ಬ್ರೇಕಿಂಗ್ ನ್ಯೂಸ್
13-05-23 03:36 pm Mangalore Correspondent ಕರಾವಳಿ
ಸುಳ್ಯ, ಮೇ 13: ವಿಧಾನ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಬಿಜೆಪಿಯ ಭದ್ರಕೋಟೆಯಲ್ಲಿ ತನ್ನ ಪಾರಮ್ಯವನ್ನು ಮುಂದುವರಿಸಿದೆ.
ಭಾಗೀರಥಿ ಮುರುಳ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಭಾಗೀರಥಿ ಮುರುಳ್ಯ ಅವರು 93,911 ಮತಗಳನ್ನು, ಜಿ.ಕೃಷ್ಣಪ್ಪ ಅವರು 63,036 ಮತಗಳನ್ನು ಪಡೆದಿದ್ದು, ಭಾಗೀರಥಿ ಮುರುಳ್ಯ ಅವರಿಗೆ ಸುಮಾರು 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ವಿಶೇಷವಾಗಿ ಸುಳ್ಯದಲ್ಲಿ ಮೂವತ್ತು ವರ್ಷಗಳ ಬಳಿಕ ಹೊಸ ಶಾಸಕರು ವಿಧಾನ ಸಭೆ ಪ್ರವೇಶಿಸಲಿದ್ದಾರೆ. ಭಾಗೀರಥಿ ಮುರುಳ್ಯ ಅವರು ಸುಳ್ಯದ ಮೊದಲ ಮಹಿಳಾ ಶಾಸಕರಾಗಲಿದ್ದಾರೆ. ವಿಶೇಷ ಅಂದರೆ ಸುಳ್ಯದಲ್ಲಿ ನೋಟಾ (NOTA)ಸುಮಾರು ಎರಡವರೆ ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಮೂರನೇ ಸ್ಥಾನ ಕಾಯ್ದುಕೊಂಡಿದೆ.
ಸತತವಾಗಿ 35 ವರ್ಷಗಳಿಂದ ಬಿಜೆಪಿಯ ಹಿಡಿತದಲ್ಲಿರುವ ಸುಳ್ಯ ಮೀಸಲು ಕ್ಷೇತ್ರದಲ್ಲಿ ಈ ಸಲ ಎಸ್.ಅಂಗಾರ ಅವರನ್ನು ಬದಲಾವಣೆ ಮಾಡಿ ಹೊಸ ಮುಖಕ್ಕೆ ಟಿಕೆಟ್ ನೀಡಿದ್ದು, ಭಾಗೀರಥಿ ಮುರುಳ್ಯ ಅವರು ಈ ಅವಕಾಶ ಪಡೆದಿದ್ದರು. ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಗುರುವ ಮತ್ತು ಕೊರಗು ದಂಪತಿಯ ಪುತ್ರಿಯಾಗಿರುವ ಭಾಗೀರಥಿ ಅವರು ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸದ ಬಳಿಕ ಮಣಿಕ್ಕಾರ ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ನಾಲ್ಕು ವರ್ಷಗಳ ಕಾಲ ಗೌರವ ಶಿಕ್ಷಕಿಯಾಗಿ ಕಾರ್ಯವನ್ನು ನಿರ್ವಹಿಸಿದ್ದರು.ಸದ್ಯ ಹೈನುಗಾರಿಕೆ, ಟೈಲರಿಂಗ್ ವೃತ್ತಿಯ ಮೂಲಕ ಸ್ವ - ಉದ್ಯೋಗವನ್ನು ಮಾಡುತ್ತಿದ್ದಾರೆ. ಈಗಲೂ ಮನೆಯ ಹೈನುಗಾರಿಕೆಯ ಕೆಲಸ ಇವರದ್ದೇ. ಪ್ರಸ್ತುತ ಮನೆಯಲ್ಲಿ ನಾಲ್ಕು ಹಸುಗಳಿದ್ದು, ಹತ್ತಿರದ ಹಾಲು ಸಂಗ್ರಹಣಾ ಕೇಂದ್ರಕ್ಕೆ ಹಾಲನ್ನು ಮಾರಾಟ ಮಾಡುತ್ತಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮಹಿಳಾ ವಿಭಾಗದ ರಾಷ್ಟ್ರ ಸೇವಿಕಾ ಸಮಿತಿಯ ಪ್ರಾಥಮಿಕ ಶಿಕ್ಷಣ ಪಡೆದ ಭಾಗೀರಥಿ ಮುರುಳ್ಯ ಅವರು ಮಾಣಿಯಡ್ಕ ಶಿಶುಮಂದಿರದ ಸಂಚಾಲಕಿಯಾಗಿದ್ದರು. ಈಗ ಮುರುಳ್ಯ ರಾಷ್ಟ್ರ ಸೇವಿಕಾ ಸಮಿತಿ ಶಾಖೆಯ ಮುಖ್ಯ ಶಿಕ್ಷಕಿಯಾಗಿದ್ದಾರೆ.
ಇವರು 2000ರಲ್ಲಿ ಎಣ್ಮೂರು ತಾ.ಪಂ.ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಳ್ಯ ತಾ.ಪಂ.ಸದಸ್ಯರಾಗಿದ್ದರು. 2005ರಲ್ಲಿ ಜಾಲ್ಸೂರು ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಗೆದ್ದು ದ.ಕ.ಜಿ.ಪಂ. ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ 3 ಅವಧಿಗಳಿಂದ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಮಾತ್ರವಲ್ಲದೇ ಸುಳ್ಯ ಎಲ್.ಡಿ.ಬ್ಯಾಂಕ್ ನಿರ್ದೇಶಕರಾಗಿ, ಜನತಾ ಬಜಾರ್‌ನ ನಿರ್ದೇಶಕರಾಗಿ ದುಡಿದ ಅನುಭವ ಭಾಗೀರಥಿ ಅವರಿಗಿದೆ.
ಮುರುಳ್ಯ ಯುವತಿ ಮಂಡಲದ ಅಧ್ಯಕ್ಷೆಯಾಗಿ, ಯುವಜನ ಸಂಯುಕ್ತ ಸಹಕಾರಿ ಯೂನಿಯನ್‌ನ ಕೋಶಾಧಿಕಾರಿಯಾಗಿದ್ದರು. ಭಾಗೀರಥಿ ಅವರು ಧಾರ್ಮಿಕ ಕ್ಷೇತ್ರದಲ್ಲೂ ಸಕ್ರಿಯರು. ಮಾತ್ರವಲ್ಲದೆ ದ.ಕ.ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷೆಯಾಗಿ, ರಾಜ್ಯ ಎಸ್.ಸಿ.ಮೋರ್ಚಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು, ಪ್ರಸ್ತುತ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆಯಾಗಿ, ಕೊಡಗು ಮತ್ತು ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಭಾರಿಯಾಗಿ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ.
ಅವಿವಾಹಿತರಾಗಿರುವ, 49 ವರ್ಷ ಪ್ರಾಯದ ಭಾಗೀರಥಿ ಅವರಿಗೆ ಮುತ್ತಪ್ಪ ಮತ್ತು ಸುಭಾಷ್ ಎಂಬ ಇಬ್ಬರು ಅಣ್ಣಂದಿರು ಮತ್ತು ಅಕ್ಕ ಲಲಿತಾ, ಹಾಗೂ ತಂಗಿ ಜಾನಕಿ ಮುರುಳ್ಯ ಗ್ರಾ.ಪಂ.ಅಧ್ಯಕ್ಷೆಯಾಗಿದ್ದಾರೆ. ಹಲವು ವರ್ಷದ ಹಿಂದೆ ಭಾಗೀರಥಿ ಅವರ ತಂದೆಯು ಊರಿನ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಬಳಿಕ ತಾಯಿಯೂ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಸಾಮಾನ್ಯ ಕಾರ್ಯಕರ್ತೆಯಾಗಿ ಬಾಲ್ಯದಿಂದಲೇ ನೋವು, ಕಷ್ಟ, ಅವಮಾನ ಅನುಭವಿಸಿ ಬೆಳೆದ ಬಂದ ಭಾಗೀರಥಿ ಮುರುಳ್ಯ ಅವರದ್ದು ಸಾಧು ಸ್ವಭಾವದ ವ್ಯಕ್ತಿತ್ವ. ಪ್ರಸ್ತುತ 35 ವರ್ಷಗಳ ನಂತರದಲ್ಲಿ ಸುಳ್ಯ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿ ಸುಳ್ಯ ಕ್ಷೇತ್ರದ ಶಾಸಕಿಯಾಗಿ ಭಾಗೀರಥಿ ಮುರುಳ್ಯ ಅವರು ಆಯ್ಕೆಯಾಗಿದ್ದಾರೆ.
The BJP candidate from Sullia Assembly constituency in Dakshina Kannada, Bhagirathi Murulya, who brought the seventh consecutive victory for her party in Sullia becomes the first Dalit woman from Coastal Karnataka to enter the Legislative Assembly defeating Congress candidate Krishnappa
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm