ಬ್ರೇಕಿಂಗ್ ನ್ಯೂಸ್
02-05-23 10:12 pm Udupi/Mangalore Correspondent ಕರಾವಳಿ
ಉಡುಪಿ/ಮಂಗಳೂರು, ಮೇ 2 : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಬಜರಂಗದಳ ಸಂಘಟನೆ ನಿಷೇಧಿಸುವುದಾಗಿ ಹೇಳಿರುವುದನ್ನು ವಿರೋಧಿಸಿ ಬಜರಂಗದಳದ ಕಾರ್ಯಕರ್ತರು ಉಡುಪಿ ಮತ್ತು ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಪ್ರತಿಗಳನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿಯಲ್ಲಿ ಬಜರಂಗದಳ ರಾಜ್ಯ ಸಂಯೋಜಕ ಸುನಿಲ್ ಕೆ.ಆರ್. ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ತಾಕತ್ತಿದ್ದರೆ ಬಜರಂಗದಳವನ್ನು ನಿಷೇಧಿಸಿ ತೋರಿಸಬೇಕು. ಆಗ ನಮ್ಮ ಶಕ್ತಿ ಏನು ಎಂಬುದನ್ನು ತೋರಿಸುತ್ತೇವೆ. ನಾವು ದೇಶ, ಧರ್ಮದ ರಕ್ಷಣೆಗಾಗಿ ಸಂಘರ್ಷ ಮಾಡಿಕೊಂಡು ಬಂದಿದ್ದೇವೆ. ಸ್ವಾಭಿಮಾನಿ ಕಾರ್ಯಕರ್ತರ ಪಡೆಯನ್ನು ಕೆಣಕಿದರೆ ಸುಮ್ಮನೆ ಕೂರುವುದಿಲ್ಲ. ಕೂಡಲೇ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದರೆ ಮೇ 10ರಂದು ಸೂಕ್ತ ಉತ್ತರ ಕೊಡಲಾಗುವುದು ಎಂದು ಎಚ್ವರಿಕೆ ನೀಡಿದರು.


ಮಂಗಳೂರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಹಾಕಿದ್ದಾರೆ. ಬಜರಂಗದಳ ಆರಂಭವಾಗಿದ್ದೇ ಸಂಘರ್ಷದಿಂದ ಸಂಘರ್ಷಕ್ಕಾಗಿ. ಸೇವಾ ಸುರಕ್ಷಾ ಸಂಸ್ಕಾರ ಎಂಬ ದ್ಯೇಯ ವಾಕ್ಯ ಇಟ್ಟುಕೊಂಡು ಇಡೀ ದೇಶದಾದ್ಯಂತ ಬಜರಂಗದಳ ಕೆಲಸ ಮಾಡುತ್ತಿದೆ, ಬಜರಂಗ ದಳ ಯಾವತ್ತು ದೇಶ ವಿರೋಧಿ ಕೃತ್ಯ ನಡೆಸಿಲ್ಲ, ಪೊಲೀಸ್ ಠಾಣೆಗೆ ಬೆಂಕಿ ಕೊಟ್ಟಿಲ್ಲ. ಆದರೂ ನಿಷೇಧ ಮಾಡ್ತೇವೆಂದು ಹೇಳಿ ಕಾಂಗ್ರೆಸ್ ಪೋಸು ಕೊಡುತ್ತಾರೆ ಎಂದು ಪುನೀತ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದರು.
Congress to Ban Bajrang Dal after coming to power, members protest in Mangalore and Udupi. Hours after Congress, in its manifesto, promised to impose a complete ban on the youth wing of the Sangh-affiliated Vishwa Hindu Parishad (VHP)-- Bajrang Dal, BJP and the latter lambasted the latest announcement and called it a deliberate attempt to hamper peace and prosperity of the country.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm