ಬ್ರೇಕಿಂಗ್ ನ್ಯೂಸ್
26-06-23 10:33 pm Mangalore Correspondent ಕರಾವಳಿ
ಮಂಗಳೂರು, ಜೂನ್ 26: ಜೂನ್ 29ರಂದು ನಡೆಯುವ ಬಕ್ರೀದ್ ಹಬ್ಬಕ್ಕೆ ಗೋವುಗಳ ಹತ್ಯೆ ನಡೆಯಬಾರದು. ಅಕ್ರಮ ಗೋಸಾಗಣೆ, ಕುರ್ಬಾನಿ ಹೆಸರಲ್ಲಿ ಗೋವುಗಳನ್ನು ಬಲಿ ಕೊಡುವುದನ್ನು ಬಜರಂಗದಳ ಸಹಿಸಲ್ಲ. ನಾವು ಅದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್. ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕುರ್ಬಾನಿ ಹೆಸರಲ್ಲಿ ಸಾವಿರಾರು ಗೋವುಗಳ ಹತ್ಯೆ ಮಾಡುವ ಸುಳಿವು ಸಿಕ್ಕಿದೆ. ರಾಜ್ಯ ಸರಕಾರ ಮತ್ತು ಆಯಾ ಜಿಲ್ಲಾಡಳಿತ ಈ ಬಗ್ಗೆ ಜಾಗ್ರತೆ ವಹಿಸಬೇಕು. ಅಕ್ರಮ ಸಾಗಣೆ ಹತ್ತಿಕ್ಕುವುದಕ್ಕಾಗಿ ಎಲ್ಲ ಕಡೆಗಳಲ್ಲೂ ಜೂನ್ 30ರ ವರೆಗೆ ಚೆಕ್ ಪೋಸ್ಟ್ ಹಾಕಬೇಕು. ಗೋಸಾಗಾಟ ತಡೆಯಲು ವಿಶೇಷ ಪೊಲೀಸ್ ತಂಡ ರಚಿಸಬೇಕು ಎಂದು ಆಗ್ರಹಿಸಿದರು.
ಕುರಿ, ಕೋಳಿಯನ್ನು ಬಲಿ ಕೊಡಲಿ. ಆದರೆ, ಹಿಂದುಗಳು ಪೂಜ್ಯ ಭಾವದಲ್ಲಿ ನಂಬುವ ಗೋವನ್ನು ಕಡಿಯುವುದನ್ನು ನಾವು ಸಹಿಸಲ್ಲ. ಬಕ್ರೀದ್ ಸಂದರ್ಭದಲ್ಲಿ ರಾಜ್ಯ ಸರಕಾರ ಗೋಹತ್ಯೆಗೆ ಅವಕಾಶ ಕೊಟ್ಟರೆ, ಅದನ್ನು ತಡೆಯುವುದಕ್ಕೆ ಬಜರಂಗದಳಕ್ಕೆ ಗೊತ್ತಿದೆ. ಆಮೂಲಕ ಆಗಬಹುದಾದ ಅಹಿತಕರ ಘಟನೆಗಳಿಗೆ ರಾಜ್ಯ ಸರಕಾರ ಅವಕಾಶ ನೀಡಬಾರದು ಎಂದವರು ಪರೋಕ್ಷ ಎಚ್ಚರಿಕೆ ನೀಡಿದರು. ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ ಅವರಿಗೆ ಕನಸಿನಲ್ಲೂ ಬಜರಂಗದಳವೇ ಕನವರಿಕೆ ಆಗುತ್ತದೆ. ಸಚಿವ ಸ್ಥಾನದಲ್ಲಿದ್ದು ಸಂಘಟನೆ ಬಗ್ಗೆ ಹಗುರವಾಗಿ ಮಾತನಾಡದೇ ಇರುವುದು ಒಳ್ಳೆಯದು. ಸೂಕ್ತ ಸಂದರ್ಭದಲ್ಲಿ ಅವರಿಗೆ ಬಜರಂಗಳ ತಕ್ಕ ಉತ್ತರ ನೀಡಲಿದೆ ಎಂದರು.
ಮಂಗಳೂರಿನಲ್ಲಿ ಆಂಯಿ ಕಮ್ಯುನಲ್ ವಿಂಗ್ ರಚಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಸುನಿಲ್, ಅಂಥ ವಿಂಗ್ ರಚಿಸುವುದಕ್ಕೆ ಸಂತೋಷ ಇದೆ. ಆದರೆ, ಈ ವಿಂಗ್ ಮೂಲಕ ಗೋಹತ್ಯೆ, ಲವ್ ಜಿಹಾದ್ ನಡೆಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹ ಮಾಡುತ್ತೇವೆ. ಈ ಕೆಲಸಗಳನ್ನು ಪೊಲೀಸ್ ಇಲಾಖೆ ಮಾಡಿದರೆ, ಸಮಾಜದಲ್ಲಿ ಶಾಂತಿ, ಸಾಮರಸ್ಯ ನೆಲೆಸುತ್ತದೆ ಎಂದರು.
Do not sacrifice cows on Bakrid warns Bajrang Dal in Mangalore in the name of Bakrid. Cow trafficking and transporting cows illegally will not be tolerated said Sunil K R in Mangalore.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm