ಬ್ರೇಕಿಂಗ್ ನ್ಯೂಸ್
30-04-23 04:13 pm Mangalore Correspondent ಕರಾವಳಿ
ಪುತ್ತೂರು, ಎ.30 : ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಹವಾ ಎಬ್ಬಿಸಿರುವ ಅರುಣ್ ಪುತ್ತಿಲ ವಿರುದ್ಧ ಬಿಜೆಪಿ ನಾಯಕರು ತಮ್ಮ ಪಕ್ಷದ ಚಿಹ್ನೆ, ನಾಯಕರ ಹೆಸರನ್ನು ಬಳಸಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆಂದು ದೂರು ನೀಡಿದ್ದು ಚುನಾವಣಾ ಅಧಿಕಾರಿಗಳು ಪುತ್ತಿಲರ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಚುನಾವಣಾ ಏಜೆಂಟ್ ಆಗಿರುವ ರಾಜೇಶ್ ಬನ್ನೂರು ಅವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದು ಪಕ್ಷೇತರ ಅಭ್ಯರ್ಥಿ ತನ್ನ ಚುನಾವಣಾ ಪ್ರಚಾರ ಸಾಮಗ್ರಿ, ಜಾಲತಾಣ, ಪತ್ರಿಕಾ ಪ್ರಕಟಣೆಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಸರನ್ನು ಉಲ್ಲೇಖಿಸುತ್ತಿದ್ದಾರೆ ಹಾಗೂ ಫೋಟೊ ಬಳಸಿ ತಾನು ಬಿಜೆಪಿ ಅಭ್ಯರ್ಥಿಯೆಂದು ಬಿಂಬಿಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ಚುನಾವಣಾ ಆಯೋಗ ನೀಡಿರುವ ತನ್ನ ಚಿಹ್ನೆಯನ್ನು ಪ್ರಚಾರ ಮಾಡಬೇಕೇ ವಿನಾ ರಾಷ್ಟ್ರೀಯ ನಾಯಕರ ಬಗ್ಗೆ ಭಾವಚಿತ್ರಗಳನ್ನು ಪ್ರಚಾರದಲ್ಲಿ ಬಳಸುವಂತಿಲ್ಲ. ಇಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು ಸೂಕ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಅದರಂತೆ, ಅರುಣ್ ಕುಮಾರ್ ಪುತ್ತಿಲರ ಕಚೇರಿಗೆ ತೆರಳಿ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕ್ಷೇತ್ರದ ನೋಡಲ್ ಅಧಿಕಾರಿ ನವೀನ್ ಕುಮಾರ್ ಭಂಡಾರಿ ನೇತೃತ್ವದ ತಂಡ, ಮುಕ್ರಂಪಾಡಿಯ ಪುತ್ತಿಲ ಅವರ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ್ದು ಅಂತಹ ಯಾವುದೇ ವಸ್ತುಗಳು ಪತ್ತೆಯಾಗದೇ ಇರುವುದರಿಂದ ಚುನಾವಣಾಧಿಕಾರಿಗೆ ವರದಿ ಸಲ್ಲಿಸಿದ್ದಾರೆ. ಇದೇ ವೇಳೆ, ತಾನೇನು ಚುನಾವಣಾ ಅಕ್ರಮ ನಡೆಸಿಲ್ಲ. ನೀತಿ ಸಂಹಿತೆ ಉಲ್ಲಂಘನೆಯನ್ನೂ ಮಾಡಿಲ್ಲ. ತನ್ನ ಮೇಲೆ ನೀಡಿರುವ ದೂರು ಸುಳ್ಳು ಎಂದು ಅರುಣ್ ಪುತ್ತಿಲ ತಿಳಿಸಿದ್ದಾರೆ.
Puttur Independent candidate Arun Puthila uses PM Modi name in campaigning, BJP files complaint, election commission search office. The complaint was filed by BJP MLA Candidate Asha Thimmappa PA.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm