ಬ್ರೇಕಿಂಗ್ ನ್ಯೂಸ್
03-07-23 05:55 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಮಂಗಳೂರು ನಗರದಲ್ಲಿ ಭಾರೀ ಮಳೆಯಾಗಿದ್ದು ರಸ್ತೆಗಳಲ್ಲಿ ಮಳೆ ನೀರು ಶೇಖರಗೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಪಂಪ್ವೆಲ್ ಮೇಲ್ಸೇತುವೆ ಅಡಿಭಾಗದಲ್ಲಿ ನೀರು ತುಂಬಿಕೊಂಡಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
ಪಂಪ್ವೆಲ್ ಮೇಲ್ಸೇತುವೆಯಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ತೊಂದರೆ ಎದುರಾಗುತ್ತದೆ. ಮಂಗಳೂರು ನಗರಕ್ಕೆ ಎಂಟ್ರಿ ಕೊಡುವ ಜಾಗದಲ್ಲೇ ನಾಲ್ಕು ಕಡೆಯಿಂದ ಸೇರುವ ಮಳೆನೀರು ಕಾಲುವೆಯಲ್ಲಿ ಹರಿಯಲು ಸಾಧ್ಯವಾಗದೆ ರಸ್ತೆಗೆ ಬಂದು ನಿಂತಿದೆ. ಸೇತುವೆ ಅಡಿಭಾಗದಲ್ಲಿ ಭಾರೀ ಪ್ರಮಾಣದ ನೀರು ನಿಂತಿದ್ದು ವಾಹನಗಳು ಅತ್ತಿತ್ತ ಸಾಗಲು ಸಾಧ್ಯವಾಗದೆ ಸಿಕ್ಕಿಬಿದ್ದಿವೆ.









ಸೋಮವಾರ ಮಧ್ಯಾಹ್ನ 3 ಗಂಟೆಯಿಂದ ಜಡಿಮಳೆ ಆಗಿದ್ದು ನಗರದ ಎಲ್ಲ ಕಡೆ ರಸ್ತೆಯಲ್ಲಿ ಪೂರ್ತಿ ನೀರು ತುಂಬಿಕೊಂಡಿದೆ. ಸಂಜೆಯ ವೇಳೆಗೆ, ಮಳೆನೀರು ಪಂಪ್ವೆಲ್ ಸೇತುವೆಯ ಅಡಿಭಾಗವನ್ನು ಆವರಿಸಿದ್ದು ವಾಹನಗಳು ರಸ್ತೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿವೆ. ಕೆಲವು ವಾಹನಗಳು ನೀರಿನಲ್ಲಿ ಸಾಗಲೆತ್ನಿಸಿ ಸಿಕ್ಕಿಬಿದ್ದಿವೆ. ಮಂಗಳೂರು ನಗರ ಭಾಗದಿಂದ ತಲಪಾಡಿ, ತೊಕ್ಕೊಟ್ಟು, ಬಿಸಿ ರೋಡ್ ಸಾಗುವ ಬಸ್, ಇನ್ನಿತರ ವಾಹನಗಳು ಸಿಕ್ಕಿಬಿದ್ದು ನೀರು ಇಳಿಯದೆ ಅಲ್ಲಿಂದ ಸಾಗುವಂತಿಲ್ಲ ಎನ್ನುವ ಸ್ಥಿತಿಗೆ ಒಳಗಾಗಿದೆ. ಸಾರ್ವಜನಿಕರು ಮೇಲ್ಸೇತುವೆಯ ಅವೈಜ್ಞಾನಿಕ ಕಾಮಗಾರಿಗೆ ಹಿಡಿಶಾಪ ಹಾಕಿದ್ದಾರೆ.
Rain in Mangalore, Pumpwell submerged with water, heavy traffic block due to incessant rains. The floodwater beneath the Pumpwell flyover has risen to knee height, blocking the route towards Mangaluru and vehicles heading to the city are stuck at the junction for hours.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm