ಬ್ರೇಕಿಂಗ್ ನ್ಯೂಸ್
04-07-23 10:14 pm Mangalore Correspondent ಕರಾವಳಿ
ಉಳ್ಳಾಲ, ಜು.4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಮನೆ ಸಮೀಪದ ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯತಪ್ಪಿ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ(52) ಮೃತ ವ್ಯಕ್ತಿ. ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಕೆಲಸ ಮುಗಿಸಿ ಇಂದು ಸಂಜೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮನೆ ಸಂಪರ್ಕದ ಮೋರಿ ದಾಟುತ್ತಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ.
ಧಾರಾಕಾರ ಮಳೆ ಸುರಿಯುತ್ತಿದ್ದು ಮಳೆ ನೀರಲ್ಲಿ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೋರಿಯಲ್ಲಿ ಬಿದ್ದಿದ್ದ ಸುರೇಶ್ ಅವರನ್ನ ಪಕ್ಕದ ಮನೆಯ ಮಾಜಿ ಸೋಮೇಶ್ವರ ಗ್ರಾಮ ಪಂಚಾಯತ್ ಸದಸ್ಯ ಪ್ರೇಮಾನಂದ ಮತ್ತು ಅವರ ಸಂಬಂಧಿ ಧನರಾಜ್ ಅವರು ಮೇಲಕ್ಕೆತ್ತಿ ಆಸ್ಪತ್ರೆ ಸಾಗಿಸುವಾಗಲೇ ಸುರೇಶ್ ಅವರು ಮೃತಪಟ್ಟಿದ್ದಾರೆ.
ಮೃತ ಸುರೇಶ್ ಅವರ ಪತ್ನಿ ಬೀಡಿ ಕಟ್ಟುತ್ತಿದ್ದು, ಹಿರಿಯ ಮಗಳಿಗೆ ಇತ್ತೀಚೆಗಷ್ಟೆ ಮದುವೆ ಆಗಿತ್ತು. ಕಿರಿಯ ಮಗಳು ಅವಿವಾಹಿತಳಾಗಿದ್ದು ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ತಂದೆಯೇ ಅಕಾಲಿಕ ಮರಣವನ್ನಪ್ಪಿದ್ದು ಬಡ ಅಶಕ್ತ ಕುಟುಂಬಕ್ಕೆ ದಿಕ್ಕೇ ಕಾಣದಂತಾಗಿದೆ.
Heavy rains in Mangalore, Man dies falling into water filled hole while his way home in Ullal. The deceased has been identified as Suresh Gatti (52). He was a painter by profession. Due to heavy rains the pit near by was filled with water.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm