ಬ್ರೇಕಿಂಗ್ ನ್ಯೂಸ್
01-06-23 07:33 pm Mangalore Correspondent ಕರಾವಳಿ
ಉಳ್ಳಾಲ, ಜೂ.1: ಎರಡು ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ.
ಮೇ 30 ರಂದು ಗರ್ಭಿಣಿ ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ ಸ್ಕ್ಯಾನಿಂಗ್ ಸೆಂಟರ್ ಕೆಲಸಕ್ಕೆ ತೆರಳಿದ್ದ ಜಯರಾಜ್, ಅಲ್ಲಿ ಹಾಜರು ದಾಖಲುಪಡಿಸಿದ್ದರು. ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ನಿಗೂಢವಾಗಿ ಕಣ್ಮರೆಯಾಗಿದ್ದರು. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮನೆ ಮಂದಿ ನಾಪತ್ತೆ ದೂರು ದಾಖಲಿಸಿದ್ದರು.
ಮಾಧ್ಯಮಗಳಲ್ಲಿ ಸುದ್ಧಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ರಾಜ್ಯದಾದ್ಯಂತ ಪೊಲೀಸ್ ಇಲಾಖೆಗಳಿಗೆ ಮಾಹಿತಿ ರವಾನಿಸಿದ್ದು, ಮಂಗಳೂರು ವ್ಯಾಪ್ತಿಯಲ್ಲಿ ಹುಡುಕಾಟ ಆರಂಭಿಸಿದ್ದರು. ಸ್ನೇಹಿತರನ್ನು ವಿಚಾರಣೆಗೆ ಕರೆಸಲಾಗಿತ್ತು. ಈ ಮಧ್ಯೆ ಮೇ 31 ರಂದು ಪಡೀಲ್- ನಂತೂರು ರಸ್ತೆ ಬಳಿ ಜಯರಾಜ್ ಉಪಯೋಗಿಸುವ ಸ್ಕೂಟರ್ ಪತ್ತೆಯಾಗಿತ್ತು. ಅದರಲ್ಲಿ ಮೊಬೈಲ್, ಪಸ್೯, ದಾಖಲೆಗಳೆಲ್ಲ ಸಿಕ್ಕಿದ್ದವು. ಇದರಿಂದ ಮನೆಮಂದಿ ಇನ್ನಷ್ಟು ಚಿಂತೆಗೀಡಾಗಿದ್ದರು. ಇದೀಗ ಬಳ್ಳಾರಿ ಪೊಲೀಸರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಜಯರಾಜ್ ಬಳ್ಳಾರಿಯಲ್ಲಿದ್ದು ಅಲ್ಲಿಗೆ ಬಂದು ಕರೆದೊಯ್ಯಲು ತಿಳಿಸಿದ್ದಾರೆ. ಸಂಬಂಧಿಕರು ಹಾಗೂ ಪೊಲೀಸರು ಬಳ್ಳಾರಿಗೆ ಹೊರಟಿದ್ದಾರೆ.
35-year-old lab technician Jayaraj who went missing from Harekala in Mangalore found in Ballari. Jayaraj (35), a resident of Harekala Panjilaguli, who went missing under mysterious circumstances has been found in Ballari. His family members have gone to Ballari.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm