ಬ್ರೇಕಿಂಗ್ ನ್ಯೂಸ್
24-06-23 10:35 pm Mangalore Correspondent ಕರಾವಳಿ
ಮಂಗಳೂರು, ಜೂನ್ 24: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪೊಲೀಸ್ ಕಮಿಷನರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠರನ್ನು ಕರೆದು ಮಾತುಕತೆ ನಡೆಸಿದ ಬೆನ್ನಲ್ಲೇ ಪೊಲೀಸರು ಮಂಗಳೂರು ನಗರ ವ್ಯಾಪ್ತಿಯಲ್ಲಿ ಶನಿವಾರ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ.
ಶನಿವಾರ ಒಂದೇ ದಿನ ಮಂಗಳೂರು ನಗರ ವ್ಯಾಪ್ತಿಯ ಶಾಲೆ ಮತ್ತು ಕಾಲೇಜು ಪರಿಸರದಲ್ಲಿ ವಿವಿಧ ರೀತಿಯ ಅಂಗಡಿಗಳಿಗೆ ಪೊಲೀಸರು ದಾಳಿ ನಡೆಸಿದ್ದು, 348 ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, 153 ಅಂಗಡಿಗಳಲ್ಲಿ ಗುಟ್ಕಾ ಮತ್ತು ಸಿಗರೇಟ್ ಪತ್ತೆಯಾಗಿದ್ದು, ಅಂತಹ ಅಂಗಡಿಗಳಿಗೆ ತಲಾ 200 ರೂ. ದಂಡ ವಿಧಿಸಿದ್ದಾರೆ. ಅಲ್ಲದೆ, ಕೋಟ್ಪಾ ಕಾಯ್ದೆಯಡಿ ಅಂಗಡಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ.



ಜೂನ್ 23ರ ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪೊಲೀಸ್ ಅಧಿಕಾರಿಗಳನ್ನು ಕರೆದು ಸಭೆ ನಡೆಸಿದ್ದರು. ಮಾದಕ ದ್ರವ್ಯ ಬಳಕೆ, ಅನೈತಿಕ ಪೊಲೀಸ್ ಗಿರಿ ಮತ್ತು ಗೂಂಡಾಗಿರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಮಾದಕ ದ್ರವ್ಯ ಬಳಕೆಯನ್ನು ತಡೆಯಲು ಪೊಲೀಸ್ ಇಲಾಖೆ ಶೈಕ್ಷಣಿಕ ಸಂಸ್ಥೆಗಳು ಮತ್ತು ಜಿಲ್ಲಾಡಳಿತದ ಜೊತೆ ಸೇರಿ ಕಾರ್ಯಾಚರಣೆ ನಡೆಸಲು ಸಚಿವರು ಸೂಚಿಸಿದ್ದರು. ಅಲ್ಲದೆ, ಈ ಜಾಲದಲ್ಲಿ ಪೊಲೀಸ್ ಇಲಾಖೆಯ ಕೆಳ ಹಂತದ ಸಿಬಂದಿ ಕೈಜೋಡಿಸಿರುವುದು ನನ್ನ ಗಮನಕ್ಕೆ ಬಂದಿದ್ದು, ಅಂತಹ ಸಿಬಂದಿ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು.

ಅನೈತಿಕ ಪೊಲೀಸ್ ಗಿರಿಯನ್ನು ತಡೆಯಲು ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಸಮಾಜದ ಯಾವುದೇ ಶಕ್ತಿಯಾಗಲಿ ಕಾನೂನು ಕೈಗೆತ್ತಿಕೊಂಡಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಮತ್ತು ಕ್ಷೇತ್ರದ ಇತರ ನಾಯಕರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಡುವಲ್ಲಿ ಮತ್ತು ಸಾಮರಸ್ಯ ಕದಡುವುದಕ್ಕೆ ಮಾದಕ ದ್ರವ್ಯ ಬಳಕೆ, ಅನೈತಿಕ ಪೊಲೀಸ್ ಗಿರಿಯೇ ಕಾರಣ ಎಂಬುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
348 shops, establishments raided by Mangalore Police, 153 shops with cigarettes and Gutka found. In a special and mass drive against use of Cigarettes and Gutka in vincity of school and colleges, across city totally 348 shops, establishments were searched and found 153 shops with cigarettes or Gutka or both. We have booked all of them under COTPA - Cigarettes and Other Tobacco Products Act and all are fined with Rs 200 reach and been given warning of not to do so.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm