ಬ್ರೇಕಿಂಗ್ ನ್ಯೂಸ್
26-04-23 03:48 pm Mangalore Correspondent ಕರಾವಳಿ
ಉಳ್ಳಾಲ, ಎ.26 : ತಿಂಗಳ ಹಿಂದಷ್ಟೆ ಉಳ್ಳಾಲದ ಧರ್ಮನಗರದಲ್ಲಿ ಒಂದಸ್ತಿನ ಸುಸಜ್ಜಿತ ಮನೆ ಕಟ್ಟಿಸಿದ್ದ ಕಾರ್ ಡೀಲರ್ ಓರ್ವರು ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಶೂ, ಮೊಬೈಲ್, ಪರ್ಸನ್ನ ಬಿಟ್ಟು ನಾಪತ್ತೆಯಾಗಿದ್ದು ಆತ್ಮಹತ್ಯೆಗೈದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ನಾಪತ್ತೆಯಾದ ವ್ಯಕ್ತಿಯ ಶೋಧ ನಡೆಸುತ್ತಿದ್ದಾರೆ.
ವಸಂತ್ ಅಮೀನ್ (49) ನಾಪತ್ತೆಯಾದವರು. ಮೂಲತಃ ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳ ಹಿಂದಷ್ಟೇ ಸುಸಜ್ಜಿತ ಮನೆಯನ್ನು ಕಟ್ಟಿದ್ದರು. ವಿವಾಹಿತರಾಗಿರುವ ವಸಂತ್ ಅವರಿಗೆ ಎಳೆಯ ಪ್ರಾಯದ ಹೆಣ್ಣು ಮಗುವಿದ್ದಾಳೆ. ಇಂದು ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ.


ವಸಂತ್ ಅವರು ಬಿಕರ್ನಕಟ್ಟೆಯ ಜಯಶ್ರೀ ಗೇಟ್ ಬಳಿ ಸೆಕೆಂಡ್ಸ್ ಕಾರು ಮಾರಾಟದ ಕಚೇರಿ ಹೊಂದಿದ್ದಾರೆ. ಕಚೇರಿಗೆ ಬೆಳಗ್ಗೆ ಫೋನ್ ಮಾಡಿದ್ದ ವಸಂತ್ ಅವರು ಜ್ವರದಿಂದ ಬಳಲುತ್ತಿದ್ದು ತಾನು ಬರುವುದಿಲ್ಲ ಎಂದು ಸಿಬ್ಬಂದಿಯಲ್ಲಿ ತಿಳಿಸಿದ್ದರಂತೆ. ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಹಾಗೂ ರುದ್ರಪಾದೆಯಲ್ಲಿ ಪರ್ಸ್, ಶೂ ಹಾಗೂ ಮೊಬೈಲ್ ಪತ್ತೆಹಚ್ಚಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ವಸಂತ್ ಅಮೀನ್ ಅವರಿಗಾಗಿ ಹುಡುಕಾಟ ಆರಂಭಿಸಲಾಗಿದೆ.
Ullal Car dealer goes missing from Rudra paade in Someshwara, car and shoes found, suicide suspected. The missing person is said to be Vasant Amin (49).
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm