ಬ್ರೇಕಿಂಗ್ ನ್ಯೂಸ್
01-05-23 10:03 pm Mangalore Correspondent ಕರಾವಳಿ
ಮಂಗಳೂರು, ಮೇ 1 : ಪ್ರಧಾನಿ ನರೇಂದ್ರ ಮೋದಿ ಅವರು ಮೇ 3ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಮೂಲ್ಕಿ ಬಳಿಯ ಕೊಳ್ನಾಡಿನಲ್ಲಿ ವಿಶಾಲ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ಎಲ್ಲ ಸಿದ್ಧತೆ ನಡೆದಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ತಿಳಿಸಿದರು.
ಪಕ್ಷದ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕ ನಾಯಕನ ಸ್ವಾಗತಕ್ಕೆ ಕರಾವಳಿಯ ಜನತೆ ತವಕದಿಂದ ಕಾಯುತ್ತಿದ್ದಾರೆ. ಪ್ರಧಾನಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರತಿ ಬೂತ್ ಮಟ್ಟದಲ್ಲಿ ತಯಾರಿ ನಡೆದಿದ್ದು ಪ್ರತಿ ಬೂತ್‌ಗಳಿಂದ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಹೇಳಿದರು. ಈ ಬಾರಿ ಮೋದಿ ಸಮಾವೇಶವನ್ನು ಗ್ರಾಮಾಂತರ ಪ್ರದೇಶದಲ್ಲಿ ನಡೆಸುತ್ತಿದ್ದು, ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲಾಗಿದೆ. ಎರಡೂ ಜಿಲ್ಲೆಗಳ ಮಧ್ಯಭಾಗದಲ್ಲಿ ಕಾರ್ಯಕ್ರಮ ಆಯೋಜಿಸಿರುವುದರಿಂದ ದ.ಕ ಮತ್ತು ಉಡುಪಿ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಆಗಮಿಸಲು ಅನುಕೂಲವಾಗುತ್ತದೆ. ಈಗಾಗಲೇ ವೇದಿಕೆ ಮತ್ತು ಪೆಂಡಾಲ್ ಕೆಲಸಗಳು ಮುಕ್ತಾಯದ ಹಂತದಲ್ಲಿದ್ದು, ವಾಹನಗಳ ಪಾರ್ಕಿಂಗ್‌ಗೆ ಸಾಕಷ್ಟು ಸ್ಥಳಾವಕಾಶ ಒದಗಿಸಲಾಗಿದೆ. ಮಂಗಳವಾರ ಮಧ್ಯಾಹ್ನದೊಳಗೆ ಎಲ್ಲ ಕೆಲಸ ಪೂರ್ಣಗೊಂಡು ಇಡೀ ಪ್ರದೇಶವನ್ನು ಭದ್ರತಾ ಸಿಬ್ಬಂದಿಗಳಿಗೆ ಬಿಟ್ಟುಕೊಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಸುದರ್ಶನ್ ಮಾಹಿತಿ ನೀಡಿದರು.

ಬೆಳಗ್ಗೆ 9 ಗಂಟೆಯೊಳಗೆ ಸಭೆಗೆ ಬನ್ನಿ
ಪ್ರಧಾನಿ ಮೋದಿ ಸಾರ್ವಜನಿಕ ಸಭೆ ಬೆಳಗ್ಗೆ 10 ಗಂಟೆಗೆ ನಿಗದಿಯಾಗಿದ್ದು, ಆಗಮಿಸುವ ಕಾರ್ಯಕರ್ತರು, ಸಾರ್ವಜನಿಕರು ಬೆಳಗ್ಗೆ 9 ಗಂಟೆಯೊಳಗೆ ಸಮಾವೇಶದ ಸ್ಥಳಕ್ಕೆ ಆಗಮಿಸಬೇಕು. ಭದ್ರತಾ ಕಾರಣಗಳಿಗೆ ಪ್ರಧಾನಿ ಆಗಮಿಸುವ ಹೊತ್ತಿಗೆ ಸಮಾವೇಶದ ಪರಿಸರದಲ್ಲಿ ಸಾರ್ವಜನಿಕರ ಸಂಚಾರ ನಿರ್ಬಂಧಿಸಲಾಗುತ್ತದೆ. ಹೀಗಾಗಿ ಪ್ರಧಾನಿ ಸ್ಥಳಕ್ಕೆ ಆಗಮಿಸುವ ಮೊದಲೇ ಸಾರ್ವಜನಿಕರು ಸಮಾವೇಶದ ಮೈದಾನದಲ್ಲಿರಬೇಕು ಎಂದು ಸುದರ್ಶನ್ ಮನವಿ ಮಾಡಿದರು.

ಪ್ರಧಾನಿಗೆ ಕುಡ್ಲದ ವಿಶೇಷ ಆತಿಥ್ಯ
ಪ್ರಧಾನಿ ನರೇಂದ್ರ ಮೋದಿ ಅವರು ಕರಾವಳಿಯ ತಿಂಡಿ ತಿನಿಸುಗಳನ್ನು ವಿಶೇಷವಾಗಿ ಇಷ್ಟಪಡುತ್ತಿದ್ದು, ಅವರಿಗಾಗಿ ಉಪ್ಪಿಟ್ಟು ಅವಲಕ್ಕಿ, ಮೂಡೆ, ನೀರ್‌ದೋಸೆ ಮುಂತಾದ ಖಾದ್ಯಗಳನ್ನು ಸಿದ್ಧಪಡಿಸಲಾಗುತ್ತಿದೆ.
ಮೂರು ಕಡೆ ಹೆಲಿಪ್ಯಾಡ್
ದೆಹಲಿಯಿಂದ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಬಜಪೆಯಿಂದ ಹೆಲಿಕಾಪ್ಟರ್ ಮೂಲಕ ಸಮಾವೇಶದ ಸ್ಥಳಕ್ಕೆ ಆಗಮಿಸುತ್ತಾರೆ. ಹೆಲಿಕಾಪ್ಟರ್ ಇಳಿಯಲು ಪಣಂಬೂರಿನ ಎನ್‌ಎಂಪಿಎ, ಸುರತ್ಕಲ್‌ನ ಎನ್‌ಐಟಿಕೆ ಹಾಗೂ ಮೂಲ್ಕಿಯ ಸಮಾವೇಶದ ಸ್ಥಳದ ಪಕ್ಕದಲ್ಲಿ ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.

ಎರಡು ಲಕ್ಷಕ್ಕೂ ಹೆಚ್ಚು ಜನರ ನಿರೀಕ್ಷೆ
ಸಮಾವೇಶದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಎರಡು ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದ್ದು, ಎರಡೂ ಜಿಲ್ಲೆಗಳ ಒಟ್ಟು 13 ಕ್ಷೇತ್ರಗಳ ಅಭ್ಯರ್ಥಿಗಳೂ ಹಾಜರಿರುತ್ತಾರೆ. ಪ್ರಧಾನಿ ಮೋದಿ ಅವರು ಮೂಲ್ಕಿಯ ಸಮಾವೇಶದ ಬಳಿಕ ಅಂಕೋಲಕ್ಕೆ ತೆರಳಲಿದ್ದಾರೆ. ಬಳಿಕ ಬೆಳಗಾವಿಯ ಕಿತ್ತೂರಿನಲ್ಲಿ ಸಾರ್ವಜನಿಕ ಸಮಾವೇಶ ನಡೆಲಿಸದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಜಿಲ್ಲಾ ಪಂಚಾಯತ್ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಪಕ್ಷದ ಮುಖಂಡರಾದ ಸಂಜಯ್ ಪ್ರಭು ಉಪಸ್ಥಿತರಿದ್ದರು.
PM Modi in Mulki Mangalore on May 3rd for election campaign, arrangement in full swing. According to Uday Kumar Shetty, in charge of Mangaluru section, "PM Modi will arrive at Mulky on May 3 and address a huge public meeting. More than three lakh people will participate in the meeting." Uday spoke at a press conference at the Udupi district media house.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm