ ಶೆಟ್ಟಿ (20) ಎಂದು ತಿಳಿದುಬಂದಿದೆ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ಪದವಿ ಕಲಿಯುತ್ತಿದ್ದ.
ಚಿರಾಂತ್ ತನ್ನ ಗೆಳಯರೊಂದಿಗೆ ಶುಕ್ರವಾರ ಸಂಜೆ ಕೋಸಳ್ಳಿ ಫಾಲ್ಸ್ ಬಳಿಗೆ ಬಂದಿದ್ದರು. ಈ ವೇಳೆ ಚಿರಾಂತ್ ತನಗೆ ಈಜಲು ಬರುವುದೆಂದು ನೀರಿಗಿಳಿದಿದ್ದ. ಆದರೆ ನೀರಿಗಿಳಿದ ಚಿರಾಂತ್ ಕೆಳ ಹೊತ್ತಿನಲ್ಲೇ ಮುಳುಗಿ ನಾಪತ್ತೆಯಾಗಿದ್ದಾನೆ. ಘಟನೆ ನಡೆದ ಸ್ಥಳದಲ್ಲಿ ಶುಕ್ರವಾರ ಸಂಜೆಯೇ ಅಗ್ನಿಶಾಮಕದಳದ ಸಿಬ್ಬಂದಿ, ಸ್ಥಳೀಯರು ರಾತ್ರಿಯ ತನಕ ಹುಡುಕಾಟ ನಡೆಸಿದ್ದಾರೆ. ಶನಿವಾರ ಮತ್ತೆ ಕಾರ್ಯಾಚರಣೆ ನಡೆಸಿದ್ದು ಅಂತಿಮವಾಗಿ ಯುವಕನ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶುಕ್ರವಾರ ಗುಡ್ ಫ್ರೈಡೇ ಸಲುವಾಗಿ ಕಾಲೇಜಿಗೆ ರಜೆ ಇದ್ದುದರಿಂದ ಚಿರಾಂತ್ ತನ್ನ ಗೆಳೆಯರಾದ ಬೈಂದೂರು ಮೂಲದ ಕೀರ್ತನ್ ದೇವಾಡಿಗ ಮತ್ತು ಅಕ್ಷಯ್ ಆಚಾರ್ ಅವರ ಮನೆಗೆ ತೆರಳಿದ್ದರು. ಇತರ ಗೆಳೆಯರೂ ಸೇರಿಕೊಂಡು ಶುಕ್ರವಾರ ಅಪರಾಹ್ನ 3.30ರ ಸುಮಾರಿಗೆ ಫಾಲ್ಸ್ ಬಳಿಗೆ ತೆರಳಿದ್ದರು. ಈ ವೇಳೆ, ಚಿರಾಂತ್ ಮಾತ್ರ ನೀರಿಗೆ ಇಳಿದಿದ್ದರು ಎನ್ನಲಾಗಿದೆ.
The body of the student who was drowned while swimming at Koosalli Falls on Friday evening were found on Saturday April 8. The deceased is identified as Chiranth Shetty (20), son of ASI Kumara Shetty, a resident of Koppa taluk of Chikkamagaluru district. He was studying in second B Com with an aviation course at a private college in Mangaluru.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm