ಬ್ರೇಕಿಂಗ್ ನ್ಯೂಸ್
24-04-23 01:08 pm Mangalore Correspondent ಕರಾವಳಿ
ಉಳ್ಳಾಲ: ಎ.24 : ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ಎಸ್ಎಫ್ ನಾಯಕ ಅಲ್ತಾಫ್ ಕುಂಪಲ ಪಕ್ಷದ ಮುಖಂಡರಿಗೆ ಮಾಹಿತಿ ನೀಡದೆ ನಾಮಪತ್ರವನ್ನು ಹಿಂಪಡೆದಿದ್ದಾರೆ. ಅಲ್ಲದೆ ಅವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿರುವುದಾಗಿ ಪಕ್ಷದ ನಾಯಕರು ಆರೋಪಿಸಿದ್ದಾರೆ.
ಅಲ್ತಾಫ್ ಕುಂಪಲ ಹಲವು ವರ್ಷಗಳಿಂದ ಎಸ್ ಎಸ್ ಎಫ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಇತ್ತೀಚೆಗೆ ಜೆಡಿಎಸ್ ಪಕ್ಷದಲ್ಲಿ ಕಾಣಿಸಿಕೊಂಡ ಅವರು ವಿಧಾನ ಪರಿಷತ್ ಸದಸ್ಯ ಬಿ.ಎಂ ಫಾರುಕ್ ಅವರ ಮನವೊಲಿಸಿ ಜೆಡಿಎಸ್ ನಿಂದ ಉಳ್ಳಾಲ ಕ್ಷೇತ್ರದಿಂದ ಸ್ಪರ್ಧಿಸಲು ಬಿ ಫಾರಂ ಪಡೆದುಕೊಂಡಿದ್ದರು. ಉಳ್ಳಾಲ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಹಾಗೂ ಜಿಲ್ಲಾ ಮುಖಂಡರ ಜೊತೆಗೆ ನಾಮಪತ್ರ ಸಲ್ಲಿಸಿದ್ದ ಅವರು ಪ್ರಚಾರ ಕಾರ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ಎ.21 ರಂದು ಅಲ್ತಾಫ್ ಅವರು ತನ್ನ ಪಕ್ಷದ ಮುಖಂಡರುಗಳಿಗೆ ಮಾಹಿತಿಯೇ ಇಲ್ಲದೆ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದರು.
ಈ ಕುರಿತು ಎ.22 ರಂದು ತಾಲೂಕು ಚುನಾವಣಾ ಕಚೇರಿಯ ನೋಟೀಸು ಬೋರ್ಡಿನಲ್ಲಿ ಮಾಹಿತಿ ಹಾಕಲಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಜೆಡಿಎಸ್ ಮುಖಂಡರಿಗೆ ಮಾಹಿತಿ ನೀಡಿದ್ದಾರೆ. ಮುಖಂಡರು ಅಲ್ತಾಫ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಕಳೆದ ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಆಗಿದೆ.
Altaf Kumpala, a leader of SSF, who had filed nomination on JD(S) ticket from Ullal legislative constituency, withdrew the nomination on April 21 without informing party leaders. In addition, he has switched off his mobile phone as per the accusation made by JD(S) leaders. Altaf Kumpala was active in SSF for many years. Recently, he joined the JD(S) and got B form to contest from Ullal after convincing MLA B M Farooq.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm