ಬ್ರೇಕಿಂಗ್ ನ್ಯೂಸ್
21-04-23 05:17 pm Mangalore Correspondent ಕರಾವಳಿ
ಮಂಗಳೂರು, ಎ.21: ನನಗೆ ನೀಡಿರುವ ಭದ್ರತೆಯನ್ನು ಸರಕಾರ ಹಿಂತೆಗೆದುಕೊಂಡಿದ್ದು, ಈ ಮೂಲಕ ನನ್ನ ಹತ್ಯೆಗೆ ವ್ಯವಸ್ಥಿತ ಸಂಚು ನಡೆಯುತ್ತಿದೆ. ಒಂದು ವೇಳೆ ನನ್ನ ಹತ್ಯೆಯಾದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಅವರ ತಂಡವೇ ಹೊಣೆ ಎಂದು ಹಿಂದು ಸಂಘಟನೆ ಮುಖಂಡ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಸುಮಾರು 16 ವರ್ಷಗಳಿಂದ ಮುಸ್ಲಿಂ ಮೂಲಭೂತವಾದಿಗಳಿಂದ ಜೀವ ಬೆದರಿಕೆ ಇದ್ದ ಕಾರಣಕ್ಕಾಗಿ ಸರಕಾರವೇ ನನಗೆ ಭದ್ರತೆ ನೀಡಿತ್ತು. ನನಗೆ ನೀಡಿದ್ದ ಭದ್ರತೆಯನ್ನು ಈಗ ಚುನಾವಣೆ ನೆಪದಲ್ಲಿ ವಾಪಸ್ ಪಡೆದಿದ್ದಾರೆ. ನನ್ನ ಭದ್ರತೆ ವಾಪಸ್ ಪಡೆದಿದ್ದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕೈವಾಡ ಇದೆ. ಗೃಹ ಸಚಿವರು ಭದ್ರತೆ ನೀಡಲು ಸೂಚಿಸಿದ್ದರೂ, ಅದಕ್ಕೆ ಅವಕಾಶ ಕೊಟ್ಟಿಲ್ಲ ಅಂದ್ರೆ ಅದಕ್ಕೆ ರಾಜ್ಯಾಧ್ಯಕ್ಷನೇ ಕಾರಣ. ಈ ಮೂಲಕ ನನ್ನ ಹತ್ಯೆಗೆ ಇವರು ಮುಕ್ತ ಅವಕಾಶ ಮಾಡಿಕೊಟ್ಟಿದ್ದಾರೆ. ನಾನು ಹಿಂದುತ್ವಕ್ಕಾಗಿ, ರಾಷ್ಟ್ರ ಹಿತಕ್ಕಾಗಿ ನಡೆಸಿದ ಕೆಲಸಗಳಿಂದಾಗಿ ಬೆದರಿಕೆ ಬಂದಿತ್ತೇ ಹೊರತು ನನ್ನ ವೈಯಕ್ತಿಕ ವಿಷಯಕ್ಕಾಗಿ ಅಲ್ಲ ಎಂದರು.

ಇದೀಗ ಮೊತ್ತ ಮೊದಲ ಬಾರಿಗೆ ಯಾವುದೇ ಸೂಚನೆ ನೀಡದೇ ನನ್ನ ಭದ್ರತೆಯನ್ನು ಸರಕಾರ ವಾಪಸ್ ತೆಗೆದುಕೊಂಡಿದೆ. ಭದ್ರತೆ ನೀಡಬೇಕೆಂದು ಅನೇಕ ಕಡೆ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೂ ಇನ್ನೂ ನೀಡಿಲ್ಲ. ಶುಲ್ಕ ಪಾವತಿಸಿ ಭದ್ರತಾ ಸಿಬ್ಬಂದಿ ನೇಮಿಸಿಕೊಳ್ಳುವಷ್ಟು ಶಕ್ತನಾಗದೇ ಇರುವುದರಿಂದ ಹಾಗೂ ಈಗಲೂ ಬೆದರಿಕೆ ಇರುವುದರಿಂದ ಭದ್ರತೆ ಮುಂದುವರಿಸಬೇಕು ಎಂದು ಹಿಂದು ಹೋರಾಟಗಾರ, ಬಿಲ್ಲವ ನಾಯಕ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದ್ದಾರೆ.
ಆಕಸ್ಮಾತ್ ದುಷ್ಕರ್ಮಿಗಳ ಕೈಗೆ ಸಿಕ್ಕಿ ಬಲಿಯಾದರೆ ಅದಕ್ಕೆ ನೇರ ಕಾರಣ ಬಿಜೆಪಿ ರಾಜ್ಯಾಧ್ಯಕ್ಷರೇ ಕಾರಣ. ಜೊತೆಗೆ, ದುಡ್ಡು ಕೊಟ್ಟು ಗನ್ ಮ್ಯಾನ್ ಪಡೆದುಕೊಳ್ಳಿ ಎಂದು ಹೇಳಿದ ನಿರ್ಣಯ ಸಮಿತಿ ಹೊಣೆಯಾಗುತ್ತದೆ. ಅಷ್ಟೇ ಅಲ್ಲ, ನನ್ನ ಹತ್ಯೆಯಾದರೆ ಅಂತಿಮ ದರ್ಶನಕ್ಕೆ ಬಿಜೆಪಿ ಮುಖಂಡರು, ಸಂಘ ಪರಿವಾರದ ನಾಯಕರಿಗೆ ಅವಕಾಶ ಇಲ್ಲ. ನನ್ನ ಹತ್ಯೆ ನಡೆದರೆ ಯಾರೂ ಕೂಡಾ ನನ್ನ ಶವ ದರ್ಶನಕ್ಕೆ ಬರಬಾರದು. ನನ್ನ ಮೆರವಣಿಗೆ ನಡೆಸಬಾರದು. ಅದೇನೇ ಆದರೂ ನಾವು ಅದನ್ನು ಎದುರಿಸಲು ಮಾನಸಿಕವಾಗಿ ಸಿದ್ಧರಿದ್ದೇವೆ ಎಂದು ಹೇಳಿದರು.
ಹಿಂದುತ್ವಕ್ಕಾಗಿ ನನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದೇನೆ. ಈಗ ಹಿಂದುತ್ವದ ನೈಜ ಹೋರಾಟಗಾರರಿಗೆ ಬೆಲೆ ಇಲ್ಲದಾಗಿದೆ. ಹಿಂದುತ್ವ ಅನ್ನುವುದು ಸ್ಚಾರ್ಥ ರಾಜಕೀಯಕ್ಕೆ ಬಳಕೆಯಾಗುತ್ತಿದೆ. ಈಗಿನಿಂದಲೇ ಹಿಂದು ಸಂಘಟನೆ ಕಾರ್ಯಕರ್ತರಿಗೆ ಕರೆ ನೀಡುತ್ತಿದ್ದೇನೆ, ನಿಮ್ಮ ಜೀವಕ್ಕೆ ನೀವೇ ಹೊಣೆಗಾರರು. ಯಾರನ್ನೂ ನಂಬಿ ಹೋರಾಟಕ್ಕೆ ಇಳಿಯಬೇಡಿ. ಹಿಂದು ಸಂಘಟನೆಯಲ್ಲಿದ್ದವರು ಯಾರು ಕೂಡ ಪಕ್ಷ ಹಾಗೂ ಸರ್ಕಾರದ ವಿರುದ್ಧ ಮಾತಾಡುವಂತಿಲ್ಲ ಎನ್ನುವ ಸ್ಥಿತಿಯಿದೆ. ಮಾತನಾಡಿದವರ ವಿರುದ್ಧ ಷಡ್ಯಂತ್ರ ರೂಪಿಸಿ ಟಾರ್ಗೆಟ್ ಮಾಡುತ್ತಿದ್ದಾರೆ. ಇದನ್ನೆಲ್ಲ ಸಹಿಸಿಕೊಂಡು ಕೂರಲು ಸಾಧ್ಯವಾಗದು. ಅದಕ್ಕಾಗಿ ಯಾರು ಕೂಡ ತಮ್ಮ ಜೀವದ ಬಗ್ಗೆ ಯಾರನ್ನೋ ನಂಬಿಕೊಂಡು ಹೋರಾಟಕ್ಕೆ ಇಳಿಯದಿರಿ ಎಂದು ಸಲಹೆ ನೀಡುವುದಾಗಿ ತಿಳಿಸಿದರು.
Mangalore Satyajith Surathkal slams Nalin Kateel, says if am killed Nalin is solely responsible. Satyajith Gun man was taken back. Don't trust Hindutava and work you have to loose your life added Satyajith.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm