ಬ್ರೇಕಿಂಗ್ ನ್ಯೂಸ್
18-06-23 05:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 18: ಪೊಲೀಸರ ಎದುರಲ್ಲೇ ವಿದ್ಯಾರ್ಥಿಗಳ ಗುಂಪೊಂದು ಬಸ್ ನಿಲ್ಲಿಸಿ, ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ತೋರಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಕಡೆಯಿಂದ ಚಾರ್ಮಾಡಿ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್‌ಪ್ರೆಸ್ ಬಸ್ಸಿನಲ್ಲಿ ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ, ಬಸ್ಸನ್ನು ಚಾರ್ಮಾಡಿಯಲ್ಲಿ ನಿಲ್ಲಿಸಬೇಕೆಂದು ವಿದ್ಯಾರ್ಥಿಗಳ ಗುಂಪು ಒತ್ತಾಯಿಸಿದ್ದು ಬಸ್ ಕಂಡಕ್ಟರ್ ಜೊತೆ ವಾಗ್ವಾದ ನಡೆಸಿದ್ದಾರೆ. ಬಸ್ಸಿನಲ್ಲಿ ವಾಗ್ವಾದ ನಡೆಯುತ್ತಿದ್ದಾಗ ಪ್ರಯಾಣಿಕರೊಬ್ಬರು ಕಂಡಕ್ಟರ್ ಪರವಾಗಿ ಮಾತನಾಡಿದ್ದಾರೆ. ಇದರಿಂದ ಕುಪಿತರಾದ ವಿದ್ಯಾರ್ಥಿಗಳ ಗುಂಪು ಪ್ರಯಾಣಿಕರನ್ನು ದಬಾಯಿಸಿದ್ದಾರೆ. ಬಳಿಕ ಒಂದು ಸಮುದಾಯದ ಇತರೇ ಯುವಕರನ್ನು ಕರೆಸಿ, ಚಾರ್ಮಾಡಿಯಲ್ಲಿ ಗಲಾಟೆ ನಡೆಸಿದ್ದು ಬಸ್ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ.


ಬಸ್ ನಿಲ್ಲಿಸಿ ಯುವಕರ ತಂಡ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದು ಇದರ ವಿಡಿಯೋವನ್ನು ಇತರೇ ಪ್ರಯಾಣಿಕರು ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ. ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರ ಎದುರಲ್ಲೇ ದಾಂಧಲೆ ನಡೆಸಿದ್ದು ಅವಾಚ್ಯ ಶಬ್ದಗಳಿಂದ ಬಸ್ ಪ್ರಯಾಣಿಕ ಮತ್ತು ನಿರ್ವಾಹಕರನ್ನು ನಿಂದಿಸಿದ್ದಾರೆ.

ಬಸ್ಸಿನಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದು ಬಳಿಕ ಇತರೇ ಯುವಕರ ತಂಡ ಸೇರಿಕೊಂಡು ಬಸ್ ತಡೆದು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದು ಪೊಲೀಸರ ಮುಂದೆಯೇ ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ. ನೈತಿಕ ಪೊಲೀಸ್ ಕೃತ್ಯಕ್ಕೆ ನಿರ್ದಾಕ್ಷಿಣ್ಯ ಕ್ರಮದ ಭರವಸೆ ನೀಡಿದ್ದರೂ, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಲ್ಲ.
Charmadi ghat students fight in the presence of police, passenger assulted, moral policing at Ujre.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm