ಬ್ರೇಕಿಂಗ್ ನ್ಯೂಸ್
07-05-23 10:13 pm Mangalore Correspondent ಕರಾವಳಿ
ಉಳ್ಳಾಲ, ಮೇ 7 : ಎಸ್ಡಿಪಿಐ ರ್ಯಾಲಿ ವೇಳೆ ಎಂಟ್ರಿ ನೀಡಿದ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನದ ಚಾಲಕ ಹಾರ್ನ್ ಹಾಕಿದ್ದಕ್ಕೆ ಆಕ್ರೋಶಗೊಂಡ ಎಸ್ಡಿಪಿಐ ಕಾರ್ಯಕರ್ತರು ಚಾಲಕನ ಮೇಲೆ ಹಲ್ಲೆಗೈದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ಎಸ್ಡಿಪಿಐ ಪಕ್ಷದ ವತಿಯಿಂದ ಭಾನುವಾರ ಸಂಜೆ ಉಳ್ಳಾಲದಿಂದ ದೇರಳಕಟ್ಟೆಯ ವರೆಗೆ ವಾಹನ ಜಾಥಾ ಹಮ್ಮಿಕೊಳ್ಳಲಾಗಿತ್ತು. ವಾಹನ ಜಾಥಾದಲ್ಲಿ ಸಾವಿರಾರು ಎಸ್ಡಿಪಿಐ ಕಾರ್ಯಕರ್ತರು ಪಾಲ್ಗೊಂಡಿದ್ದು ತೊಕ್ಕೊಟ್ಟು, ದೇರಳಕಟ್ಟೆ ರಸ್ತೆಯಲ್ಲಿ ಸಂಚಾರ ವ್ಯತ್ಯಯಗೊಂಡಿತ್ತು. ಎಸ್ಡಿಪಿಐ ರ್ಯಾಲಿಯು ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಮುಂಭಾಗ ತಲುಪಿದಾಗ ಅಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದ ವಾಹನವು ಎದುರಾಗಿ ಚಾಲಕ ಹಾರ್ನ್ ಹೊಡೆದಿದ್ದ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಎಸ್ಡಿಪಿಐ ಕಾರ್ಯಕರ್ತರು ಪ್ರಶ್ನಿಸಿದಾಗ ಸಂಘರ್ಷ ಉಂಟಾಗಿದ್ದು ವಾಹನ ಚಾಲಕ ನೌಫಾಲ್ ಮೇಲೆ ಹಲ್ಲೆ ನಡೆದಿದೆ. ಅಲ್ಲದೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆಯೂ ಹೊಯ್ ಕೈ ನಡೆದಿದೆ.

ಹಲ್ಲೆಗೊಳಗಾದ ಕಾಂಗ್ರೆಸ್ ಪ್ರಚಾರ ವಾಹನದ ಚಾಲಕ ನೌಫಾಲ್ ಆಸ್ಪತ್ರೆಗೆ ದಾಖಲಾಗಿದ್ದು ಕೊಣಾಜೆ ಪೊಲೀಸರು ಎಸ್ಡಿಪಿಐ ಕಾರ್ಯಕರ್ತನೋರ್ವನನ್ನ ವಶಕ್ಕೆ ಪಡೆದಿದ್ದಾರೆ. ದೇರಳಕಟ್ಟೆಯಲ್ಲಿ ಎಸ್ಡಿಪಿಐ ಚುನಾವಣಾ ಪ್ರಚಾರ ಸಭೆ ನಡೆಯುತ್ತಿದ್ದು ಪೊಲೀಸರು ಬಿಗಿ ಬಂದೋಬಸ್ತು ಏರ್ಪಡಿಸಿದ್ದಾರೆ.
Mangalore Deralakatte SDPI rally, congress campaign van driver assaulted by SDPI members, police take custody of SDPI youths.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm