ಬ್ರೇಕಿಂಗ್ ನ್ಯೂಸ್
01-05-23 11:06 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 1 : ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಪ್ರಯಾಣಿಸುತ್ತಿದ್ದ ಕಾರಿಗೆ ಉಜಿರೆ ಪೇಟೆಯಲ್ಲಿ ಯಾರೋ ಕಿಡಿಗೇಡಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಡೆದಿದೆ.
ಭಾನುವಾರ ರಾತ್ರಿ ಉಜಿರೆಯ ಕಾನ್ವೆಂಟ್ ರಸ್ತೆಯಲ್ಲಿ ಘಟನೆ ನಡೆದಿದ್ದು ಪ್ರವೀಣ್ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಫೋನ್ ಬಂತೆಂದು ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಈ ವೇಳೆ, ಇಬ್ಬರು ಬೈಕಿನಲ್ಲಿ ಬಂದ ಯುವಕರು ಕಲ್ಲು ತೂರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರವೀಣ್ ಫೆರ್ನಾಂಡಿಸ್ ತನ್ನ ಕಾರಿಗೆ ಯಾರೋ ಬಂದು ಡಿಕ್ಕಿ ಹೊಡೆದಿರಬೇಕೆಂದು ನೋಡಿದಾಗ ಕಲ್ಲು ಕಂಡಿದ್ದು ಗಾಜು ಒಡೆದು ಹೋಗಿತ್ತು.
ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಪ್ರವೀಣ್ ದೂರು ನೀಡಿದ್ದಾರೆ. ಪ್ರವೀಣ್ ಹೊಟೇಲ್ ಉದ್ಯಮಿಯಾಗಿದ್ದು ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಿದ್ದಾರೋ, ರಾಜಕೀಯ ದ್ವೇಷದಿಂದ ಮಾಡಿದ್ದಾರೋ ಗೊತ್ತಿಲ್ಲ ಎಂದು ಹೇಳುತ್ತಾರೆ. ಪೊಲೀಸರು ತನಿಖೆ ನಡೆಸಿ ಸತ್ಯ ಹೊರಗೆ ತರಬೇಕೆಂದು ತಿಳಿಸಿದ್ದಾರೆ. ನನಗೆ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಸಮಾನ ರೀತಿಯ ಸ್ನೇಹಿತರು ಇದ್ದಾರೆ. ಈಗ ಚುನಾವಣೆ ಆಗಿದ್ದರಿಂದ ರಾಜಕೀಯದಲ್ಲಿ ಸಕ್ರಿಯ ಇದ್ದೇನೆ. ಯಾಕಾಗಿ ಟಾರ್ಗೆಟ್ ಮಾಡಿದ್ದಾರೆ ಗೊತ್ತಿಲ್ಲ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಿಸಿದ್ದಾರೆ. ದೊಡ್ಡ ಕಲ್ಲು ಬಿದ್ದಿರುವುದರಿಂದ ಬೆಲೆಬಾಳುವ ಕಾರಿನ ಹಿಂಭಾಗದ ಗಾಜು, ಡಿಕ್ಕಿಯ ಭಾಗ ಒಡೆದು ಹೋಗಿದೆ.
Bike borne youths pelt Stone on Youth Congress leader Praveen Fernandes Car in Belthangady. Praveen is close friend of Rakshith Shivram. Praveen is campaigning with Rakshith.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm