ಬ್ರೇಕಿಂಗ್ ನ್ಯೂಸ್
19-06-23 12:52 pm Udupi Correspondent ಕರಾವಳಿ
ಉಡುಪಿ, ಜೂನ್ 19: ಆಗುಂಬೆ ಘಾಟ್ ಹೆದ್ದಾರಿ ತಿರುವಿನಲ್ಲಿ ಬಸ್ ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹ ಸವಾರೆಯಾಗಿದ್ದ ಯುವತಿಯೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸಿವಿಲ್ ಎಂಜಿನಿಯರಿಂಗ್ ಮುಗಿಸಿ, ಸಿವಿಲ್ ಕಂಟ್ರಾಕ್ಟರ್ ಜೊತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಶಶಾಂಕ್ (21) ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ಹಿಂಬದಿ ಕುಳಿತಿದ್ದ ಶಶಾಂಕ್ ಅವರ ಅಕ್ಕನ ಮಗಳು ನಿರ್ಮಿತ(19) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಶಶಾಂಕ್ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಈ ವೇಳೆ, ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿತ್ತು. ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು.
ಶಶಾಂಕ್ ಸಹಿತ ಒಂದೇ ಕುಟುಂಬದ 6 ಮಂದಿ ಮೂರು ಬೈಕ್‌ಗಳಲ್ಲಿ ಭಾನುವಾರ ಬೆಳಗ್ಗೆ ತಮ್ಮ ಊರು ಬಾರ್ಕೂರು ಕಡೆಗೆ ಬರುತ್ತಿದ್ದರು. ಶಶಾಂಕ್ ಅವರ ಜತೆ ಹಿಂಬದಿ ಕುಳಿತಿದ್ದ ಅಕ್ಕನ ಮಗಳು ನಿರ್ಮಿತಾ ಅವರಿದ್ದ ಬೈಕ್ ಅಪಘಾತಕ್ಕೀಡಾಗಿದೆ. ನಿರ್ಮಿತಾ ದ್ವಿತೀಯ ಪಿಯುಸಿ ಮುಗಿಸಿ ಪದವಿ ಕಾಲೇಜಿಗೆ ಸೇರಿದ್ದರು ಎಂದು ತಿಳಿದುಬಂದಿದೆ. ಜವರಾಯನ ರೂಪದಲ್ಲಿ ಬಂದಿದ್ದ ಬಸ್ ಡಿಕ್ಕಿಯಾಗಿ ಇಬ್ಬರೂ ಪ್ರಾಣ ಕಳಕೊಂಡಿದ್ದಾರೆ.
Agumbe ghat accident, Udupi girl who suffered injuries died in hospital. The girl who was critically injured in an accident that occurred at Agumbe Ghat in Thirthahalli taluk of Shivamogga district on Sunday June 18, succumbed to injuries at a hospital in Manipal on June 19. Nirimita (19) lost her battle for life on Monday. Shashank (21) had died on the spot in the mishap on Sunday.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm