ಬ್ರೇಕಿಂಗ್ ನ್ಯೂಸ್
24-05-23 07:24 pm Mangalore Correspondent ಕರಾವಳಿ
ಬಂಟ್ವಾಳ, ಮೇ 24 : ವಿಟ್ಲ ಠಾಣೆ ವ್ಯಾಪ್ತಿಯ ಮಾಣಿ ಜಂಕ್ಷನ್ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆಸಿದ್ದಾರೆ. ಪೂರ್ವ ದ್ವೇಷದಲ್ಲಿ ಎರಡೂ ತಂಡಗಳ ಯುವಕರು ಪರಸ್ಪರ ಹಲ್ಲೆ ನಡೆಸಿದ್ದಾರೆ. ಈ ವೇಳೆ, ಬಿಜೆಪಿ ಕಾರ್ಯಕರ್ತರಿಗೆ ತಲವಾರು ದಾಳಿಯೆಂದು ಸುದ್ದಿ ಹಬ್ಬಿಸಲಾಗಿದ್ದು, ಇದರ ಬೆನ್ನಲ್ಲೇ ಜಿಲ್ಲಾ ಎಸ್ಪಿ ಅಮಾಟೆ ವಿಕ್ರಂ, ತಲವಾರು ದಾಳಿ ನಡೆದಿಲ್ಲ. ಕಟ್ಟಿಗೆಯಿಂದ ಹಲ್ಲೆ ನಡೆಸಿರುವುದೆಂದು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರು ಎನ್ನಲಾದ ಮಾಣಿ ಕೋಡಾಜೆ ನಿವಾಸಿ ಮಹೇಂದ್ರ(26) ಮತ್ತು ಪೆರಾಜೆ ನಿವಾಸಿ ಪ್ರಶಾಂತ್ ನಾಯ್ಕ್(32) ಪುತ್ತೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ವೇಳೆ, ಇನ್ನೊಂದು ತಂಡದ ಅನಂತಾಡಿ ನಿವಾಸಿ ಈಶ್ವರ ಯಾನೆ ಪ್ರವೀಣ್ ಎಂಬವರು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಪ್ರತಿ ದೂರು ನೀಡಿದ್ದಾರೆ.

ಇತ್ತೀಚೆಗೆ ಚುನಾವಣೆಯ ವಿಜಯೋತ್ಸವ ನೆಪದಲ್ಲಿ ಪಟಾಕಿ ಸಿಡಿಸುವ ವಿಚಾರದಲ್ಲಿ ಎರಡು ತಂಡಗಳ ಮಧ್ಯೆ ತಕರಾರು ನಡೆದಿತ್ತು. ಅಂದು ನಡೆದ ಮಾತಿನ ಚಕಮಕಿಯ ಮುಂದುವರಿದ ಭಾಗವಾಗಿ ಹಲ್ಲೆ ನಡೆದಿದೆ ಎನ್ನುವ ಮಾಹಿತಿ ಸ್ಥಳೀಯರಿಂದ ತಿಳಿದುಬಂದಿದೆ. ಇಂದು ಮಧ್ಯಾಹ್ನ ಬಿಜೆಪಿ ಕಾರ್ಯಕರ್ತರಿಬ್ಬರು ಸ್ಕೂಟರಿನಲ್ಲಿ ಮಾಣಿ ಜಂಕ್ಷನ್ನಿಗೆ ಬಂದಿದ್ದಾಗ, ಓಮ್ನಿ ವ್ಯಾನಲ್ಲಿದ್ದ ವಿರೋಧಿ ತಂಡ ಸ್ಕೂಟರಿಗೆ ಡಿಕ್ಕಿಯಾಗಿಸಿ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿ ಸಿಕ್ಕ ಸಲಾಕೆ ಮಾದರಿಯ ಕಟ್ಟಿಗೆಯ ತುಂಡಿನಲ್ಲಿ ಹಲ್ಲೆ ನಡೆಸಿದ್ದು, ಬಿಜೆಪಿ ಕಾರ್ಯಕರ್ತನೊಬ್ಬನ ತಲೆಗೆ ಪೆಟ್ಟು ಬಿದ್ದಿದೆ. ಯುವಕರು ಕಟ್ಟಿಗೆಯಿಂದ ಹಲ್ಲೆ ನಡೆಸುತ್ತಿದ್ದ ಸಣ್ಣ ವಿಡಿಯೋ ತುಣುಕನ್ನು ಪೊಲೀಸರು ಹಂಚಿಕೊಂಡಿದ್ದಾರೆ.

ಘಟನೆ ಸಂಬಂಧಿಸಿ ಸ್ಥಳೀಯರನ್ನು ವಶಕ್ಕೆ ಪಡೆದು ವಿಟ್ಲ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಟ್ಲ ಠಾಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಕಡೆಯಿಂದ ಪ್ರತ್ಯೇಕ ದೂರು ನೀಡಲಾಗಿದೆ. ವಿಟ್ಲ ಪೊಲೀಸರು ಹ್ಲಲೆಗೀಡಾದ ಎರಡೂ ತಂಡಗಳ ಕಾರ್ಯಕರ್ತರಿಂದ ಮಾಹಿತಿ ಪಡೆಯುತ್ತಿದ್ದಾರೆ. ಪೂರ್ವ ದ್ವೇಷದ ಕಾರಣಕ್ಕೆ ಸಣ್ಣ ಮಟ್ಟಿನ ಗಲಾಟೆ ನಡೆದಿದ್ದು, ಅದನ್ನೇ ಕೆಲವರು ತಲವಾರು ದಾಳಿಯೆಂದು ಬಿಂಬಿಸಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
Mangalore Clash between congress and BJP, Bajrang Dal workers at Mani, two injured after attack using sticks. According to earlier reports, a fight broke out between BJP and Congress party workers during the victory celebration of the Bantwal MLA. In retaliation, Congress workers attacked BJP and Bajrang Dal workers today.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm