ಬ್ರೇಕಿಂಗ್ ನ್ಯೂಸ್
12-04-23 04:39 pm Mangaluru Correspondent ಕರಾವಳಿ
ಉಳ್ಳಾಲ, ಎ.12: ಆಕಸ್ಮಿಕ ಬೆಂಕಿ ಅನಾಹುತದಿಂದ ನಾಡದೋಣಿ ಮೀನುಗಾರರ ಬಲೆಗಳು ಸುಟ್ಟು ಕರಕಲಾದ ಘಟನೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದ್ದು 15 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.
ಬುಧವಾರ ಮಧ್ಯಾಹ್ನದ ವೇಳೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯ ನಾಡ ದೋಣಿಗಳ ಶೆಡ್ ಹತ್ತಿರ ಇರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಬಲೆಗೆ ಬೆಂಕಿ ತಗುಲಿದ್ದು ಬಲೆಗಳು ಸುಟ್ಟು ಕರಕಲಾಗಿವೆ. ಬಿಸಿಲಿನ ಜಳದಿಂದ ಬೆಂಕಿ ಹತ್ತಿಕೊಂಡಿದೆಯಾ ಅಥವಾ ಕಿಡಿಗೇಡಿಗಳ ಕೃತ್ಯದಿಂದ ಘಟನೆ ಸಂಭವಿಸಿದೆಯಾ ಎನ್ನುವ ಬಗ್ಗೆ ಶಂಕೆ ವ್ಯಕ್ತವಾಗಿದೆ.




ನಾಡದೋಣಿ ಮೀನುಗಾರರಾದ ಹೇಮಂತ್ ಉಚ್ಚಿಲ, ಸಂತೋಷ್ ಉಚ್ಚಿಲ, ಸಾಧನ ಉಚ್ಚಿಲ, ಶೇಖರ್ ಸೋಮೇಶ್ವರ, ಯೋಗೀಶ್ ಸೋಮೇಶ್ವರ ಅವರ ಮೀನಿನ ಬಲೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಕಳೆದ ಮಾರ್ಚ್ ತಿಂಗಳಲ್ಲೂ ಇದೇ ಪ್ರದೇಶದಲ್ಲಿ ಎರಡು ನಾಡ ದೋಣಿ ಮತ್ತು ಅದರಲ್ಲಿದ್ದ ಮೀನಿನ ಬಲೆಗಳು ಬೆಂಕಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು. ಸ್ಥಳಕ್ಕೆ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ ಭೇಟಿ ನೀಡಿ ಬಡ ಮೀನುಗಾರರಿಗೆ ಶೀಘ್ರವೇ ಸೂಕ್ತ ಪರಿಹಾರ ತೆಗೆಸಿ ಕೊಡುವಂತೆ ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ
Mangalore Sudden Fire at Someshwar in Rudrapaade, 15 lakh worth fishing nets destroyed.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm